ಬ್ರೇಕಿಂಗ್ ನ್ಯೂಸ್
22-06-26 03:44 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 22: ವಿಧಾನ ಪರಿಷತ್ ಚುನಾವಣೆಗೂ ಮುನ್ನ ಕುದುರೆ ವ್ಯಾಪಾರದ ಸುಳಿವು ಸಿಕ್ಕಿತ್ತು. ಬಿಜೆಪಿ ನಾಯಕರ ಅಸಡ್ಡೆಯೇ ಪಕ್ಷಕ್ಕೆ ಮುಳುವಾಯ್ತು. ರಾಜ್ಯ ನಾಯಕರ ಉದಾಸೀನತೆಯೇ ಸೋಲಿಗೆ ಪ್ರಮುಖ ಕಾರಣ ಎಂದು ಅಡ್ಡ ಮತದಾನ ವಿಚಾರದಲ್ಲಿ ಮಾಜಿ ಸಿಎಂ ಡಿವಿ ಸದಾನಂದ ಗೌಡ ಚಾಟಿ ಬೀಸಿದ್ದಾರೆ. ಕಾಂಗ್ರೆಸ್‌ನ ಐದನೇ ಅಭ್ಯರ್ಥಿಯ ಗೆಲುವಿನ ಹಿಂದೆ ನಡೆದಿದ್ದ 'ಅಪಾರ್ಟ್‌ಮೆಂಟ್ ರಹಸ್ಯ ಸಭೆ'ಗಳ ಕುರಿತು ಸ್ಫೋಟಕ ವಿಷಯ ಬಹಿರಂಗ ಪಡಿಸಿದ್ದು ಆಂತರಿಕ ಭಿನ್ನಮತಕ್ಕೆ ಮತ್ತಷ್ಟು ಉಪ್ಪು ಸುರಿದಿದ್ದಾರೆ.
ಜೂನ್ 13 ರಂದು ನನಗೆ ಹೆಬ್ಬಾಳದ ಪ್ರೆಸ್ಟೀಜ್ ಅಪಾರ್ಟ್‌ಮೆಂಟ್‌ನಿಂದ ಒಂದು ಕರೆ ಬಂದಿತ್ತು. ಕಾಂಗ್ರೆಸ್‌ನ ನಾಲ್ಕು ಪ್ರಮುಖ ನಾಯಕರು ಮತ್ತು ಬಿಜೆಪಿಯ ಕೆಲ ಶಾಸಕರು ಅಲ್ಲಿ ರಹಸ್ಯ ಸಭೆ ನಡೆಸುತ್ತಿದ್ದಾರೆ ಎಂದು ಆ ವ್ಯಕ್ತಿ ಮಾಹಿತಿ ನೀಡಿದರು. ನಾನು ತಕ್ಷಣವೇ ಅಲರ್ಟ್ ಆಗಿ ನಮ್ಮ ಪಕ್ಷದ ರಾಜ್ಯಾಧ್ಯಕ್ಷರಿಗೆ ಮತ್ತು ಆರ್. ಅಶೋಕ್ ಅವರಿಗೆ ಕರೆ ಮಾಡಿದೆ. ಆದರೆ ಇಬ್ಬರೂ ಸಿಗಲಿಲ್ಲ. ತಕ್ಷಣವೇ ರಾಜ್ಯ ಪ್ರಧಾನ ಕಾರ್ಯದರ್ಶಿಯೊಬ್ಬರಿಗೆ ಕರೆ ಮಾಡಿ ವಿಷಯ ತಿಳಿಸಿದೆ. ಅವರು 'ಸರಿ ನೋಡ್ತೇನೆ' ಎಂದರು. ಆದರೆ ಮರುದಿನವೇ ಅದೇ ಪ್ರೆಸ್ಟೀಜ್ ಅಪಾರ್ಟ್‌ಮೆಂಟ್ ಪಕ್ಕದ ಮತ್ತೊಂದು ಅಪಾರ್ಟ್‌ಮೆಂಟ್‌ನಲ್ಲಿ ಎರಡನೇ ಸಭೆಯೂ ನಡೆಯಿತು! ಆಗಲೂ ನಾನು ಅದೇ ಪ್ರಧಾನ ಕಾರ್ಯದರ್ಶಿಗೆ ಕರೆ ಮಾಡಿ ಎಚ್ಚರಿಸಿದೆ. ಆದರೆ ನಮ್ಮವರು ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಹೇಳಿದ್ದಾರೆ.
ವಿಪರ್ಯಾಸ ಎಂದರೆ, ಅಡ್ಡಮತದಾನ ನಡೆದು ಪಕ್ಷಕ್ಕೆ ಭಾರಿ ಮುಖಭಂಗವಾದ ಮೇಲೆ ಅದೇ ಪ್ರಧಾನ ಕಾರ್ಯದರ್ಶಿ ಡಿವಿಎಸ್ ಅವರಿಗೆ ಕರೆ ಮಾಡಿ, "ಅಣ್ಣ ನೀವು ಹೇಳಿದ ಹಾಗೆಯೇ ಆಯ್ತಲ್ಲ!' ಎಂದಿದ್ದರು. ಅದಕ್ಕೆ ಸದಾನಂದ ಗೌಡರು, "ಹೊಳೆ ದಾಟಿದ ಮೇಲೆ ಮತ್ತೇನು ಚರ್ಚೆ?" ಎಂದು ಬೇಸರದಿಂದಲೇ ಸುಮ್ಮನಾಗಿದ್ದಾರೆ.
ಇದೇ ವೇಳೆ, ರಾಜಕೀಯ ಜಿದ್ದಾಜಿದ್ದಿಗೆ ಧರ್ಮಸ್ಥಳದ ಹೆಸರನ್ನು ಎಳೆದು ತರುತ್ತಿರುವುದರ ಕುರಿತು ಡಿವಿಎಸ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. "ನಾನು ರಾಜ್ಯಾಧ್ಯಕ್ಷರಿಗೆ ಕರೆ ಮಾಡಿ ಸ್ಪಷ್ಟವಾಗಿ ಹೇಳಿದ್ದೇನೆ. ಯಾವುದೇ ಕಾರಣಕ್ಕೂ ಧರ್ಮದ ಕ್ಷೇತ್ರಕ್ಕೆ ರಾಜಕೀಯವನ್ನು ತೆಗೆದುಕೊಂಡು ಹೋಗಬೇಡಿ. ದೇವರ ಹತ್ತಿರವೂ ರಾಜಕೀಯ ಹೋಗುವುದಾದರೆ ಎಲ್ಲವನ್ನೂ ದೇವರಿಗೇ ಬಿಟ್ಟುಬಿಡಿ. ದೇವರೇ ರಾಜಕೀಯ ಮಾಡಲಿ! ನಮ್ಮಿಂದ ರಾಜಕೀಯ ಮಾಡಲು ಆಗದಿದ್ದರೆ ದೇವರಿಗೇ ಬಿಟ್ಟುಬಿಡಿ ಎಂದು ಮಾರ್ಮಿಕವಾಗಿ ಟಾಂಗ್ ನೀಡಿದ್ದಾರೆ.
ಕಾರ್ಯಕರ್ತರ ಅಸ್ತಿತ್ವ ಉಳಿಸಿ
"ರಾಜ್ಯ ನಾಯಕರು ಕೇವಲ ತಮ್ಮ ಸ್ವಂತ ಅಸ್ತಿತ್ವ ಉಳಿಸಿಕೊಳ್ಳಲು ಶ್ರಮ ಹಾಕುತ್ತಿದ್ದೀರಿ. ಮೊದಲು ಪಕ್ಷಕ್ಕಾಗಿ ದುಡಿಯುವ ಕಾರ್ಯಕರ್ತರ ಅಸ್ತಿತ್ವ ಉಳಿಸಿ. ಇಂದು ಬೀದಿಯಲ್ಲಿ ನಮಗೆ ಕಾರ್ಯಕರ್ತರು ಬೈಯುತ್ತಿದ್ದಾರೆ," ಎಂದು ರಾಜ್ಯ ನಾಯಕತ್ವದ ವಿರುದ್ಧ ಸದಾನಂದ ಗೌಡರು ಹರಿಹಾಯ್ದಿದ್ದಾರೆ.
ಪಕ್ಷದ ಒಳಜಗಳದ ಬಗ್ಗೆ ಮಾತನಾಡಿದ ಅವರು, "ಸಮಿತಿಗಳನ್ನೇನೋ ಮಾಡಿದ್ದೀರಿ ಸರಿ. ಆದರೆ ಕೋರ್ ಕಮಿಟಿ ಸದಸ್ಯರ ಜೊತೆ ಚರ್ಚೆ ಮಾಡಿ ತೀರ್ಮಾನ ತಗೊಂಡಿದ್ದೀರಾ? ಕನಿಷ್ಠ ಒಂದು ಅಭಿಪ್ರಾಯವನ್ನಾದರೂ ಕೇಳಿದ್ದೀರಾ? ಯಾರನ್ನೂ ಸಮಾಲೋಚನೆ ಮಾಡದೇ ಎಲ್ಲವನ್ನೂ ಏಕಪಕ್ಷೀಯವಾಗಿ ಮಾಡುತ್ತಿರುವುದರ ಪರಿಣಾಮವೇ ಇಂದಿನ ಸೋಲು. ನಮ್ಮ ಒಳಜಗಳ ಮತ್ತು ಆಂತರಿಕ ವ್ಯವಸ್ಥೆ ಸರಿ ಇಲ್ಲದ ಕಾರಣಕ್ಕೇ ನಾವು ಸೋತಿದ್ದೇವೆ," ಎಂದು ಒಪ್ಪಿಕೊಂಡಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm