ಬ್ರೇಕಿಂಗ್ ನ್ಯೂಸ್
23-06-26 05:58 pm HK News Staffer ಕರ್ನಾಟಕ
ಬೆಂಗಳೂರು , ಜೂ.23: ರಾಜ್ಯ ಬಿಜೆಪಿಯಲ್ಲಿ ಅಡ್ಡಮತದಾನ ವಿವಾದದ ಕಾವು ಮುಂದುವರಿದಿರುವ ನಡುವೆಯೇ, ಈ ವಿಚಾರಕ್ಕೆ ಪವಿತ್ರ ಕ್ಷೇತ್ರ ಧರ್ಮಸ್ಥಳವನ್ನು ಎಳೆದು ತರಲು ನಡೆದ ಪ್ರಯತ್ನಕ್ಕೆ ಪಕ್ಷದ ಕೇಂದ್ರ ನಾಯಕತ್ವ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ ಎನ್ನಲಾಗಿದೆ. ಅಡ್ಡಮತದಾನದ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಹಾಗೂ ಶಾಸಕಾಂಗ ಪಕ್ಷದ ಸಭೆ ನಡೆಸುವ ಚರ್ಚೆ ನಡೆದಿದ್ದರೂ, ಬಿಜೆಪಿ ಹೈಕಮಾಂಡ್ ಇದಕ್ಕೆ ಸ್ಪಷ್ಟ ವಿರೋಧ ವ್ಯಕ್ತಪಡಿಸಿ ‘ರೆಡ್ ಸಿಗ್ನಲ್’ ನೀಡಿದೆ.
ಮೂಲಗಳ ಪ್ರಕಾರ, ಅಡ್ಡಮತದಾನ ನಡೆದಿರುವುದಕ್ಕೆ ರಾಜ್ಯ ನಾಯಕತ್ವದ ನಿರ್ಲಕ್ಷ್ಯ ಮತ್ತು ಸಂಘಟನಾ ವೈಫಲ್ಯವೇ ಪ್ರಮುಖ ಕಾರಣ ಎಂದು ವರಿಷ್ಠರು ನೇರವಾಗಿ ಪ್ರಶ್ನಿಸಿದ್ದಾರೆ. ಪಕ್ಷದ ಶಾಸಕರ ಮೇಲೆ ಸೂಕ್ತ ಹಿಡಿತ ಸಾಧಿಸುವಲ್ಲಿ ಹಾಗೂ ಅವರ ಚಟುವಟಿಕೆಗಳ ಮೇಲೆ ನಿಗಾ ಇಡುವಲ್ಲಿ ರಾಜ್ಯ ನಾಯಕತ್ವ ವಿಫಲವಾಗಿದೆ ಎಂಬ ಅಭಿಪ್ರಾಯವನ್ನು ಹೈಕಮಾಂಡ್ ವ್ಯಕ್ತಪಡಿಸಿದೆ ಎನ್ನಲಾಗಿದೆ.
“ನಿಮ್ಮ ತಪ್ಪು ಮತ್ತು ಸಂಘಟನಾ ವೈಫಲ್ಯದಿಂದಲೇ ಅಡ್ಡಮತದಾನಕ್ಕೆ ಅವಕಾಶ ಸಿಕ್ಕಿದೆ. ಶಾಸಕರ ಅಸಮಾಧಾನವನ್ನು ಸರಿಯಾದ ಸಮಯದಲ್ಲಿ ಗುರುತಿಸಲು ಸಾಧ್ಯವಾಗಲಿಲ್ಲ. ನಿಮ್ಮದೇ ಶಾಸಕರನ್ನು ಕಾಂಗ್ರೆಸ್ ನಾಯಕರು ಸಂಪರ್ಕಿಸಲು ಅವಕಾಶ ಸಿಕ್ಕಿದ್ದರೆ ಅದರ ಹೊಣೆಗಾರಿಕೆಯಿಂದ ನೀವು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ” ಎಂಬ ಸಂದೇಶವನ್ನು ವರಿಷ್ಠರು ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಇದರ ಜೊತೆಗೆ ಧರ್ಮಸ್ಥಳದಂತಹ ಪವಿತ್ರ ಧಾರ್ಮಿಕ ಕ್ಷೇತ್ರವನ್ನು ರಾಜಕೀಯ ವಿವಾದಗಳಿಗೆ ಎಳೆದು ತರುವುದರಿಂದ ಪಕ್ಷಕ್ಕೆ ಮತ್ತಷ್ಟು ಮುಜುಗರ ಉಂಟಾಗಬಹುದು ಎಂದು ಹೈಕಮಾಂಡ್ ಎಚ್ಚರಿಸಿದೆ. ಈಗಾಗಲೇ ಉಂಟಾಗಿರುವ ಹಾನಿಯನ್ನು ಸರಿಪಡಿಸುವತ್ತ ಗಮನಹರಿಸಬೇಕು ಹೊರತು, ಆಣೆ-ಪ್ರಮಾಣ ಅಥವಾ ಪ್ರತಿಜ್ಞಾ ರಾಜಕೀಯದ ಮೂಲಕ ಹೊಸ ವಿವಾದಗಳಿಗೆ ಕಾರಣವಾಗಬಾರದು ಎಂದು ರಾಜ್ಯ ನಾಯಕರಿಗೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.
ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಿಸುವ ಮೂಲಕ ಅಡ್ಡಮತದಾನದ ಸತ್ಯಾಸತ್ಯತೆ ಬಹಿರಂಗಪಡಿಸುವ ಚರ್ಚೆಗಳು ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿದ್ದವು. ಆದರೆ ಈ ಬೆಳವಣಿಗೆ ಪಕ್ಷದ ಅಧಿಕೃತ ನಿಲುವಿಗೆ ವಿರುದ್ಧವಾಗಿದ್ದು, ಧಾರ್ಮಿಕ ಕ್ಷೇತ್ರಗಳ ಹೆಸರನ್ನು ರಾಜಕೀಯ ಸಂಘರ್ಷಗಳಲ್ಲಿ ಬಳಸಬಾರದು ಎಂಬ ಸಂದೇಶವನ್ನು ಹೈಕಮಾಂಡ್ ಸ್ಪಷ್ಟವಾಗಿ ನೀಡಿದೆ ಎಂದು ಪಕ್ಷದ ವಲಯಗಳು ಹೇಳುತ್ತಿವೆ.
ವರಿಷ್ಠರ ಈ ಕಠಿಣ ನಿಲುವಿನ ಬಳಿಕ ರಾಜ್ಯ ಬಿಜೆಪಿ ನಾಯಕರು ಧರ್ಮಸ್ಥಳದಲ್ಲಿ ನಡೆಸಲು ಉದ್ದೇಶಿಸಿದ್ದ ಆಣೆ-ಪ್ರಮಾಣ ಕಾರ್ಯಕ್ರಮ ಹಾಗೂ ಶಾಸಕಾಂಗ ಪಕ್ಷದ ಸಭೆಯ ವಿಚಾರದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ಹೀಗಾಗಿ ಅಡ್ಡಮತದಾನ ವಿವಾದಕ್ಕೆ ಧರ್ಮಸ್ಥಳವನ್ನು ಕೇಂದ್ರಬಿಂದುವಾಗಿಸುವ ಯತ್ನಕ್ಕೆ ಸದ್ಯಕ್ಕೆ ತೆರೆ ಬಿದ್ದಂತಾಗಿದೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm