ಬ್ರೇಕಿಂಗ್ ನ್ಯೂಸ್
02-07-26 09:19 pm HK News Staffer ಕರ್ನಾಟಕ
ಬೆಂಗಳೂರು, ಜುಲೈ 2: ಕಳೆದ ನಾಲ್ಕೈದು ವರ್ಷಗಳಿಂದ 25 ಲಕ್ಷಕ್ಕೂ ಹೆಚ್ಚು ಬಾಂಗ್ಲಾದೇಶದ ಪ್ರಜೆಗಳು ಕರ್ನಾಟಕದಲ್ಲಿ ವಾಸಿಸುತ್ತಿದ್ದು, ಸೂಕ್ತ ಪರಿಶೀಲನೆ ನಡೆಸದೆ ಅವರನ್ನು ಮತದಾರರ ಪಟ್ಟಿಗೆ ಸೇರಿಸಲಾಗುತ್ತಿದೆ ಎಂಬ ಆರೋಪ ಜೆಡಿಎಸ್ ಕಡೆಯಿಂದ ಕೇಳಿಬಂದಿದೆ. ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾದೇಶದ ಪ್ರಜೆಗಳು ಅಕ್ರಮವಾಗಿ ನೆಲೆಸಿದ್ದು, ಅವರಿಗೆ ಮತದಾನದ ಹಕ್ಕು ನೀಡುತ್ತಿದ್ದಾರೆ. ಈಗ ಎಸ್ಐಆರ್ ನೆಪದಲ್ಲಿ ಸರ್ಕಾರದ ಬಿಎಲ್ಓಗಳು ಸಮುದಾಯ ಭವನದಲ್ಲಿ ಒಂದು ಕೋಮಿನ ಮತದಾರರನ್ನು ಸೇರಿಸಿ ಮೃತಪಟ್ಟಿಗೆ ಸೇರಿಸುತ್ತಿದ್ದಾರೆ. ಸಿಎಂ ಡಿಕೆಶಿ ಅವರ ಮುತುವರ್ಜಿಯಿಂದ ಇಂತಹ ಕೆಲಸ ಆಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಬಿಎಲ್ಒಗಳು ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಆಯೋಗದ ಗಣತಿ ನಮೂನೆಗಳನ್ನು ವಿತರಿಸುವ ಬದಲಿಗೆ, ಸಮುದಾಯ ಭವನದಲ್ಲೇ ಕುಳಿತು ವಿತರಣೆ ಮಾಡುತ್ತಿದ್ದಾರೆ. ಇದು ಮನೆ ಮನೆ ಪರಿಶೀಲನೆಯ ಮೂಲ ಉದ್ದೇಶವನ್ನೇ ಬುಡಮೇಲು ಮಾಡುತ್ತದೆ ಎಂಬ ಆರೋಪಗಳು ಕೇಳಿಬಂದಿವೆ. ಈ ಎಲ್ಲ ಅಕ್ರಮಗಳಿಗೆ ಮುಖ್ಯಮಂತ್ರಿ ಪ್ರಮುಖ ಕಾರಣರಾಗಿದ್ದು, ಈ ಹಿಂದೆ ಕೂಡ ಇಂತಹ ಅಕ್ರಮ ರಾಜಕೀಯ ಚಟುವಟಿಕೆಗಳಲ್ಲಿ ಯಶಸ್ವಿಯಾಗಿರುವ ಇತಿಹಾಸ ಅವರಿಗಿದೆ. ಈ ವಿಷಯವನ್ನು ಗೌರವಾನ್ವಿತ ಮುಖ್ಯ ಚುನಾವಣಾ ಆಯುಕ್ತರು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಅಲ್ಲದೆ, ಕೆಲವು ಕಾರ್ಮಿಕರ ಫೋಟೋಗಳನ್ನು ಅವರ ಒತ್ತಾಯವಿಲ್ಲದೆ ತೆಗೆದು, ಮತದಾರರ ಪಟ್ಟಿಗೆ ಸೇರಿಸಲಾಗುತ್ತಿದೆ ಹಾಗೂ ಸಹಕರಿಸದಿದ್ದರೆ ಸರ್ಕಾರಿ ಕಲ್ಯಾಣ ಯೋಜನೆಗಳನ್ನು ಸ್ಥಗಿತಗೊಳಿಸುವುದಾಗಿ ಬೆದರಿಕೆ ಹಾಕಲಾಗುತ್ತಿದೆ ಎಂಬ ಆರೋಪಗಳನ್ನೂ ಜೆಡಿಎಸ್ ಮಾಡಿದೆ. ರಾಮನಗರದಲ್ಲಿ SIR ಪ್ರಕ್ರಿಯೆ ಲೋಪ ಕಂಡುಬಂದ ಬಗ್ಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟ್ವೀಟ್ ಕೂಡ ಮಾಡಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ರಾಮನಗರದಲ್ಲಿ ಬಿಎಲ್ಒಗಳು ಸಾವಿರಾರು ಜನರನ್ನ ಸಮುದಾಯ ಭವನದಲ್ಲೇ ಕರೆಸಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಕಳ್ಳ ಮತದಾರರನ್ನ ಒಂದೇ ಕಡೆ ಕೂರಿಸಿ ಎಸ್ಐಆರ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನಮ್ಮನ್ನ ರಾಮನಗರದಿಂದ ಹೊರಹಾಕುವ ಬಗ್ಗೆ ಮಾತಾಡಿದ್ದಾರೆ. ರಾಮನಗರದ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ನಮ್ಮ ಕುಟುಂಬದ ಮತ ಇದೆ. ನಮ್ಮನ್ನ ಹೊರ ಹಾಕುವುದಕ್ಕೆ ಆಗಲ್ಲ. ಬೇರೆ ರಾಜ್ಯದ ಬಗ್ಗೆ ಮಾತಾಡುತ್ತಾರೆ. ಇದು ಅಧಿಕಾರಿಗಳ ವೈಪಲ್ಯ. ಸಿಎಂ ಪ್ರಭಾವ ಬೀರಿ ಕೆಲಸ ಮಾಡಿಸುತ್ತಿದ್ದಾರೆ. ಇದರ ಬಗ್ಗೆ ಚುನಾವಣಾ ಆಯೋಗ ಕೂಡಲೇ ಗಮನ ಹರಿಸಬೇಕು. ಚುನಾವಣಾ ಆಯೋಗಕ್ಕೆ ಪತ್ರ ಬರೆಯುತ್ತೇನೆ, ಗೃಹ ಸಚಿವರ ಗಮನಕ್ಕೂ ತರುತ್ತೇನೆ ಎಂದಿದ್ದಾರೆ.
ಮುಖ್ಯಮಂತ್ರಿಗಳೇ ಕಳ್ಳ ಮತದಾನ ಸೃಷ್ಟಿ ಮಾಡುತ್ತಿದ್ದಾರೆ. ಇಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಇದು ಸರ್ಕಾರದ ದುರ್ಬಳಕೆ. ಈ ಕೆಲಸ ನಿರ್ವಹಣೆ ಮಾಡುತ್ತಿರುವುದು ರಾಜ್ಯ ಸರ್ಕಾರ. ಪ್ರಾಮಾಣಿಕವಾಗಿ ಎಸ್ಐಆರ್ ಮಾಡಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದರು.
ಮತದಾರರ ಲಿಸ್ಟ್ನಿಂದ ಹೊರ ಹೋದರೆ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗುತ್ತೀರಿ. ಇಂತಹ ದೊಡ್ಡ ಜಾಹೀರಾತಿನ ಮೂಲಕ ಆಕರ್ಷಿಸುತ್ತಿದ್ದಾರೆ. ಕಾಂಗ್ರೆಸ್ ಮುಖಂಡರು ಎಸ್ಐಆರ್ ಬಗ್ಗೆ ಕಟುವಾಗಿ ಮಾತಾಡುತ್ತಿದ್ದಾರೆ. ಇದು ಸಿಎಂ ಪ್ರೇರಣೆ ಇರಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದರು.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm