ಬ್ರೇಕಿಂಗ್ ನ್ಯೂಸ್
11-07-26 11:42 am HK News Staffer ಕರ್ನಾಟಕ
ಬೆಂಗಳೂರು, ಜುಲೈ 11: ಸಾಂಸ್ಕೃತಿಕ ನಗರಿ ಮೈಸೂರಿನ ದಸರಾ ಮಹೋತ್ಸವದಲ್ಲಿ ಕರಾವಳಿಯ ಜಾನಪದ ಕ್ರೀಡೆ ಕಂಬಳ ನಡೆಸುವುದಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರಿಸಲಾಗಿದೆ. ಶುಕ್ರವಾರ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ, ಮೈಸೂರು ದಸರಾದಲ್ಲಿ ಕಂಬಳ ಆಯೋಜಿಸುವುದಕ್ಕೆ ಅಧಿಕೃತವಾಗಿ ತೀರ್ಮಾನಿಸಲಾಗಿದೆ. ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜನೆಗೆ ಈ ಹಿಂದೆ ಸಾಂಸ್ಕೃತಿಕ ಹಿನ್ನೆಲೆ ಮುಂದಿಟ್ಟು ತೀವ್ರ ವಿರೋಧ ವ್ಯಕ್ತಪಡಿಸಿದ್ದ ಮೈಸೂರು ಸಂಸದ ಯದುವೀರ್ ಒಡೆಯರ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ಸುದೀರ್ಘ ಚರ್ಚೆಯ ಬಳಿಕ ಅವರು ದಸರಾದಲ್ಲಿ ಕಂಬಳ ನಡೆಸುವುದಕ್ಕೆ ತಮ್ಮ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ. ಸಭೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಮೂರೂ ಜಿಲ್ಲೆಗಳ ಎಲ್ಲಾ ರಾಜಕೀಯ ಪಕ್ಷಗಳ ಶಾಸಕರು, ಸಂಸದರು ಮತ್ತು ವಿಧಾನ ಪರಿಷತ್ ಸದಸ್ಯರು ಭಾಗವಹಿಸಿ ಒಮ್ಮತದ ನಿರ್ಧಾರ ಕೈಗೊಂಡಿದ್ದಾರೆ.
ಬೆಂಗಳೂರು ಕಂಬಳದ ಯಶಸ್ಸಿನ ಬೆನ್ನಲ್ಲೇ ಮೈಸೂರು ದಸರಾದಲ್ಲೂ ಕರಾವಳಿಯ ಹೆಮ್ಮೆಯ ಕೋಣಗಳ ಓಟಕ್ಕೆ ಮಂಜೂರಾತಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಕಂಬಳ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಪುತ್ತೂರು ಶಾಸಕ ಅಶೋಕ್ ರೈ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಸಾಂಪ್ರದಾಯಿಕ ಮೈಸೂರು ಪೇಟ ತೊಡಿಸಿ, ಕಂಬಳದ ಗೌರವದ ಸಂಕೇತವಾದ ‘ಬೆತ್ತ’ವನ್ನು ನೀಡಿ ಕೃತಜ್ಞತೆ ಸಲ್ಲಿಸಲಾಯಿತು. “ತುಳುನಾಡಿನ ಜಾನಪದ ಕಲೆಯೊಂದು ದಸರಾ ವೇದಿಕೆಯಲ್ಲಿ ಅನಾವರಣಗೊಳ್ಳುತ್ತಿರುವುದು ಕಂಬಳಕ್ಕೆ ವಿಶ್ವಮಟ್ಟದಲ್ಲಿ ಮತ್ತಷ್ಟು ಪ್ರಚಾರ ತಂದುಕೊಡಲಿದೆ” ಎಂದು ಶಾಸಕ ಅಶೋಕ್ ರೈ ಹರ್ಷ ವ್ಯಕ್ತಪಡಿಸಿದ್ದಾರೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm