ಬ್ರೇಕಿಂಗ್ ನ್ಯೂಸ್
17-07-26 02:55 pm HK News Staffer ಕರ್ನಾಟಕ
ಬೆಂಗಳೂರು, ಜುಲೈ 17: ರಾಜ್ಯ ಸಂಪುಟ ವಿಸ್ತರಣೆ ಕಸರತ್ತು ದೆಹಲಿ ಅಂಗಳಕ್ಕೆ ಹೋಗಿದ್ದು ಸಿಎಂ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮದೇ ಪಟ್ಟಿ ಮುಂದಿಟ್ಟು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದಾರೆ. ಆದರೆ ರಾಜ್ಯ ನಾಯಕರ ಪಟ್ಟಿಗೆ ರಾಹುಲ್ ಗಾಂಧಿ ಅಸಮ್ಮತಿ ಸೂಚಿಸಿದ್ದು ತಮ್ಮದೇ ಹೊಸ ಪಟ್ಟಿಯನ್ನು ಮುಂದಿಟ್ಟು ಚಕಿತಗೊಳಿಸಿದ್ದಾರೆ. ಇದಲ್ಲದೆ, 55ರ ಒಳಗಿನವರಿಗೆ ಆದ್ಯತೆ ನೀಡುವಂತೆ ಸಲಹೆ ಮಾಡಿದ್ದಾರೆ.
ಡಿಕೆ ಶಿವಕುಮಾರ್ ಜೊತೆಗೆ 13 ಮಂದಿ ಹಿರಿಯರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ, ಹೆಚ್ಚಿನವರು ವಯೋವೃದ್ಧರು ಎನ್ನುವ ಕಾರಣಕ್ಕೆ ಈ 13 ಮಂದಿಯ ಬಗ್ಗೆಯೂ ರಾಹುಲ್ ಗಾಂಧಿ ಅಸಮಾಧಾನ ಹೊಂದಿದ್ದರು. ಹೀಗಾಗಿ ಸಂಪುಟ ವಿಸ್ತರಣೆ ವೇಳೆ ಬಹುತೇಕ ಹೊಸಬರಿಗೆ ಅವಕಾಶ ನೀಡುವಂತೆ ಸಲಹೆ ಮಾಡಿದ್ದರು. ಆದರೆ ಹಿರಿಯರು ಮತ್ತು ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಕಳಕೊಂಡವರ ಲಾಬಿ ತೀವ್ರವಾಗಿದ್ದು ಈ ಹಿನ್ನೆಲೆಯಲ್ಲಿ ಹೊಸ ಪಟ್ಟಿಯನ್ನು ಅಂತಿಮಗೊಳಿಸುವುದು ರಾಜ್ಯ ನಾಯಕರಿಗೆ ಸವಾಲಾಗಿದೆ. ಗುರುವಾರ ಸೋನಿಯಾ ಗಾಂಧಿ ನಿವಾಸದಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ರಣದೀಪ್ ಸುರ್ಜೇವಾಲಾ, ಕೆಸಿ ವೇಣುಗೋಪಾಲ್, ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಚರ್ಚೆ ನಡೆಸಿದರೂ, ಮಲ್ಲಿಕಾರ್ಜುನ ಖರ್ಗೆ ಮಗನ ಅನಾರೋಗ್ಯ ಕಾರಣದಿಂದ ತುರ್ತಾಗಿ ಬೆಂಗಳೂರಿಗೆ ನಿರ್ಗಮಿಸಿದ್ದರಿಂದ ಪಟ್ಟಿ ಫೈನಲ್ ಮಾಡಲು ಸಾಧ್ಯವಾಗಿಲ್ಲ.
ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ಪಟ್ಟಿಯನ್ನು ಸಭೆಯ ಮುಂದಿಟ್ಟಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರೂ ತಮ್ಮ ಪರವಾಗಿರುವವರ ಪಟ್ಟಿಯನ್ನು ಸಭೆಯ ಮುಂದಿಟ್ಟಿದ್ದಾರೆ. ಏತನ್ಮಧ್ಯೆ, ರಾಹುಲ್ ಗಾಂಧಿ ತಂಡ ಸಿದ್ದಪಡಿಸಿದ್ದ ಬೇರೊಂದು ಪಟ್ಟಿಯೂ ಸಭೆಯಲ್ಲಿ ಚರ್ಚೆಗೆ ಬಂದಿದ್ದು, ರಾಜ್ಯ ನಾಯಕರ ಪಟ್ಟಿ ನೋಡಿ ಹೈಕಮಾಂಡ್ ನಾಯಕರು ಒಂದು ಹಂತದಲ್ಲಿ ಅಸಮಾಧಾನಗೊಂಡಿದ್ದಾರೆಂದು ಹೇಳಲಾಗಿದೆ.
ಹೊಸಮುಖಗಳಿಗೆ ಮಣೆ ಹಾಕಲು ಸಲಹೆ
ರಾಜ್ಯ ನಾಯಕರು ತೆಗೆದುಕೊಂಡು ಹೋಗಿದ್ದ ಸಂಭವನೀಯ ಸಚಿವರ ಪಟ್ಟಿ ಅವಲೋಕಿಸಿದ ಹೈಕಮಾಂಡ್ ನಾಯಕರು, ಹೊಸ ಮುಖಗಳಿಗೆ ಮಣೆ ಹಾಕುವಂತೆ ಸೂಚಿಸಿದ್ದಾರೆ. ಪಟ್ಟಿಯಲ್ಲಿ ಹಿರಿಯರ ಹೆಸರುಗಳು ಸಾಕಷ್ಟು ಸಂಖ್ಯೆಯಲ್ಲಿ ಇದ್ದುದ್ದರಿಂದ ಒಪ್ಪದ ವರಿಷ್ಠರು, ಈ ಬಾರಿಯ ಸಂಪುಟದಲ್ಲಿ 55 ವರ್ಷ ಮೇಲ್ಪಟ್ಟವರ ಸಂಖ್ಯೆ ಹೆಚ್ಚಿಗೆ ಇರಬಾರದು ಎಂಬ ಮಾನದಂಡ ನಿಗದಿಪಡಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಮತ್ತೊಂದು ಪಟ್ಟಿಯನ್ನು ಅನಿವಾರ್ಯವಾಗಿ ಸಿದ್ಧಪಡಿಸಬೇಕಿದೆ.
ಅತ್ತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನತ್ತ ತೆರಳಿದಾದರೂ ರಾಜ್ಯ ನಾಯಕರು ದಿಲ್ಲಿಯಲ್ಲೇ ಬೀಡು ಬಿಟ್ಟಿದ್ದರು. ರಾತ್ರಿ ವೇಳೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಕರೆಯಿಸಿಕೊಂಡ ರಾಹುಲ್ ಗಾಂಧಿ, ಮತ್ತೊಮ್ಮೆ ಸಂಭವನೀಯ ಸಚಿವರ ಪಟ್ಟಿಯನ್ನು ಪರಿಶೀಲಿಸಿದರು. ನಂತರ ಕೆ.ಸಿ.ವೇಣುಗೋಪಾಲ್ ನಿವಾಸದಲ್ಲಿ ರಾತ್ರಿ 8.30ರ ವೇಳೆಗೆ ಸಿಎಂ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷಹರಿಪ್ರಸಾದ್ರನ್ನು ಕರೆಸಿಕೊಂಡ ರಾಹುಲ್ ಗಾಂಧಿ, ಮೂವರು ನಾಯಕರ ಜತೆಗೂ ಪ್ರತ್ಯೇಕ ಸಭೆ ನಡೆಸಿದ್ದಾರೆ. ಆದರೆ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಈ ನಡುವೆ, ಜುಲೈ 17ರ ಶುಕ್ರವಾರ ರಾಹುಲ್ ಡೆಹ್ರಾಡೂನ್ ತೆರಳುತ್ತಿದ್ದು ಇದರಿಂದಾಗಿ ಇನ್ನೆರಡು ದಿನ ಸಭೆ ಸೇರುವುದಕ್ಕೂ ಸಾಧ್ಯವಾಗಲ್ಲ.
ಇನ್ನೊಂದೆಡೆ ಜುಲೈ 20ರಂದು ಸಂಸತ್ತಿನ ಅಧಿವೇಶನ ಶುರುವಾಗಲಿದ್ದು ರಾಹುಲ್ ಗಾಂಧಿ ಆದಿಯಾಗಿ ಕೇಂದ್ರ ನಾಯಕರು ಅದಕ್ಕೆ ರೆಡಿಯಾಗಲಿದ್ದಾರೆ. ರಾಮನ ದೇಣಿಗೆ ಕಳವು ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟು ವಿಪಕ್ಷಗಳು ಬಿಜೆಪಿಯನ್ನು ಹಣಿಯಲು ತಯಾರಿ ನಡೆಸಿವೆ. ಹೀಗಾಗಿ ಸದ್ಯಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗೋದು ಡೌಟು ಎನ್ನಲಾಗುತ್ತಿದೆ. ಇದೇ ವೇಳೆ, ಸುರ್ಜೇವಾಲಾ ಆಗಸ್ಟ್ 6ರಂದು ಆರಂಭವಾಗಲಿರುವ ರಾಜ್ಯ ವಿಧಾನಸಭೆ ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಜುಲೈ 20ರ ಬಳಿಕ ಹೊಸ ಪಟ್ಟಿ ಹಿಡಿದು ತರುವಂತೆ ಕೇಂದ್ರ ನಾಯಕರು ಡಿಕೆ- ಸಿದ್ದು ಟೀಮಿಗೆ ಸಲಹೆ ಮಾಡಿದ್ದಾರೆ. ಇದೇ ವೇಳೆ, ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಹಲವು ಶಾಸಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm