ಬ್ರೇಕಿಂಗ್ ನ್ಯೂಸ್
03-08-26 03:23 pm HK News Staffer ಕರ್ನಾಟಕ
ಬೆಂಗಳೂರು, ಆಗಸ್ಟ್ 3: ಸಿಎಂ ಡಿಕೆ ಶಿವಕುಮಾರ್ ಅವರ ಸಂಪುಟ ವಿಸ್ತರಣೆಯಾಗಿದ್ದು ಮಹಿಳಾ ಕೋಟಾದಲ್ಲಿ ಯಾರೂ ಊಹಿಸದ ಹೆಸರು ಸಚಿವ ಸ್ಥಾನದ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದು ಅಚ್ಚರಿ ಮೂಡಿಸಿದೆ. ಚಿಕ್ಕಮಗಳೂರು ಜಿಲ್ಲೆಯಿಂದ ಇತ್ತೀಚೆಗಷ್ಟೇ ವಿಧಾನ ಪರಿಷತ್ ಸದಸ್ಯೆಯಾಗಿ ಆಯ್ಕೆಯಾಗಿದ್ದ ಗಾಯತ್ರಿ ಶಾಂತಗೌಡರಿಗೆ ಸಚಿವ ಸ್ಥಾನ ಒಲಿದು ಬಂದಿದೆ.
2021ರ ಡಿಸೆಂಬರ್ ನಲ್ಲಿ ನಡೆದಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯ ಎಂಕೆ ಪ್ರಾಣೇಶ್ ವಿರುದ್ಧ ಗಾಯತ್ರಿ ಅವರು 6 ಮತಗಳ ಅಂತರದಿಂದ ಸೋಲು ಕಂಡಿದ್ದರು. ಆದರೆ, ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಮತದಾನ ಮಾಡುವ ಹಕ್ಕಿಲ್ಲ ಎಂದು ಗಾಯತ್ರಿ ಶಾಂತೇಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು.
ಹೈಕೋರ್ಟ್, ಸುಪ್ರೀಂ ಕೋರ್ಟ್ ನಲ್ಲಿ ಸುದೀರ್ಘ ಕಾನೂನು ಹೋರಾಟದ ಬಳಿಕ ಗಾಯತ್ರಿ ವಾದವನ್ನು ಕೋರ್ಟ್ ಎತ್ತಿಹಿಡಿದಿತ್ತು. ಬಳಿಕ ಮರು ಎಣಿಕೆಗೆ ಆದೇಶ ನೀಡಿದ್ದರಿಂದ ಮರು ಎಣಿಕೆಯಲ್ಲಿ 9 ಮತಗಳ ಅಂತರದಿಂದ ಗಾಯತ್ರಿ ಶಾಂತೇಗೌಡ ಜಯ ಸಾಧಿಸಿದ್ದರು. ನಾಲ್ಕು ವರ್ಷಗಳ ಬಳಿಕ ಪರಿಷತ್ ಸ್ಥಾನ ಸಿಕ್ಕಿದ್ದರಿಂದ ಇನ್ನೂ ಅಧಿಕೃತವಾಗಿ ಎಂಎಲ್ಸಿ ಪ್ರಮಾಣ ಸ್ವೀಕರಿಸಿಲ್ಲ. ಆದರೆ ಇದರ ನಡುವೆಯೇ ಸಿದ್ದರಾಮಯ್ಯ ಜೊತೆಗೆ ಗುರುತಿಸಿದ್ದ ಗಾಯತ್ರಿ ಶಾಂತೇಗೌಡ ಸಚಿವರಾಗಿ ಸ್ಥಾನ ಪಡೆದಿದ್ದಾರೆ. ಅವರ ವಿಧಾನ ಪರಿಷತ್ ಸದಸ್ಯತ್ವ ಇನ್ನು ಒಂದುವರೆ ವರ್ಷ ಇರಲಿದೆ. ಈ ಹಿಂದೆಯೂ ಪರಿಷತ್ ಸದಸ್ಯರಾಗಿದ್ದ ಗಾಯತ್ರಿ ಮೂರು ಬಾರಿ ಸ್ಪರ್ಧಿಸಿ ಎರಡು ಸಲ ಗೆಲುವು ಕಂಡಿದ್ದಾರೆ.
ಮಹಿಳಾ ಕೋಟಾದಲ್ಲಿ ಯಾರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವ ಗೊಂದಲ ಮತ್ತು ಕುತೂಹಲ ಇತ್ತು. ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕಿ ನಯನಾ ಮೋಟಮ್ಮ, ಖನೀಜ ಫಾತಿಮಾ, ಪರಿಷತ್ ಸದಸ್ಯೆ ಉಮಾಶ್ರೀ ತೀವ್ರ ಲಾಬಿ ನಡೆಸಿದ್ದರಿಂದ ಅವರ ಹೆಸರು ಚಾಲ್ತಿಗೆ ಬಂದಿತ್ತು. ಗಾಯತ್ರಿ ಮೊನ್ನೆಯಷ್ಟೇ ಕಾನೂನು ಹೋರಾಟದ ಬಳಿಕ ಎಂಕೆ ಪ್ರಾಣೇಶ್ ವಿರುದ್ದ ಗೆದ್ದಿದ್ದರಿಂದ ಸಚಿವ ಸ್ಥಾನಕ್ಕೆ ಲಾಬಿ ನಡೆಸುವುದರಲ್ಲಿ ಹೆಸರು ಕಾಣಿಸಿಕೊಂಡಿರಲಿಲ್ಲ. ಆದರೆ ಸುದೀರ್ಘ ರಾಜಕೀಯ, ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿದ್ದು ಲಕ್ ಹೊಡೆಯುವಂತೆ ಮಾಡಿದೆ.
ಗಾಯತ್ರಿ ಕುರುಬ ಸಮುದಾಯಕ್ಕೆ ಸೇರಿದವರಾಗಿದ್ದು ಹಾಸನ ಜಿಲ್ಲೆಯ ಅರಕಲಗೂಡು ಅವರ ಹುಟ್ಟೂರು. ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಪ್ರಭಾವ ಬೆಳೆಸಿಕೊಂಡು ಈಗ ಎರಡನೇ ಬಾರಿ ಪರಿಷತ್ ಸದಸ್ಯರಾಗಿ ಆಯ್ಕೆಗೊಂಡಿದ್ದರು. ಕಳೆದ ಬಾರಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಕೇಳಿದಾಗ, ಸಿದ್ದರಾಮಯ್ಯ ನಿನ್ನನ್ನು ಎಂಎಲ್ಸಿ ಮಾಡಿ ಸಚಿವ ಸ್ಥಾನಕ್ಕೆ ತರುತ್ತೇನೆ ಎಂದಿದ್ದರು. ಈಗ ಸಿದ್ದರಾಮಯ್ಯ ನುಡಿದಂತೆ ನಡೆದಿದ್ದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೋಟಮ್ಮ ಬಳಿಕ ಮತ್ತೊಬ್ಬ ಮಹಿಳೆಗೆ ಸಚಿವ ಸ್ಥಾನ ಸಿಕ್ಕಂತಾಗಿದೆ.
ಮಹಿಳಾ ಕೋಟಾದಲ್ಲಿ ಒಬ್ಬರಿಗಷ್ಟೇ ಸ್ಥಾನ ಸಿಕ್ಕಿದ್ದರಿಂದ ಈ ಹಿಂದೆ ಲಕ್ಷ್ಮೀ ಹೆಬ್ಬಾಳ್ಕರ್ ಕೈಲಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಗಾಯತ್ರಿ ಅವರಿಗೆ ಸಿಗಲಿದೆ. ಡಿಕೆ ಆಪ್ತ ವಲಯದಲ್ಲಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇನ್ಯಾವ ಸ್ಥಾನ ಗಿಟ್ಟಿಸಿಕೊಳ್ಳುತ್ತಾರೆ ಎನ್ನುವ ಕುತೂಹಲ ಇದೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm