ಬ್ರೇಕಿಂಗ್ ನ್ಯೂಸ್
04-08-26 03:15 pm HK News Staffer ಕರ್ನಾಟಕ
ಬೆಂಗಳೂರು, ಆ 04: ಅಸಮಾಧಾನಿತ ಶಾಸಕರು ಏನಾದರೂ ರಾಜೀನಾಮೆ ನೀಡಲು ಬಂದರೆ ಎರಡೇ ನಿಮಿಷದಲ್ಲಿ ಅಂಗೀಕರಿಸುತ್ತೇನೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಮಂತ್ರಿ ಸ್ಥಾನ ವಂಚಿತ ಕೆಲ ಶಾಸಕರು ರಾಜೀನಾಮೆ ನೀಡಲು ಮುಂದಾಗಿರುವ ಹಿನ್ನೆಲೆ ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಸದಾಶಿವನಗರ ಬಳಿ ಪ್ರತಿಕ್ರಿಯಿಸುತ್ತಾ, ಶಾಸಕರು ಏನಾದರೂ ರಾಜೀನಾಮೆ ನೀಡಲು ಬಂದರೆ ಕ್ಷಣ ಮಾತ್ರದಲ್ಲೇ ರಾಜೀನಾಮೆ ಅಂಗೀಕರಿಸುತ್ತೇನೆ ಎಂದು ತಿಳಿಸಿದ್ದಾರೆ.
ಪಕ್ಷ ಮುಖ್ಯ, ಪಕ್ಷದಲ್ಲಿ ಶಿಸ್ತು ಮುಖ್ಯ, ನಾನು ನಿನ್ನೆಯೇ ಹೇಳಿದ್ದೇನೆ. ವೀರೇಂದ್ರ ಪಾಟೀಲ್ ಕಾಲದಲ್ಲಿ ಮಂತ್ರಿ ಸ್ಥಾನ ಕೊಟ್ಟಿರಲಿಲ್ಲ. ಬಂಗಾರಪ್ಪ, ಖರ್ಗೆ, ಧರ್ಮಸಿಂಗ್ ಅವರಿಗೆ ಮಂತ್ರಿ ಸ್ಥಾನ ಕೊಟ್ಟಿರಲಿಲ್ಲ. ನನಗೆ, ಪರಮೇಶ್ವರ್ ಅವರಿಗೂ ಕೂಡ ಕೊಟ್ಟಿರಲಿಲ್ಲ. ಆಗ ನಾವಿಬ್ಬರು ಸುಮ್ಮನೆ ಇರಲಿಲ್ಲವಾ?. ಎಲ್ಲರೂ ತಾಳ್ಮೆಯಿಂದ ಇರಬೇಕು ಎಂದು ತಿಳಿಸಿದ್ದಾರೆ.
ನಿನ್ನೆ ರಾತ್ರಿಯೇ ಏನು ಹೇಳಬೇಕೋ ಎಲ್ಲ ಹೇಳಿದ್ದೇನೆ. ಏನಾದರೂ ಇದ್ದರೆ ಖಂಡಿತ ನಿಮ್ಮನೆಲ್ಲ ಕರೆಯುತ್ತೇನೆ. ಹೊಸದೇನೂ ಇಲ್ಲ. ಕೂಡಲೇ ಬರ ಪರಿಹಾರಕ್ಕೆ ಭೇಟಿ ಮಾಡಲು ಎಲ್ಲ ಮಂತ್ರಿಗಳಿಗೆ ಹೇಳಿದ್ದೇನೆ ಎಂದರು.
ಹೊಸ ಮುಖಗಳಿಗೆ ಅವಕಾಶ:
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಸಿಎಂ ಸುಮಾರು 2 ಗಂಟೆಗಳ ಕಾಲ ಸಚಿವ ಸಂಪುಟದ ನೂತನ ಸದಸ್ಯರಿಗೆ ಮಾರ್ಗದರ್ಶನ ನೀಡಿದ್ದೇವೆ. ನಮ್ಮಲ್ಲಿ ಸಾಕಷ್ಟು ಹಿರಿಯ ನಾಯಕರಿದ್ದರೂ ನಾವು ಈ ಬಾರಿ ಹೊಸ ಮುಖಗಳಿಗೆ ಅವಕಾಶ ನೀಡಿದ್ದೇವೆ. ನಾನು ಹಾಗೂ ಪರಮೇಶ್ವರ್ ಅವರು ಮೊದಲ ಬಾರಿಗೆ ಶಾಸಕರಾಗಿ ಮಂತ್ರಿಯಾಗಿದ್ದೇವೆ. ಕೆಲವು ಸಂದರ್ಭದಲ್ಲಿ ನಮ್ಮನ್ನು ಸಚಿವರನ್ನಾಗಿ ಮಾಡಿದ್ದಾರೆ. ಕೆಲವೊಮ್ಮೆ ಮಾಡಿಲ್ಲ. ನಾವು ಅಲ್ಲಿಂದ ಇಲ್ಲಿಯವರೆಗೆ ಬಂದು ಈ ಸ್ಥಾನ ತಲುಪಿದ್ದೇವೆ. ಇಂದು 19 ಸದಸ್ಯರು ಸಂಪುಟ ಸೇರ್ಪಡೆಯೊಂದಿಗೆ ವಿಸ್ತರಣೆಯಾಗಿದೆ. ನಮ್ಮಲ್ಲಿ ಅನೇಕ ಅರ್ಹರು ಇದ್ದರು. ನಮ್ಮಲ್ಲಿ ಅರ್ಹತೆ ಇಲ್ಲದವರು ಯಾರೂ ಇಲ್ಲ ಎಂದು ತಿಳಿಸಿದ್ದರು.
ನಮ್ಮ ಪಕ್ಷ ತೀರ್ಮಾನ ಮಾಡಿ ಒಂದು ನಿರ್ಧಾರಕ್ಕೆ ಬಂದಿದ್ದಾರೆ. ನಾನು ಹಾಗೂ ಪರಮೇಶ್ವರ್ ಅವರು ಬಂದಾಗ, ವೀರೇಂದ್ರ ಪಾಟೀಲ್ ಅವರು ಸಿಎಂ ಆಗಿದ್ದರು. ಆಗ ಬಂಗಾರಪ್ಪನವರು ಸಚಿವ ಸಂಪುಟದಲ್ಲಿ ಇರಲಿಲ್ಲ. ಮಲ್ಲಿಕಾರ್ಜುನ ಖರ್ಗೆ, ಧರಂ ಸಿಂಗ್, ಲಕ್ಕಪ್ಪನವರು ಇರಲಿಲ್ಲ. ಎಸ್ ಎಂ ಕೃಷ್ಣ ಅವರ ಕಾಲದಲ್ಲಿ ಅಜೀಜ್ ಸೇಠ್ ಅವರು ಸಂಪುಟದಲ್ಲಿ ಸ್ಥಾನ ಪಡೆಯಲು ಆಗಿರಲಿಲ್ಲ. ಆಸೆ ಎಲ್ಲರಿಗೂ ಇರುತ್ತದೆ, ತಾಳ್ಮೆಯಿಂದ ಇದ್ದರೆ ನಾವು ಎಲ್ಲೆಲ್ಲಿ ಸಾಧ್ಯವೋ ಅಲ್ಲಿ ಅವಕಾಶ ನೀಡಲಾಗುವುದು. ನಾನು ಹಾಗೂ ಪರಮೇಶ್ವರ್ ಅವರು ನಮ್ಮ ಶಾಸಕರ ಜೊತೆ ಚರ್ಚೆ ಮಾಡುತ್ತೇವೆ. ಎಲ್ಲರಿಗೂ ಗೌರವ ನೀಡುತ್ತೇವೆ ಎಂದು ವಿವರಿಸಿದ್ದರು.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm