ಬ್ರೇಕಿಂಗ್ ನ್ಯೂಸ್
04-08-26 03:53 pm HK News Staffer ಕರ್ನಾಟಕ
ಬೆಂಗಳೂರು, ಆ.4: ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗದ ಕಾರಣ ಕಾಂಗ್ರೆಸ್ ಶಾಸಕರು ಮತ್ತು ಅವರ ಬೆಂಬಲಿಗರಲ್ಲಿ ತೀವ್ರ ಅಸಮಾಧಾನ ಕಾಣಿಸಿಕೊಂಡಿದ್ದು ಬೆಂಗಳೂರಿನ ಕೆಪಿಸಿಸಿ ಕಚೇರಿ ಮುಂದೆ, ಬ್ರಿಗೇಡ್ ರೋಡ್, ಚಂದಾಪುರ ಸರ್ಕಲ್ ಸೇರಿದಂತೆ ಹಲವು ಕಡೆ ಪ್ರತಿಭಟನೆಗಳು ನಡೆದಿವೆ. ವಿವಿಧ ಜಿಲ್ಲೆಗಳ ಬ್ಲಾಕ್ ಅಧ್ಯಕ್ಷರು, ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ಮತ್ತು ಎನ್ಎಸ್ಯುಐ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ವೇಳೆ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಆಕಾಂಕ್ಷಿ ಶಾಸಕರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್, ತನ್ವೀರ್ ಸೇಠ್, ಪ್ರಿಯಾಕೃಷ್ಣ, ಎನ್.ಎ. ಹ್ಯಾರಿಸ್, ದಿನೇಶ್ ಗುಂಡೂರಾವ್ ಬೆಂಬಲಿಗರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು, ಬೆಳಗಾವಿ ಹಾಗೂ ಮೈಸೂರು ಸೇರಿದಂತೆ ಹಲವೆಡೆ ರಸ್ತೆ ತಡೆದು ಆಕ್ರೋಶ ವ್ಯಕ್ತವಾಗಿದೆ.
ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಪಕ್ಷದ ಕಚೇರಿ ಮುಂದೆ ಸೇರಿದ ಪ್ರತಿಭಟನಾಕಾರರನ್ನು ಮನವೊಲಿಸಲು ಪ್ರಯತ್ನಿಸಿದರು. ನಮ್ಮಲ್ಲಿ 136 ಜನ ಶಾಸಕರಿದ್ದಾರೆ. ಎಲ್ಲರನ್ನು ಸಚಿವರನ್ನಾಗಿ ಮಾಡಲು ಸಾಧ್ಯವಿಲ್ಲ. ದಿನೇಶ್ ಗುಂಡೂರಾವ್ ಅವರಿಗೆ ಸ್ಥಾನ ಸಿಗದ ಬಗ್ಗೆ ಹೈಕಮಾಂಡ್ ಜೊತೆ ಮಾತನಾಡುತ್ತೇನೆ. ನಾನು 50 ವರ್ಷದಿಂದ ಕಾಂಗ್ರೆಸ್ನಲ್ಲಿದ್ದೇನೆ. ಸೋನಿಯಾ ಗಾಂಧಿಯೂ ಇದ್ದಾರೆ. ಪ್ರಧಾನಿ ಆಗೋದಕ್ಕೆ ಆಗಿಲ್ಲ. ನಿಮ್ಮ ಮನವಿಗಳನ್ನು ಹೈಕಮಾಂಡ್ನ ಗಮನಕ್ಕೆ ತರುತ್ತೇನೆ” ಎಂದು ಹೇಳಿದರು.
ವಿಜಯನಗರ ಮತ್ತು ಗೋವಿಂದರಾಜನಗರ ಕ್ಷೇತ್ರದ ಬ್ಲಾಕ್ ಅಧ್ಯಕ್ಷರು, ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ಎನ್ಎಸ್ಯುಐ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಸಹ ರಾಜೀನಾಮೆ ನೀಡಿದ್ದಾರೆ. ಶಾಸಕ ಎಂ. ಕೃಷ್ಣಪ್ಪ ಅವರಿಗೆ ಸಚಿವ ಸ್ಥಾನ ಸಿಗದ ಕಾರಣ ಭಾರತ್ ಜೋಡೋ ಸಭಾಂಗಣದಲ್ಲಿ ಪ್ರತಿಭಟನೆ ನಡೆದಿದ್ದು, ಬೆಂಬಲಿಗರು “ನಮ್ಮ ಶಾಸಕರಿಗೆ ಮಂತ್ರಿ ಸ್ಥಾನ ಕೊಡಲೇಬೇಕು” ಎಂದು ಪಟ್ಟು ಹಿಡಿದಿದ್ದಾರೆ.
ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದರಿಂದ ಬೆಳಗಾವಿಯ ರಾಣಿ ಚನ್ನಮ್ಮ ವೃತ್ತ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಬಲಿಗರು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು. ತನ್ವೀರ್ ಸೇಠ್ ಅವರಿಗೆ ಸಂಪುಟದಲ್ಲಿ ಅವಕಾಶ ಸಿಗದ ಕಾರಣ ಬೆಂಬಲಿಗರು ಮೈಸೂರು ಮತ್ತು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿ, ಕೆಲವರು ಆತ್ಮಹತ್ಯೆಗೆ ಯತ್ನಿಸುವ ಗಂಭೀರ ಘಟನೆಗಳು ನಡೆದಿವೆ.
ಪ್ರಿಯಾಕೃಷ್ಣ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ, ಪಕ್ಷದ ನಾಯಕರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ಹುಬ್ಬಳ್ಳಿ, ಕೊಪ್ಪಳ, ಚಿಕ್ಕಬಳ್ಳಾಪುರ, ಹಾವೇರಿ ಮತ್ತು ರಾಮದುರ್ಗದಲ್ಲೂ ಆ ಭಾಗದ ಶಾಸಕರ ಬೆಂಬಲಿಗರು ಪ್ರತಿಭಟನೆಗಳನ್ನು ನಡೆಸಿಹುಬ್ಬಳ್ಳಿ
ಆನೇಕಲ್ ಶಾಸಕ ಬಿ. ಶಿವಣ್ಣ ಅವರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಚಂದಾಪುರ ಸರ್ಕಲ್ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಟೈರ್ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ಹೈಕಮಾಂಡ್ ಮತ್ತು ರಾಜ್ಯ ನಾಯಕರ ವಿರುದ್ಧ ಘೋಷಣೆ ಕೂಗಿದ್ದು ಚಂದಾಪುರ ಪುರಸಭಾ ಸದಸ್ಯ ಬೈರೇಶ್ ಅವರು ರಾಜಿನಾಮೆ ಎಚ್ಚರಿಕೆ ನೀಡಿದ್ದಾರೆ: “ಬಿ. ಶಿವಣ್ಣ ಅವರು ಬಿಜೆಪಿ ಭದ್ರಕೋಟೆಯನ್ನು ಛಿದ್ರ ಮಾಡಿ ಕಾಂಗ್ರೆಸ್ ಬಾವುಟ ಹಾರಿಸಿದ್ದಾರೆ. ಸ್ವತಂತ್ರ ಬಂದ ನಂತರ ಆನೇಕಲ್ ಮೀಸಲು ಕ್ಷೇತ್ರಕ್ಕೆ ಒಮ್ಮೆ ಮಾತ್ರ ಸಚಿವ ಸ್ಥಾನ ನೀಡಲಾಗಿದೆ ಎಂದವರು ಹೇಳಿದರು.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm