ಬ್ರೇಕಿಂಗ್ ನ್ಯೂಸ್
10-08-26 01:11 pm HK News Staffer ಕರ್ನಾಟಕ
ಬೆಂಗಳೂರು , ಆಗಸ್ಟ್ 10: ರಾಜಧಾನಿ ಬೆಂಗಳೂರಿನ ಐಷಾರಾಮಿ ಹೋಟೆಲ್‌ಗಳು ಮತ್ತು ಜನಪ್ರಿಯ ರೆಸ್ಟೋರೆಂಟ್‌ಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ವೀಕೆಂಡ್‌ನಲ್ಲಿ ನಡೆಸಿದ ಮೆಗಾ ಕಾರ್ಯಾಚರಣೆಯಲ್ಲಿ ಸ್ವಚ್ಛತೆ ಮತ್ತು ಆಹಾರ ಗುಣಮಟ್ಟಕ್ಕೆ ಸಂಬಂಧಿಸಿದ ಹಲವು ಗಂಭೀರ ಲೋಪಗಳು ಬೆಳಕಿಗೆ ಬಂದಿವೆ. ಯುಬಿ ಸಿಟಿ, ಎಂಜಿ ರಸ್ತೆ ಹಾಗೂ ಬ್ರಿಗೇಡ್ ರೋಡ್ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿನ ಹೋಟೆಲ್‌ಗಳ ಅಡುಗೆಮನೆ ಮತ್ತು ಆಹಾರ ಸಂಗ್ರಹಣಾ ಸ್ಥಳಗಳನ್ನು ಪರಿಶೀಲಿಸಿದ ಅಧಿಕಾರಿಗಳು, ಕೊಳೆತ ಮಾಂಸ, ಅವಧಿ ಮೀರಿದ ಆಹಾರ ಪದಾರ್ಥಗಳು ಹಾಗೂ ಪದೇಪದೇ ಬಳಸಿದ ಅಡುಗೆ ಎಣ್ಣೆಯನ್ನು ವಶಕ್ಕೆ ಪಡೆದಿದ್ದಾರೆ.
ಆಹಾರ ಇಲಾಖೆ ಆಯುಕ್ತರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಹತ್ತಕ್ಕೂ ಹೆಚ್ಚು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ಹಲವು ತಂಡಗಳಾಗಿ ಪರಿಶೀಲನೆ ನಡೆಸಿದರು. ಯುಬಿ ಸಿಟಿ ಸುತ್ತಮುತ್ತಲಿನ ಪ್ರತಿಷ್ಠಿತ ಹೋಟೆಲ್‌ಗಳ ಅಡುಗೆಮನೆ, ಆಹಾರ ಸಂಗ್ರಹಣಾ ಪ್ರದೇಶ ಹಾಗೂ ಸ್ವಚ್ಛತಾ ವ್ಯವಸ್ಥೆಯನ್ನು ಅಧಿಕಾರಿಗಳು ಪರಿಶೀಲಿಸಿದರು.
ಕೊಳೆತ ಮಾಂಸ, ಮೀನು, ತರಕಾರಿ ವಶ;
ಪರಿಶೀಲನೆ ವೇಳೆ ಕೆಲವು ಹೋಟೆಲ್‌ಗಳಲ್ಲಿ ಕೊಳೆತ ಮಾಂಸ, ಮೀನು, ತರಕಾರಿ ಸೇರಿದಂತೆ ಬಳಕೆಗೆ ಯೋಗ್ಯವಲ್ಲದ ಆಹಾರ ಪದಾರ್ಥಗಳು ಪತ್ತೆಯಾಗಿವೆ. ಕೆಲವು ಕಡೆ ಅವಧಿ ಮೀರಿದ ಆಹಾರ ವಸ್ತುಗಳು ಹಾಗೂ ಅಗತ್ಯ ಲೇಬಲ್ ಇಲ್ಲದ ಉತ್ಪನ್ನಗಳನ್ನು ಸಂಗ್ರಹಿಸಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ.
ಇದಲ್ಲದೆ, ಪದೇಪದೇ ಬಳಸಲಾಗಿದ್ದ ಅಡುಗೆ ಎಣ್ಣೆಯನ್ನೂ ವಶಕ್ಕೆ ಪಡೆಯಲಾಗಿದೆ. ವಿವಿಧ ಹೋಟೆಲ್‌ಗಳಿಂದ ಆಹಾರ ಪದಾರ್ಥಗಳು ಮತ್ತು ಬಳಸಿದ ಅಡುಗೆ ಎಣ್ಣೆಯನ್ನು ಜಪ್ತಿ ಮಾಡಿ ಮುಂದಿನ ಕ್ರಮಕ್ಕೆ ಒಳಪಡಿಸಲಾಗಿದೆ.
ಸ್ಕೈ ಲೌಂಜ್ ಕಿಚನ್ ಸೀಜ್;
ಯುಬಿ ಸಿಟಿಯ ಸ್ಕೈ ಲೌಂಜ್ ಹೋಟೆಲ್‌ನಲ್ಲಿ ನಡೆದ ಪರಿಶೀಲನೆ ವೇಳೆ ಅಡುಗೆಮನೆಯ ನಿರ್ವಹಣೆಯಲ್ಲಿ ಅನೈರ್ಮಲ್ಯ ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ ಕೊಳೆತ ಸ್ಥಿತಿಯಲ್ಲಿದ್ದ ಕೋಳಿ ಹಾಗೂ ದನದ ಮಾಂಸ ಸೇರಿದಂತೆ ಆಹಾರ ಪದಾರ್ಥಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅಡುಗೆಮನೆಗೆ ಬೀಗ ಹಾಕಲಾಗಿದೆ.
ಇದೇ ವೇಳೆ ಸುಮಾರು 10 ದಿನಗಳ ಅವಧಿ ಮೀರಿದ ಹಾಲು ಮತ್ತು ಮೊಸರು ಕೂಡ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಆಹಾರ ಪದಾರ್ಥಗಳ ಮೇಲೆ ಫಂಗಸ್ ಕಾಣಿಸಿಕೊಂಡಿರುವುದೂ ಪರಿಶೀಲನೆಯಲ್ಲಿ ಬೆಳಕಿಗೆ ಬಂದಿದೆ.
ಅವಧಿ ಮೀರಿದ ಅಣಬೆ, ಲೇಬಲ್ ಇಲ್ಲದ ಕೇಕ್ ಪತ್ತೆ
ಯುಬಿ ಸಿಟಿ ಒಳಭಾಗದ ಕೆಲವು ರೆಸ್ಟೋರೆಂಟ್‌ಗಳ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಅವಧಿ ಮೀರಿದ ಅಣಬೆ, ಸರಿಯಾದ ಲೇಬಲ್ ಇಲ್ಲದ ಕೇಕ್ ಸೇರಿದಂತೆ ಹಲವು ಆಹಾರ ಪದಾರ್ಥಗಳನ್ನು ವಶಕ್ಕೆ ಪಡೆಯಲಾಗಿದೆ. ಆಹಾರ ಪದಾರ್ಥಗಳ ಮೇಲೆ ಅಗತ್ಯ ಮಾಹಿತಿಯ ಲೇಬಲ್ ಇಲ್ಲದೆ ಮಾರಾಟಕ್ಕೆ ಇಟ್ಟಿದ್ದ ಕೆಲವು ರೆಸ್ಟೋರೆಂಟ್‌ಗಳಿಗೆ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.
ಜೆಡಬ್ಲ್ಯೂ ಮ್ಯಾರಿಯಟ್‌ನಲ್ಲೂ ಪರಿಶೀಲನೆ
ಜೆಡಬ್ಲ್ಯೂ ಮ್ಯಾರಿಯಟ್ ಹೋಟೆಲ್‌ನ ಅಡುಗೆಮನೆ ಹಾಗೂ ಆಹಾರ ಸಂಗ್ರಹಣಾ ಪ್ರದೇಶಗಳನ್ನೂ ಆಹಾರ ಸುರಕ್ಷತಾ ಅಧಿಕಾರಿಗಳು ಪರಿಶೀಲಿಸಿದ್ದಾರೆ. ವಿವಿಧ ಆಹಾರ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.
ಯಾವ ಹೋಟೆಲ್‌ನಲ್ಲಿ ಏನೇನು ವಶ?
ನಿಯಮ ಉಲ್ಲಂಘಿಸಿದರೆ ನೋಟಿಸ್, ಬಳಿಕ ಬಂದ್
ಆಹಾರದ ಗುಣಮಟ್ಟ ಮತ್ತು ಸ್ವಚ್ಛತೆಯಲ್ಲಿ ಯಾವುದೇ ರಾಜಿ ಇಲ್ಲ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಎಚ್ಚರಿಕೆ ನೀಡಿದ್ದಾರೆ. ಮೊದಲ ಹಂತದಲ್ಲಿ ನಿಯಮ ಉಲ್ಲಂಘಿಸಿರುವ ಹೋಟೆಲ್‌ಗಳಿಗೆ ನೋಟಿಸ್ ನೀಡಲಾಗುವುದು. ನಂತರವೂ ಲೋಪ ಮುಂದುವರಿದರೆ ಮುಲಾಜಿಲ್ಲದೆ ಹೋಟೆಲ್‌ಗಳನ್ನು ಬಂದ್ ಮಾಡಲಾಗುವುದು ಎಂದು ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm