ಬ್ರೇಕಿಂಗ್ ನ್ಯೂಸ್
13-08-26 08:09 pm HK News Staffer ಕರ್ನಾಟಕ
ಬೆಂಗಳೂರು, ಆ.13: ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿಶೇಷ ಆಯೋಗ ರಚನೆಗೆ ಸಿಎಂ ಡಿ.ಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಇತ್ತೀಚೆಗಷ್ಟೇ ವಿಶ್ವ ಆದಿವಾಸಿ ದಿನಾಚರಣೆ ಕಾರ್ಯಕ್ರಮದಲ್ಲಿ ಈ ವಿಶೇಷ ಆಯೋಗ ರಚನೆಗೆ ಬೇಡಿಕೆ ನೀಡಲಾಗಿತ್ತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಒಂದು ತಿಂಗಳಲ್ಲಿ ಆಯೋಗ ರಚಿಸುವ ವಾಗ್ದಾನ ನೀಡಿದ್ದರು. ಈಗ ಎರಡೇ ದಿನದಲ್ಲಿ ಈ ಆದೇಶ ಹೊರಡಿಸುವ ಮೂಲಕ ಡಿ.ಕೆ ಶಿವಕುಮಾರ್ ಅವರು ನುಡಿದಂತೆ ನಡೆದಿದ್ದಾರೆ.
ಕರ್ನಾಟಕದಲ್ಲಿ ವಾಸಿಸುತ್ತಿರುವ ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳು ಇಂದಿಗೂ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಲವು ಸವಾಲುಗಳನ್ನು ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಅವರ ಅಭಿವೃದ್ಧಿ, ಹಕ್ಕುಗಳ ರಕ್ಷಣೆ ಹಾಗೂ ಸಾಮಾಜಿಕ ನ್ಯಾಯವನ್ನು ಒದಗಿಸುವ ಸಲುವಾಗಿ ವಿಶೇಷ ಆಯೋಗವನ್ನು ರಚಿಸಲು ಸರ್ಕಾರ ನಿರ್ಧರಿಸಿದೆ.
ಉತ್ತಮ ಶಿಕ್ಷಣ, ಪೌಷ್ಟಿಕ ಆಹಾರ, ಗುಣಮಟ್ಟದ ಆರೋಗ್ಯ ಸೇವೆ, ವಸತಿ, ಕುಡಿಯುವ ನೀರು, ರಸ್ತೆ, ವಿದ್ಯುತ್ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುವುದರ ಜೊತೆಗೆ, ಯುವಜನರಿಗೆ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗಾವಕಾಶಗಳನ್ನು ಕಲ್ಪಿಸುವುದೇ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಬದುಕಿನಲ್ಲಿ ಹೊಸ ಭರವಸೆ ಮೂಡಿಸುವುದರ ಜೊತೆಗೆ ಸಮಾನ ಅವಕಾಶಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm