ಬ್ರೇಕಿಂಗ್ ನ್ಯೂಸ್
13-08-26 10:19 pm HK News Desk ಕರ್ನಾಟಕ
ಮೈಸೂರು , ಆ.13: ಸ್ವಾತಂತ್ರ್ಯೋತ್ಸವ ಅಂಗವಾಗಿ ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಲು ರಾಜ್ಯ ಸರ್ಕಾರ 30 ಸಚಿವರನ್ನು ನಿಯೋಜಿಸಿ ಅಧಿಕೃತ ಆದೇಶ ಹೊರಡಿಸಿರುವ ಬೆನ್ನಲ್ಲೇ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಯತೀಂದ್ರ ಸಿದ್ದರಾಮಯ್ಯ ಅವರನ್ನು ನೇಮಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿರುವ ವಿಧಾನಪರಿಷತ್ ಮಾಜಿ ಸದಸ್ಯ ಎ.ಎಚ್. ವಿಶ್ವನಾಥ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆದ ಬಳಿಕವೂ ಸರ್ಕಾರದ ಪ್ರತಿಯೊಂದು ವಿಚಾರದಲ್ಲೂ ಸಿದ್ದರಾಮಯ್ಯ ಹಸ್ತಕ್ಷೇಪ ಮಾಡುತ್ತಿದ್ದಾರೆ. ಇದರಿಂದ ಸರ್ಕಾರದ ಕಾರ್ಯವೈಖರಿಗೆ ಅಡ್ಡಿಯಾಗುತ್ತಿದ್ದು, ಹೊಸ ಮುಖ್ಯಮಂತ್ರಿ ಸ್ವತಂತ್ರವಾಗಿ ಆಡಳಿತ ನಡೆಸಲು ಅವಕಾಶ ನೀಡಬೇಕು ಎಂದು ವಿಶ್ವನಾಥ್ ಆಗ್ರಹಿಸಿದರು.
"ಡಿಕೆಗೆ ಅವರದೇ ತಂಡ ರಚಿಸಲು ಅವಕಾಶ ನೀಡಿ"
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ತಮ್ಮ ಇಚ್ಛೆಯಂತೆ ಸಚಿವ ಸಂಪುಟ ಹಾಗೂ ಆಡಳಿತ ವ್ಯವಸ್ಥೆಯನ್ನು ರೂಪಿಸಿಕೊಳ್ಳಲು ಅವಕಾಶ ನೀಡಬೇಕು. ಸಿದ್ದರಾಮಯ್ಯ ನಿರಂತರ ಹಸ್ತಕ್ಷೇಪ ಮಾಡುವುದನ್ನು ನಿಲ್ಲಿಸಬೇಕು. ಸರ್ಕಾರಕ್ಕೆ ಕೆಲಸ ಮಾಡಲು ಬಿಡಬೇಕು," ಎಂದು ಒತ್ತಾಯಿಸಿದರು.
"ಯತೀಂದ್ರಗೆ ಅನುಭವ ಇಲ್ಲ"
ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿ ನೀಡಿರುವುದನ್ನೂ ವಿಶ್ವನಾಥ್ ತೀವ್ರವಾಗಿ ಟೀಕಿಸಿದ್ದು, "ಸಿದ್ದರಾಮಯ್ಯ ಅವರಿಗೆ ಪುತ್ರ ವ್ಯಾಮೋಹ ಹೆಚ್ಚಾಗಿದೆ. ಅನುಭವ ಇಲ್ಲದ ಮಂಗ ಯತೀಂದ್ರ ಸಿದ್ದರಾಮಯ್ಯಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಕೊಟ್ಟಿದ್ದು ಸರಿಯಲ್ಲ. ಮೈಸೂರು ವಿಶ್ವವಿಖ್ಯಾತ ನಗರವಾಗಿದ್ದು, ಇಲ್ಲಿಗೆ ದೊಡ್ಡ ದೊಡ್ಡ ವ್ಯಕ್ತಿಗಳು ಆಗಮಿಸುತ್ತಾರೆ. ಅವರ ಜೊತೆ ವ್ಯವಹರಿಸಲು ಯತೀಂದ್ರಗೆ ಅನುಭವ ಇಲ್ಲ ಎಂದರು.
ಮೈಸೂರು ವಿಶ್ವವಿಖ್ಯಾತ ನಗರ. ಇಲ್ಲಿ ದೇಶ-ವಿದೇಶಗಳ ಗಣ್ಯರು ಆಗಮಿಸುತ್ತಾರೆ. ಅಂತಹವರೊಂದಿಗೆ ವ್ಯವಹರಿಸಲು ಅನುಭವವೂ ಅಗತ್ಯ," ಎಂದು ಹೇಳಿದರು.
ವಿಶ್ವನಾಥ್ ಅವರ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಯತೀಂದ್ರ ಅವರ ನೇಮಕದ ಬಗ್ಗೆ ರಾಜಕೀಯ ವಲಯದಲ್ಲಿ ಪರ-ವಿರೋಧದ ಮಾತುಗಳು ಕೇಳಿಬರುತ್ತಿವೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm