ಬ್ರೇಕಿಂಗ್ ನ್ಯೂಸ್
14-08-26 08:42 pm HK News Staffer ಕರ್ನಾಟಕ
ಬೆಂಗಳೂರು, ಆ.14: ಖಾತೆ ಹಂಚಿಕೆಯಲ್ಲಿ ಡೌನ್ ಗ್ರೇಡ್ ಆಗಿರುವ ಜಮೀರ್ ಅಹ್ಮದ್ ಖಾನ್ ಅವರು ತನಗೆ ವಿಜಯನಗರ ಜಿಲ್ಲೆ ಸೇರಿದಂತೆ ಯಾವುದೇ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ಬೇಡ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಗೆ ಧ್ವಜಾರೋಹಣ ನಡೆಸಲು ವಿಜಯನಗರ ಜಲ್ಲೆಗೆ ಜಮೀರ್ ಅವರಿಗೆ ಹೊಣೆ ನೀಡಲಾಗಿತ್ತು.
ಅಮೂಲಕ ಪರೋಕ್ಷವಾಗಿ ಉಸ್ತುವಾರಿ ಜಿಲ್ಲೆ ವಿಜಯನಗರ ಎನ್ನುವುದನ್ನು ಜಮೀರ್ ಅವರಿಗೆ ಸೂಚಿಸಲಾಗಿತ್ತು. ಈ ಹಿಂದೆ ಇದ್ದ ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಕ್ಫ್ ಇಲಾಖೆಯನ್ನು ಕಿತ್ತು ಯುಟಿ ಖಾದರ್ ಗೆ ವಹಿಸಿದ್ದಲ್ಲದೆ, ಜಮೀರ್ ಗೆ ಕೇವಲ ವಸತಿ ಖಾತೆಯನ್ನು ಮಾತ್ರ ನೀಡಲಾಗಿತ್ತು. ಇದರಿಂದ ತೀವ್ರ ಅಸಮಾಧಾನಗೊಂಡ ಜಮೀರ್ ಪಕ್ಷದ ಕೆಲಸ ಹಿನ್ನೆಲೆಯಲ್ಲಿ ಉಸ್ತುವಾರಿಯೇ ಬೇಡವೆಂದು ಪತ್ರ ಬರೆದು ಬೇಸರ ತೋರಿಸಿದ್ದಾರೆ.
ಬಿಬಿಎಂಪಿ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ವಿಧಾನಸಭಾ ಉಪ ಚುನಾವಣೆಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಗೆ ಹೆಚ್ಚಿನ ಸಮಯ ನೀಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ತನಗೆ ಯಾವುದೇ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ನೀಡದಂತೆ ಜಮೀರ್ ಮನವಿ ಮಾಡಿದ್ದಾರೆ. ಈ ಹಿಂದೆ ವಿಜಯನಗರ ಜಿಲ್ಲೆಯ ಬರ ಪರಿಸ್ಥಿತಿ ನಿರ್ವಹಣೆ ಹಾಗೂ ಅಧ್ಯಯನ ವರದಿ ಸಿದ್ಧಪಡಿಸುವ ಜವಾಬ್ದಾರಿಯನ್ನು ತಮಗೆ ನೀಡಲಾಗಿತ್ತು. ಆ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ, ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.
ಚುನಾವಣೆಗಳ ನೆಪದಲ್ಲಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿಗಳಿಂದ ಹಿಂದೆ ಸರಿಯುವ ಸಚಿವರ ನಿರ್ಧಾರ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆಯ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಜಮೀರ್ ಅವರ ಪತ್ರ ಮಹತ್ವ ಪಡೆದುಕೊಂಡಿದೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm