ಬ್ರೇಕಿಂಗ್ ನ್ಯೂಸ್
24-08-26 03:16 pm HK News Staffer ಕರ್ನಾಟಕ
ಬೆಂಗಳೂರು , ಆ.24: ರಾಜ್ಯದಲ್ಲಿ H1N1 ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ವರ್ಷದ ಮೊದಲ ಎಂಟು ತಿಂಗಳಲ್ಲಿ ರಾಜ್ಯಾದ್ಯಂತ 4,212 ಪ್ರಯೋಗಾಲಯ ದೃಢೀಕೃತ ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ಸೇರಿದಂತೆ 15 ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ.
ಆರೋಗ್ಯ ಸಚಿವ ಯು.ಟಿ. ಖಾದರ್ ಅಧ್ಯಕ್ಷತೆಯಲ್ಲಿ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಲಾಗಿದ್ದು, ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಆರೋಗ್ಯ ವ್ಯವಸ್ಥೆಯನ್ನು ಸನ್ನದ್ಧವಾಗಿರಿಸಲಾಗಿದೆ. ಆಸ್ಪತ್ರೆಗಳಲ್ಲಿ ಅಗತ್ಯ ಬೆಡ್ಗಳು, ಔಷಧಿಗಳು ಹಾಗೂ ಮೂಲಸೌಕರ್ಯಗಳನ್ನು ಸಿದ್ಧವಾಗಿಟ್ಟುಕೊಳ್ಳಲಾಗಿದೆ.
ಇಂಟಿಗ್ರೇಟೆಡ್ ಹೆಲ್ತ್ ಇನ್ಫಾರ್ಮೇಷನ್ ಪ್ಲಾಟ್ಫಾರ್ಮ್ (IHIP) ಕಣ್ಗಾವಲು ವರದಿ ಪ್ರಕಾರ, ರಾಜ್ಯದ 32 ಜಿಲ್ಲೆಗಳಲ್ಲಿ 4,212 H1N1 ಪ್ರಕರಣಗಳು ದೃಢಪಟ್ಟಿವೆ. 2025ರಲ್ಲಿ 4,583 ಹಾಗೂ 2024ರಲ್ಲಿ 3,903 ಪ್ರಕರಣಗಳು ದಾಖಲಾಗಿದ್ದವು. ಸಾಮಾನ್ಯವಾಗಿ ಪ್ರತಿವರ್ಷ ಜನವರಿ–ಮಾರ್ಚ್ ಹಾಗೂ ಜುಲೈ–ಸೆಪ್ಟೆಂಬರ್ ಅವಧಿಯಲ್ಲಿ ಇನ್ಫ್ಲುಯೆಂಜಾ ಸೋಂಕು ಹೆಚ್ಚಾಗುತ್ತದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಸರ್ಕಾರದ ಸಿದ್ಧತೆ: ಆಸ್ಪತ್ರೆಗಳಲ್ಲಿ ಔಷಧಿ, ಮಾಸ್ಕ್ಗಳ ದಾಸ್ತಾನು
ILI ಹಾಗೂ SARI ಪ್ರಕರಣಗಳನ್ನು ಪತ್ತೆಹಚ್ಚಲು ಜಿಲ್ಲಾ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಕಣ್ಗಾವಲು ಕೇಂದ್ರಗಳನ್ನಾಗಿ ಮಾಡಲಾಗಿದೆ. ICMR-NCDC ಪ್ರಯೋಗಾಲಯಗಳು, ರಾಜ್ಯದ ವೈರಲ್ ಡಿಸೀಸ್ ಡಯಾಗ್ನೋಸ್ಟಿಕ್ ಲ್ಯಾಬೊರೇಟರಿಗಳು (VRDL) ಹಾಗೂ ನಿಮ್ಹಾನ್ಸ್ ಮೂಲಕ ಮಾದರಿಗಳ ತ್ವರಿತ ಪರೀಕ್ಷೆಗೆ ಅಗತ್ಯ ಕಿಟ್ಗಳು ಮತ್ತು ಉಪಕರಣಗಳನ್ನು ಒದಗಿಸಲಾಗಿದೆ.
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಜಿಲ್ಲಾಸ್ಪತ್ರೆಗಳವರೆಗೆ ಒಸೆಲ್ಟಾಮಿವಿರ್ ಮಾತ್ರೆಗಳು, N95 ಮಾಸ್ಕ್ಗಳು ಹಾಗೂ PPE ಕಿಟ್ಗಳನ್ನು ದಾಸ್ತಾನು ಮಾಡಲಾಗಿದೆ. ಸೋಂಕಿತರನ್ನು ಆರಂಭಿಕ ಹಂತದಲ್ಲೇ ಗುರುತಿಸಿ ಸೂಕ್ತ ಚಿಕಿತ್ಸೆ ನೀಡಲು ವೈದ್ಯರು ಹಾಗೂ ಶುಶ್ರೂಷಾ ಸಿಬ್ಬಂದಿಗೆ ತರಬೇತಿಯನ್ನೂ ನೀಡಲಾಗಿದೆ.
H1N1 ತಡೆಗೆ ಈ ಮುನ್ನೆಚ್ಚರಿಕೆ ತಪ್ಪದೇ ಪಾಲಿಸಿ;
ಶಾಲೆಗಳಲ್ಲಿ ಆತಂಕ ಬೇಡ;
ಬೆಂಗಳೂರಿನ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಗೆ H1N1 ಸೋಂಕು ಹರಡಿದೆ ಎಂಬ ವದಂತಿಗಳನ್ನು ಆರೋಗ್ಯ ಸಚಿವರು ತಳ್ಳಿಹಾಕಿದ್ದಾರೆ. ಇಬ್ಬರು ಶಿಕ್ಷಕರಲ್ಲಿ ಮಾತ್ರ ಲಕ್ಷಣಗಳು ಕಂಡುಬಂದಿದ್ದು, ಯಾವುದೇ ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.
ಶಾಲಾ ಆವರಣಗಳಲ್ಲಿ ಸೋಂಕು ಹರಡುವುದನ್ನು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಶಾಲಾ ಆಡಳಿತ ಮಂಡಳಿಗಳಿಗೆ ಮಾರ್ಗಸೂಚಿ ನೀಡಲಾಗಿದೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm