ಬ್ರೇಕಿಂಗ್ ನ್ಯೂಸ್
31-08-26 08:29 pm HK News Staffer ಕರ್ನಾಟಕ
ಬೆಂಗಳೂರು , ಆ.31: ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 13’ಕ್ಕೆ ಆರಂಭಕ್ಕೂ ಮುನ್ನವೇ ಸಂಕಷ್ಟ ಎದುರಾಗಿದೆ. ಸೆಪ್ಟೆಂಬರ್ 6ರಂದು ಗ್ರ್ಯಾಂಡ್ ಪ್ರೀಮಿಯರ್ ನಡೆಸಲು ಸಜ್ಜಾಗಿರುವ ಬಿಗ್ ಬಾಸ್ ತಂಡಕ್ಕೆ ಅರಣ್ಯ ಹಾಗೂ ಪರಿಸರ ಸಚಿವ ರಾಮಲಿಂಗಾರೆಡ್ಡಿ ಅವರ ಹೇಳಿಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಬಿಗ್ ಬಾಸ್ ಕನ್ನಡ ಸೀಸನ್ 13ರ ಆರಂಭಕ್ಕೆ ಕ್ಷಣಗಣನೆ ಶುರುವಾಗಿರುವ ಬೆನ್ನಲ್ಲೇ, ಕಾರ್ಯಕ್ರಮ ನಡೆಯಲಿರುವ ಜಾಲಿವುಡ್ ಸ್ಟುಡಿಯೋದಲ್ಲಿ ಪರಿಸರ ನಿಯಮಗಳ ಉಲ್ಲಂಘನೆ ಮುಂದುವರಿದಿದೆ ಎಂಬ ಆರೋಪ ಕೇಳಿಬಂದಿದೆ.
‘ನಿಯಮ ಪಾಲಿಸದಿದ್ದರೆ ಅನುಮತಿ ಇಲ್ಲ’
ಜಾಲಿವುಡ್ ಸ್ಟುಡಿಯೋ ಕಳೆದ ವರ್ಷ ವಿಧಿಸಲಾಗಿದ್ದ ದಂಡವನ್ನು ಇನ್ನೂ ಪಾವತಿಸಿಲ್ಲ. ಅಲ್ಲದೆ, ಪರಿಸರ ನಿಯಮಗಳಲ್ಲಿನ ಲೋಪಗಳನ್ನು ಸರಿಪಡಿಸಿಲ್ಲ ಹಾಗೂ ಎಸ್ಟಿಪಿ (STP) ಅಳವಡಿಕೆ ನಿಯಮಗಳನ್ನೂ ಪಾಲಿಸಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಪರಿಸರ ನಿಯಮಗಳ ಉಲ್ಲಂಘನೆಗಳನ್ನು ಸರಿಪಡಿಸಿಕೊಳ್ಳದಿದ್ದರೆ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ ಎಂದು ಸಚಿವರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಸೆ.6ರ ಗ್ರ್ಯಾಂಡ್ ಪ್ರೀಮಿಯರ್ಗೆ ಸಂಕಷ್ಟ?
ನಿನ್ನೆಯಷ್ಟೇ ಕಲರ್ಸ್ ಕನ್ನಡದ ಬಿಗ್ ಬಾಸ್ ತಂಡ ಸುದ್ದಿಗೋಷ್ಠಿ ನಡೆಸಿ ಸೀಸನ್ 13ರ ಕುರಿತು ಮಾಹಿತಿ ಹಂಚಿಕೊಂಡಿತ್ತು. ಸೆಪ್ಟೆಂಬರ್ 6ರಂದು ಅದ್ದೂರಿಯಾಗಿ ಗ್ರ್ಯಾಂಡ್ ಪ್ರೀಮಿಯರ್ ನಡೆಸಲು ಸಿದ್ಧತೆಗಳು ನಡೆಯುತ್ತಿರುವಾಗಲೇ ಪರಿಸರ ನಿಯಮಗಳ ವಿಚಾರ ಮುನ್ನೆಲೆಗೆ ಬಂದಿದೆ. ಹೀಗಾಗಿ ನಿಗದಿಯಂತೆ ಸೆಪ್ಟೆಂಬರ್ 6ರಂದು ಕಾರ್ಯಕ್ರಮ ಆರಂಭವಾಗಲಿದೆಯೇ ಎಂಬುದರ ಬಗ್ಗೆ ಇದೀಗ ಅನುಮಾನ ಮೂಡಿದೆ. ಕಾರ್ಯಕ್ರಮ ಆಯೋಜಕರು ಪರಿಸರ ಮಂಡಳಿಯ ನಿಯಮಗಳನ್ನು ಪಾಲಿಸಿ ಅಗತ್ಯ ಅನುಮತಿಗಳನ್ನು ಪಡೆದುಕೊಳ್ಳುವುದು ಅನಿವಾರ್ಯವಾಗಿದೆ.
ಕಳೆದ ವರ್ಷವೂ ಇದೇ ಸಮಸ್ಯೆ ;
ಕಳೆದ ವರ್ಷವೂ ಜಾಲಿವುಡ್ ಸ್ಟುಡಿಯೋಗೆ ಸಂಬಂಧಿಸಿದ ಪರಿಸರ ಉಲ್ಲಂಘನೆ ಹಾಗೂ ಕಾನೂನು ತೊಡಕುಗಳಿಂದಾಗಿ ಬಿಗ್ ಬಾಸ್ ಶೂಟಿಂಗ್ ಮತ್ತು ಪ್ರಸಾರಕ್ಕೆ ಸಮಸ್ಯೆ ಎದುರಾಗಿತ್ತು. ಈ ಬಾರಿ ಮತ್ತೆ ಅದೇ ರೀತಿಯ ಪರಿಸರ ನಿಯಮಗಳ ಉಲ್ಲಂಘನೆ ಆರೋಪ ಕೇಳಿಬಂದಿರುವುದರಿಂದ, ಬಿಗ್ ಬಾಸ್ ಸೀಸನ್ 13ರ ಗ್ರ್ಯಾಂಡ್ ಪ್ರೀಮಿಯರ್ಗೂ ಮುನ್ನ ಸ್ಟುಡಿಯೋ ಆಡಳಿತ ಮಂಡಳಿ ಲೋಪಗಳನ್ನು ಸರಿಪಡಿಸಿ ಅನುಮತಿ ಪಡೆಯಬೇಕಾದ ಅನಿವಾರ್ಯತೆ ಎದುರಾಗಿದೆ.
ಹೀಗಾಗಿ ಅದ್ಧೂರಿ ಆರಂಭಕ್ಕೆ ಸಜ್ಜಾಗಿದ್ದ ಬಿಗ್ ಬಾಸ್ ಸೀಸನ್ 13ಕ್ಕೆ ಇದೀಗ ಪರಿಸರ ನಿಯಮಗಳೇ ದೊಡ್ಡ ಸವಾಲಾಗಿ ಪರಿಣಮಿಸಿವೆ.
26-11-26 08:34 pm
HK News Staffer
ಆನೆ ಸ್ಥಳಾಂತರಕ್ಕೆ ಚಿಕ್ಕಮಗಳೂರು ಶಾಸಕರ ವಿರೋಧ ; ಯಾ...
25-11-26 07:48 pm
ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ ;...
25-11-26 02:11 pm
ಯೋಗಿಶ್ ಗೌಡ ಕೊಲೆ ಪ್ರಕರಣ ; ಕಾಂಗ್ರೆಸ್ ಶಾಸಕ ವಿನಯ...
25-11-26 02:10 pm
ಹಾಸನ ಜಿಲ್ಲಾಧಿಕಾರಿ ಬಗ್ಗೆ ಲಂಚದ ಆರೋಪ ; ಕೇಂದ್ರ ಸಚ...
24-11-26 08:43 pm
25-11-26 11:53 am
HK News Staffer
Alwyn Joel Noronha, Mangalore: ಉದ್ಯಮಿ ಆಲ್ವಿನ್...
24-11-26 09:44 pm
ಮುಂಬೈ ನೌಕಾನೆಲೆಯಿಂದ ಮಾಹಿತಿ ಸೋರಿಕೆ ; 90 ರಹಸ್ಯ ವ...
24-11-26 08:45 pm
ಮಾಜಿ ಸಿಎಂ ಸ್ಟಾಲಿನ್ ಸೋಲಿಸಿದ್ದ ನಾಯಕನಿಗೆ ಭಾವಪೂರ್...
21-11-26 11:44 am
ಜಾಗತಿಕ ಜನಸಂಖ್ಯೆಯಲ್ಲಿ ಇಸ್ಲಾಂ ಪಾರಮ್ಯ ; 2035ಕ್ಕೆ...
20-11-26 12:58 pm
28-11-26 08:54 am
HK News Staffer
ಧರ್ಮಸ್ಥಳ ಅಸಹಜ ಸಾವು ಪ್ರಕರಣ ; ಎಸ್ಐಟಿ ವರದಿಯನ್ನು...
27-11-26 06:23 pm
ಬೋಳೂರು - ಬೆಂಗ್ರೆ ಸೇತುವೆ ಕಾಮಗಾರಿ ; ಕ್ರೇನ್ ಸಹಿತ...
27-11-26 12:28 pm
ಮಂಗಳೂರು - ಬೆಂಗಳೂರು ವಾಹನ ಸಂಚಾರಕ್ಕೆ ಮತ್ತೊಂದು ಹೊ...
26-11-26 09:00 pm
ಎಸ್ಐಟಿ ಕಚೇರಿಗೆ ಮಹೇಶ್ ಶೆಟ್ಟಿ ತಿಮರೋಡಿ ದಾಖಲೆ ಸಲ್...
26-11-26 03:53 pm
27-11-26 03:14 pm
HK News Staffer
ಗೂಗಲ್ನಲ್ಲಿ ಹುಡುಕಾಡಿ ತುಂಗಾ ನದಿಗೆ ಸ್ನಾನಕ್ಕಿಳಿದ...
26-11-26 08:35 pm
ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯ...
26-11-26 07:47 pm
ಬೆಳಗಾವಿಯಲ್ಲಿ ಮತ್ತೊಂದು ಬಹುಕೋಟಿ ವಂಚನೆ ಪ್ರಕರಣ ಬೆ...
26-11-26 02:48 pm
ದುಬೈನಿಂದ ಚಿನ್ನ ಸ್ಮಗ್ಲಿಂಗ್ ; ಶೌಚಾಲಯದಲ್ಲಿ ಬಚ್ಚಿ...
26-11-26 01:01 pm