ಬ್ರೇಕಿಂಗ್ ನ್ಯೂಸ್
09-09-26 10:52 am HK News Staffer ಕರ್ನಾಟಕ
ಬೆಂಗಳೂರು, ಸೆ.9: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರು ನಿವಾಸ ಹಾಗೂ ಅವರಿಗೆ ಸಂಬಂಧಿಸಿದ ಹಲವು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬುಧವಾರ ಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಬೆಂಗಳೂರು, ಬೆಳಗಾವಿ, ಗೋವಾ ಹಾಗೂ ಮಹಾರಾಷ್ಟ್ರ ಸೇರಿದಂತೆ ಒಟ್ಟು 15ಕ್ಕೂ ಹೆಚ್ಚು ಸ್ಥಳಗಳಲ್ಲಿ 25ಕ್ಕೂ ಅಧಿಕ ಇಡಿ ಅಧಿಕಾರಿಗಳ ತಂಡಗಳು ಕೇಂದ್ರ ಸಶಸ್ತ್ರ ಮೀಸಲು ಪಡೆಯ (CRPF) ಭದ್ರತೆಯೊಂದಿಗೆ ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಬೆಳಗ್ಗೆ ಸುಮಾರು 7 ಗಂಟೆಗೆ ಎರಡು ಇನ್ನೋವಾ ಸೇರಿದಂತೆ ಒಟ್ಟು 18 ವಾಹನಗಳಲ್ಲಿ ಆಗಮಿಸಿದ ಇಡಿ ಅಧಿಕಾರಿಗಳು ಬೆಂಗಳೂರಿನ ಹಲವು ಸ್ಥಳಗಳಲ್ಲಿ ಶೋಧ ಆರಂಭಿಸಿದರು. ಸಚಿವ ಸತೀಶ್ ಜಾರಕಿಹೊಳಿ ಅವರು ತಮ್ಮ ಅಧಿಕೃತ ಸರ್ಕಾರಿ ನಿವಾಸದಲ್ಲೇ ಇದ್ದ ಸಂದರ್ಭದಲ್ಲಿ ದಾಳಿ ನಡೆದಿದ್ದು, ಅವರ ಸಮ್ಮುಖದಲ್ಲೇ ಮಹತ್ವದ ದಾಖಲೆಗಳು ಹಾಗೂ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.
ದಾಳಿಗೆ ಕಾರಣವೇನು?
ಸತೀಶ್ ಜಾರಕಿಹೊಳಿ ಅವರ ಬಾಮೈದ ಹಾಗೂ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ಮಂಜುನಾಥ್, ಉಪ ಆಯುಕ್ತ ಜಗದೀಶ್ ನಾಯಕ್ ಮತ್ತು ಅಧೀಕ್ಷಕ ತಮ್ಮಣ್ಣ ಅವರಿಗೆ ಸಂಬಂಧಿಸಿದ ಬೆಂಗಳೂರು, ಮೈಸೂರು ಹಾಗೂ ಬೆಳಗಾವಿಯ 14 ಸ್ಥಳಗಳಲ್ಲಿ ಈ ಹಿಂದೆ ಇಡಿ ದಾಳಿ ನಡೆಸಿತ್ತು. ಆ ಸಂದರ್ಭದಲ್ಲಿ ಸುಮಾರು ₹5 ಕೋಟಿ ನಗದು, ಚಿನ್ನಾಭರಣ ಹಾಗೂ ವಿದೇಶಿ ಕರೆನ್ಸಿ ಸೇರಿದಂತೆ ₹13 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿತ್ತು. ಮದ್ಯದಂಗಡಿ ಹಾಗೂ ಬಾರ್ಗಳಿಂದ ಮಾಸಿಕ ಲಂಚ ವಸೂಲಿ, ಹೊಸ ಲೈಸೆನ್ಸ್, ಲೈಸೆನ್ಸ್ ನವೀಕರಣ ಹಾಗೂ ವರ್ಗಾವಣೆಗೆ ಭಾರಿ ಮೊತ್ತದ ಲಂಚ ಪಡೆಯುತ್ತಿದ್ದ ಬಗ್ಗೆ ವಿವರಗಳಿದ್ದ ರಹಸ್ಯ ಡೈರಿಯೂ ಪತ್ತೆಯಾಗಿತ್ತು. ಈ ಪ್ರಕರಣದ ಮುಂದುವರಿದ ತನಿಖೆಯ ಭಾಗವಾಗಿ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಹಣಕಾಸು ವ್ಯವಹಾರಗಳ ಬಗ್ಗೆಯೂ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
18 ಬಾರ್ ಲೈಸೆನ್ಸ್: ₹178 ಕೋಟಿ ಹಣ ವರ್ಗಾವಣೆ ಆರೋಪ
ಸಚಿವರಾಗಿದ್ದ ಅವಧಿಯಲ್ಲಿ ಸತೀಶ್ ಜಾರಕಿಹೊಳಿ ಅವರು ತಮ್ಮ ಪ್ರಭಾವ ಬಳಸಿಕೊಂಡು 18 ಅನಧಿಕೃತ ಬಾರ್ ಲೈಸೆನ್ಸ್ಗಳನ್ನು ನೀಡಲು ನೆರವಾದರು ಎಂಬ ಆರೋಪ ಕೇಳಿಬಂದಿದೆ. ಈ ಬಾರ್ ಲೈಸೆನ್ಸ್ಗಳ ಮೂಲಕ ಸುಮಾರು ₹178 ಕೋಟಿ ಹಣ ಅಕ್ರಮವಾಗಿ ವರ್ಗಾವಣೆಯಾಗಿದ್ದು, ಮನಿ ಲಾಂಡ್ರಿಂಗ್ ನಡೆದಿರುವ ಆರೋಪದ ಬಗ್ಗೆಯೂ ಇಡಿ ತನಿಖೆ ನಡೆಸುತ್ತಿದೆ. ಬಾರ್ ಲೈಸೆನ್ಸ್ಗಳಿಂದ ಸಂಗ್ರಹವಾದ ಅಕ್ರಮ ಹಣವನ್ನು ವಿವಿಧ ಮಾರ್ಗಗಳ ಮೂಲಕ ವರ್ಗಾವಣೆ ಮಾಡಲಾಗಿದ್ದು, ಅದರ ಒಂದು ಭಾಗವನ್ನು ವಿದೇಶಗಳಲ್ಲಿ ಹೂಡಿಕೆ ಮಾಡಲು ನೆರವು ನೀಡಲಾಗಿದೆ ಎಂಬ ಆರೋಪವೂ ತನಿಖೆಯಲ್ಲಿ ತಿಳಿದುಬಂದಿದೆ.
ವಿದೇಶಿ ಹೂಡಿಕೆ: ದಕ್ಷಿಣ ಆಫ್ರಿಕಾದಲ್ಲಿ ಗಣಿಗಾರಿಕೆ ವ್ಯವಹಾರ
ಸತೀಶ್ ಜಾರಕಿಹೊಳಿ ಅವರು ವಿದೇಶಿ ವಿನಿಮಯ ನಿಯಮಗಳನ್ನು ಉಲ್ಲಂಘಿಸಿ ಕೋಟ್ಯಂತರ ರೂಪಾಯಿ ಹಣವನ್ನು ವಿದೇಶದಲ್ಲಿ ಹೂಡಿಕೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ FEMA ಅಡಿಯಲ್ಲೂ ತನಿಖೆ ನಡೆಯುತ್ತಿದೆ. ದಕ್ಷಿಣ ಆಫ್ರಿಕಾದಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆ ವ್ಯವಹಾರದಲ್ಲಿ ಭಾರಿ ಮೊತ್ತದ ಹಣ ಹೂಡಿಕೆ ಮಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಗಣಿಗಾರಿಕೆ ಕಂಪನಿಯಲ್ಲಿ ಸತೀಶ್ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ನಿರ್ದೇಶಕರಾಗಿದ್ದು, ಅವರ ಸಹೋದರಿ ಲಕ್ಷ್ಮಿ ಕೂಡ ನಿರ್ದೇಶಕರಾಗಿದ್ದಾರೆ ಎಂಬ ಮಾಹಿತಿ ತನಿಖಾ ಸಂಸ್ಥೆಗಳಿಗೆ ಲಭ್ಯವಾಗಿದೆ.
ಅಕ್ರಮ ಮಾರ್ಗಗಳ ಮೂಲಕ ಹಣವನ್ನು ವಿದೇಶಕ್ಕೆ ವರ್ಗಾವಣೆ ಮಾಡಿ, ಕುಟುಂಬಸ್ಥರ ಹೆಸರಿನಲ್ಲಿ ವಿದೇಶಿ ಕಂಪನಿಗಳನ್ನು ಸ್ಥಾಪಿಸಿರುವ ಹಣಕಾಸು ಜಾಲದ ಬಗ್ಗೆಯೂ ಇಡಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಹಿಂದೆ ಸುಮಾರು ₹3 ಕೋಟಿ ಮೌಲ್ಯದ ವಿದೇಶಿ ಹಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ವಿದೇಶಿ ಹಣಕಾಸು ವ್ಯವಹಾರಗಳ ಬಗ್ಗೆಯೂ ತನಿಖೆ ಮತ್ತಷ್ಟು ಚುರುಕುಗೊಂಡಿದೆ.
ಜೈಲು ಸೇರಿ ಭಾರಿ ಸುದ್ದಿಯಾಗಿದ್ದ ಮಂಜುನಾಥ್
2009ರಿಂದ 2013ರವರೆಗೆ ಮೈಸೂರಿನಲ್ಲಿ ಅಬಕಾರಿ ಡಿಸಿಯಾಗಿ ಕಾರ್ಯನಿರ್ವಹಿಸಿದ್ದ ಮಂಜುನಾಥ್ ಅವರನ್ನು ಲಂಚ ಪ್ರಕರಣವೊಂದರಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. 15 ದಿನಗಳ ಕಾಲ ಮೈಸೂರು ಕೇಂದ್ರ ಕಾರಾಗೃಹದಲ್ಲಿದ್ದ ಅವರು ಬಿಡುಗಡೆಯಾಗಿ ಹೊರಬಂದ ಸಂದರ್ಭದಲ್ಲಿ ಅವರ ಅಭಿಮಾನಿಗಳು ಜೈಲಿನಿಂದ ಸುಮಾರು 2 ಕಿಲೋಮೀಟರ್ ದೂರದವರೆಗೆ ಅವರನ್ನು ಹೆಗಲ ಮೇಲೆ ಹೊತ್ತು ಮೆರವಣಿಗೆ ನಡೆಸಿದ್ದರು. ಆ ಸಂದರ್ಭದಲ್ಲಿ ಈ ಘಟನೆ ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಅಬಕಾರಿ ಅಕ್ರಮ, ಬಾರ್ ಲೈಸೆನ್ಸ್, ಅಕ್ರಮ ಹಣ ವರ್ಗಾವಣೆ ಹಾಗೂ ವಿದೇಶಿ ಹೂಡಿಕೆ ಆರೋಪಗಳ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ನಡೆಸುತ್ತಿರುವ ದಾಳಿ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
09-09-26 03:29 pm
HK News Staffer
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
09-09-26 12:16 pm
HK News Staffer
ಸೌದಿ ಅರೇಬಿಯಾದಲ್ಲಿ ಕುತ್ತಾರಿನ ಯುವಕ ದಿಢೀರ್ ಸಾವು...
08-09-26 09:19 pm
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm