ಬ್ರೇಕಿಂಗ್ ನ್ಯೂಸ್
15-09-26 09:13 pm HK News Staffer ಕರ್ನಾಟಕ
ಬೆಂಗಳೂರು, ಸೆ.15: ಗಣೇಶ ಚತುರ್ಥಿ ಪ್ರಯುಕ್ತ ನಡೆದ ಶಾಂತಿ ಸಭೆಯಲ್ಲಿ ಮೈಸೂರು ಜಿಲ್ಲೆಯ ಟಿ. ನರಸೀಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಧನಂಜಯ್ ಮಸೀದಿ ಮುಂದೆ ಪಟಾಕಿ ಸಿಡಿಸಿದರೆ ‘ಗ್ರಹಚಾರ ಬಿಡಿಸುತ್ತೇನೆ’ ಎಂದು ಎಚ್ಚರಿಕೆ ನೀಡಿದ ಹೇಳಿಕೆ ಇದೀಗ ಭಾರೀ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಾಯಕರ ನಡುವೆ ಆರೋಪ-ಪ್ರತ್ಯಾರೋಪ ತೀವ್ರಗೊಂಡಿದೆ.
ಇನ್ಸ್ಪೆಕ್ಟರ್ ಧನಂಜಯ್ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದೇ ರೀತಿ ಮತ್ತೆ ಮಾತನಾಡಿದರೆ ಪೊಲೀಸ್ ಠಾಣೆಗೆ ನುಗ್ಗುವುದಾಗಿ ಅವರು ಎಚ್ಚರಿಕೆ ನೀಡಿದ್ದರು.
ಪ್ರತಾಪ್ ಸಿಂಹ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ‘ಪೊಲೀಸ್ ಠಾಣೆಗೆ ನುಗ್ಗಿದ ಬಳಿಕ ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗುವುದು’ ಎಂದು ತಿರುಗೇಟು ನೀಡಿದ್ದರು. ಇದೀಗ ಈ ವಿವಾದಕ್ಕೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಎಂಟ್ರಿಯಾಗಿದ್ದು, ಪ್ರತಾಪ್ ಸಿಂಹ ಅವರಿಗೆ ನೇರವಾಗಿಯೇ ಸವಾಲು ಹಾಕಿದ್ದಾರೆ. ‘ತಾಕತ್ತಿದ್ದರೆ ಟ್ರೈ ಮಾಡು ಮಗ, ಆಲ್ ದಿ ಬೆಸ್ಟ್ ರಣಹೇಡಿ’ ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡುವ ಮೂಲಕ ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದ್ದಾರೆ.
ಅಷ್ಟೇ ಅಲ್ಲದೆ, ‘ಮೈಸೂರಿನ ಗಲ್ಲಿ ರೌಡಿಯೊಬ್ಬ ಪೊಲೀಸ್ ಠಾಣೆಗೆ ನುಗ್ಗುತ್ತೇನೆ ಎಂದು ಧಮ್ಕಿ ಹಾಕಿದ್ದಾನೆ’ ಎಂದು ಪ್ರತಾಪ್ ಸಿಂಹ ಅವರನ್ನು ಉಲ್ಲೇಖಿಸಿ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದ್ದಾರೆ. ಇದೀಗ ಇಬ್ಬರು ನಾಯಕರ ನಡುವಿನ ಈ ಮಾತಿನ ಸಮರ ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.
Remarks by T. Narasipur Police Station Inspector Dhananjay during a peace meeting held ahead of Ganesh Chaturthi have triggered a major political war of words between the ruling Congress and opposition BJP. The inspector had reportedly warned that he would “teach a lesson” if firecrackers were burst in front of a mosque.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am