ಬ್ರೇಕಿಂಗ್ ನ್ಯೂಸ್
12-08-20 11:55 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 12: ನಿನ್ನೆಯ ಡಿಜಿ ಹಳ್ಳಿ ಘಟನೆಯನ್ನು ಕಾಂಗ್ರೆಸ್ ಖಂಡಿಸುತ್ತದೆ. ಕಾನೂನು ವಿರೋಧಿ ಕೃತ್ಯಕ್ಕೆ ನಮ್ಮ ಖಂಡನೆ ಇದೆ. ಯಾವುದೇ ಧರ್ಮ, ದೇವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಗಳಿಗೆ ಖಂಡನೆ ಇದೆ. ನವೀನ್ ಕಟ್ಟಾ ಬಿಜೆಪಿ ಅಭಿಮಾನಿ. ಆತ ಬಿಜೆಪಿಗೆ ಮತ ಹಾಕಿದ್ದ ಬಗ್ಗೆಯೂ ಪೋಸ್ಟ್ ಮಾಡಿದ್ದಾನೆ. ನವೀನ್ ಪ್ರಚೋದನಕಾರಿ ಹೇಳಿಕೆ, ಪೋಸ್ಟ್ ಮಾಡುತ್ತಿದ್ದ. ನವೀನ್ಗೂ ಶಾಸಕ ಅಖಂಡ ಶ್ರೀನಿವಾಸಮೂರ್ತಿಗೂ ರಾಜಕೀಯ ಸಂಬಂಧ ಇಲ್ಲ. ನವೀನ್ಗೆ ಬಿಜೆಪಿ ಜೊತೆ ನಿಕಟ ಸಂಪರ್ಕ ಇತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಇಂದು ಡಿ.ಕೆ. ಶಿವಕುಮಾರ್, ಜಮೀರ್ ಅಹಮದ್, ರಾಮಲಿಂಗಾರೆಡ್ಡಿ, ಬಿ.ಕೆ. ಹರಿಪ್ರಸಾದ್, ರಿಜ್ವಾನ್ ಅರ್ಷದ್, ಕೃಷ್ಣಬೈರೇಗೌಡ, ಸಲೀಂ ಅಹಮದ್, ನಾಸೀರ್ ಅಹಮದ್ ಭಾಗಿ ಈಶ್ವರ್ ಖಂಡ್ರೆ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಇಲ್ಲಿ ಮಾತನಾಡಿದ ಡಿಕೆಶಿ, ಪೊಲೀಸರು ದೂರು ಬಂದಾಗಲೇ ಕ್ರಮ ತೆಗೆದುಕೊಳ್ಳಬೇಕಿತ್ತು. ಘಟನೆಗೆ ಪೊಲೀಸರೇ ಕಾರಣ. ಅವರ ವಿಳಂಬವೇ ಕಾರಣ. ಪೊಲೀಸರು ಘಟನೆ ತಡೆಯಲು ವಿಫಲರಾಗಿದ್ದಾರೆ ಎಂದು ಆರೋಪ ಮಾಡಿದರು.

ಪೊಲೀಸರು ಶಾಸಕರು, ಶಾಸಕರ ಮನೆಗೂ ರಕ್ಷಣೆ ಕೊಡಲಿಲ್ಲ. ಪೊಲೀಸರು ಸುಮೋಟೋ ಅಡಿ ದೂರು ದಾಖಲಿಸಿ ಸಂಜೆಯೇ ಕ್ರಮ ತೆಗೆದುಕೊಳ್ಳಬೇಕಿತ್ತು. ಆದರೆ ಪೊಲೀಸರು ವಿಳಂಬ ಮಾಡಿದರು. ಆ ಭಾಗ ಸೂಕ್ಚ್ಮ ಪ್ರದೇಶ. ಫೇಸ್ ಬುಕ್ ಪೋಸ್ಟ್ ಬಂದಾಗ ಪೊಲೀಸರು ಯಾಕೆ ಸುಮ್ಮನಿದ್ದರು. ಪೊಲೀಸರಿಗೆ ಇದು ಗೊತ್ತಿದ್ದೂ ಸುಮ್ಮನಿದ್ದರು. ಘಟನೆಯ ಹೊಣೆಯನ್ನು ಪೊಲೀಸರೇ ಹೊತ್ತುಕೊಳ್ಳಬೇಕು. ಪೊಲೀಸ್ ಠಾಣೆಯನ್ನೇ ಪೊಲೀಸರು ರಕ್ಷಿಸಿಕೊಳ್ಳಲು ಆಗಲಿಲ್ಲ. ನಮ್ಮ ಶಾಸಕರಿಗೂ ರಕ್ಷಣೆ ಕೊಡಲಿಲ್ಲ. ಘಟನೆ ಹಿಂದೆ ಸಂಚು ಇದೆ. ಘಟನೆ ಬಗ್ಗೆ ಪರಿಶೀಲನೆಗೆ ನಮ್ಮ 6 ಜನ ನಾಯಕರ ತಂಡ ಹೋಗುತ್ತಿದೆ. ಜೊತೆಗೆ ನಾನು ಕೂಡ ಘಟನೆ ನಡೆದ ಸ್ಥಳಕ್ಕೆ ಹೋಗುತ್ತೇನೆ ಎಂದು ಹೇಳಿದರು.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm