ಬ್ರೇಕಿಂಗ್ ನ್ಯೂಸ್
06-10-26 09:32 am HK News Staffer ಕರ್ನಾಟಕ
ಬೆಂಗಳೂರು, ಅ 06: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 6ನೇ ತರಗತಿಯಿಂದಲೇ ಎಐ ಶಿಕ್ಷಣ ಪ್ರಾರಂಭಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸರ್ಕಾರದ 100 ದಿನಗಳ ಕಾರ್ಯ ವೈಖರಿ, ನೇಮಕಾತಿ ಹಾಗೂ ಆದ್ಯತೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾತನಾಡಿದರು. ಈ ವೇಳೆ, ''ಮಾಹಿತಿ ತಂತ್ರಜ್ಞಾನ ಇಲಾಖೆಯ ಬೆಂಬಲದೊಂದಿಗೆ ಖಾಸಗಿ ನೆರವು ಪಡೆಲು ಸೂಚಿಸಲಾಗಿದ್ದು, ಗೂಗಲ್ ಆಸಕ್ತಿ ವಹಿಸಿದೆ,''ಎಂದರು. ''9 ನೇ ತರಗತಿಯಲ್ಲಿ ಎಐ ತರಬೇತಿ ಪ್ರಾರಂಭಿಸಲಾಗಿದ್ದು, ಈಗ 6ನೇ ತರಗತಿಯಿಂದಲೇ ಎಐ ಶಿಕ್ಷಣ ಜಾರಿಗೆ ಸಿದ್ಧತೆ ನಡೆಸಲಾಗಿದೆ. ತೆಲಂಗಾಣದಲ್ಲಿ ಈಗಾಗಲೇ ಗೂಗಲ್ ಕಂಪನಿ ಎಐ ತರಬೇತಿ ಪ್ರಾರಂಭಿಸಿದೆ. ಈ ಬಗ್ಗೆ ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ,'' ಎಂದರು.
1,000 ಕೆಪಿಎಸ್ ಶಾಲೆ ;
''ರಾಜ್ಯದಲ್ಲಿ 1,000 ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ ಕ್ರಮ ವಹಿಸಲಾಗಿದ್ದು, ಜಿಲ್ಲಾಧಿಕಾರಿಗಳಿಗೆ ಕೆಪಿಎಸ್ ಶಾಲೆಗಳ ಡಿಪಿಆರ್ ಅನುಮೋದನೆ, ಟೆಂಡರ್ ಕರೆಯಲು ಅನುಮೋದನೆ ನೀಡುವ ಮೂಲಕ ಅನುಷ್ಠಾನ ಪ್ರಕ್ರಿಯೆ ಸರಳೀಕರಣಗೊಳಿಸಲಾಗಿದೆ. ನ.14ರೊಳಗೆ ಶಂಕುಸ್ಥಾಪನೆ ನೆರವೇರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಸಿಎಸ್‌ಆರ್ ನಿಧಿಯಡಿ 100 ಕೆಪಿಎಸ್ ಶಾಲೆಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಿದ್ದು, 60 ಶಾಲೆಗಳ ಅಭಿವೃದ್ಧಿಗೆ ಕಂಪನಿಗಳು ಆಸಕ್ತಿ ತೋರಿವೆ,'' ಎಂದು ಅವರು ಮಾಹಿತಿ ನೀಡಿದರು.
''ರಾಜ್ಯದ ಪ್ರಥಮ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ (ಎಐ) ವಿಶ್ವವಿದ್ಯಾಲಯಕ್ಕೆ ಜಾಗ ಗುರುತಿಸಲಾಗಿದ್ದು, 956 ಶಿಕ್ಷಕರನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಿಸಲು ಕ್ರಮ ವಹಿಸಲಾಗಿದೆ,'' ಎಂದು ಸಿಎಂ ತಿಳಿಸಿದರು.
ಕರ್ನಾಟಕದ ಶಿಕ್ಷಣ ಇಲಾಖೆ ಈಗಾಗಲೇ ತಂತ್ರಜ್ಞಾನಕ್ಕೆ ತಕ್ಕಂತೆ ಮಕ್ಕಳಿಗೆ ಕೌಶಲ ಜ್ಞಾನ ನೀಡುವ ಉದ್ದೇಶದಿಂದ ಸರ್ಕಾರಿ ಶಾಲೆಗಳಲ್ಲಿ ಕೃತಕ ಬುದ್ಧಿಮತ್ತೆ(AI) ವಿಷಯವನ್ನು ಪಾಠ ಮಾಡುವ ಕುರಿತಂತೆ ಚಿಂತನೆ ನಡೆಸುತ್ತಿದೆ. ಇದಕ್ಕಾಗಿ ರಾಜ್ಯದ 1,642 ಪ್ರೌಢಶಾಲೆಗಳಲ್ಲಿ ಓರ್ವ AI ಶಿಕ್ಷಕರನ್ನು ನೇಮಿಸುವ ಕುರಿತು ಚಿಂತನೆ ನಡೆಸುತ್ತಿದೆ. ಈ ನಡುವೆ ಇದೀಗ 6ನೇ ತರಗತಿಯಿಂದಲೇ ಮಕ್ಕಳಿಗೆ AI ತಂತ್ರಜ್ಞಾನದ ಶಿಕ್ಷಣ ನೀಡಲು ಸರ್ಕಾರ ಮುಂದಾಗಿದೆ.
Karnataka is considering extending Artificial Intelligence (AI) training in government schools to students from Class 6, Chief Minister D.K. Shivakumar said during a review meeting on the government’s 100-day programmes, recruitments and priority schemes. AI training has already begun for Class 9 students, and officials have been asked to explore extending it to younger students.
06-10-26 06:17 pm
HK News Staffer
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
06-10-26 02:46 pm
HK News Staffer
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm