ಬ್ರೇಕಿಂಗ್ ನ್ಯೂಸ್
08-10-26 04:38 pm HK News Staffer ಕರ್ನಾಟಕ
ಬಾಗಲಕೋಟೆ, ಅ.08: ಷಡ್ಯಂತ್ರ, ಕುತಂತ್ರ, ಪಿತೂರಿ, ಸ್ಟಿಂಗ್, ಡಿಂಗ್ ಆಪರೇಷನ್ ಮಾಡತಕ್ಕಂತ ಕೀರ್ತಿ ಈ ರಾಜ್ಯದ ಚುಕ್ಕಾಣಿ ಹಿಡಿದವರಿಗೆ ಸಲ್ಲುತ್ತದೆ. ಕಾಂಗ್ರೆಸ್ ಶಾಸಕರನ್ನು ಕೇಳಿದರೆ ಯಾರೆಂದು ಹೆಸರು ಹೇಳುತ್ತಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕುಟುಕಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಟಿಂಗ್, ಡಿಂಗ್ ಆಪರೇಷನ್ ಬದಿಗಿಟ್ಟು, ಜನರ ಸಂಕಷ್ಟಕ್ಕೆ ಸ್ಪಂದಿಸಬೇಕು. ಕಾಂಗ್ರೆಸ್ ನಾಯಕರಾದ ಎಚ್.ಕೆ.ಪಾಟೀಲ, ಬಸವರಾಜ ರಾಯರಡ್ಡಿ, ಬಿ.ಆರ್. ಪಾಟೀಲ ಹೇಳಿಕೆ ಗಮನಿಸಿದ್ದೀರಿ. ಪರಿಸ್ಥಿತಿ ಹೀಗೆ ಮುಂದುವರೆದರೆ, ಕಾಂಗ್ರೆಸ್ ನಾಯಕರೇ ದಂಗೆ ಏಳುತ್ತಾರೆ ಎಂದರು. ಅಹಿಂದ ಮತಗಳನನ್ನು ತೆಗೆದು ಹಾಕುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದು ಸಿಎಂ ಆರೋಪಿಸುತ್ತಿದ್ದಾರೆ. ಕೇಂದ್ರದ ನರೇಂದ್ರ ಮೋದಿ ಸರ್ಕಾರದಲ್ಲಿ 35 ಮಂದಿ ಸಚಿವರು ಹಿಂದುಳಿದವರಿದ್ದಾರೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 5 ರಿಂದ 10 ಸಾವಿರ ಡಿಲಿಟ್ ಮಾಡಿದ್ದೇವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಡಿಲಿಟ್ ಮಾಡಿಸಿದ್ದರೆ, ಆ ಮತದಾರರ ಪಟ್ಟಿ ಬಹಿರಂಗ ಪಡಿಸಬೇಕು ಎಂದು ಆಗ್ರಹಿಸಿದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ಕೇಂದ್ರದ ತಂಡ ಭೇಟಿ ಮಾಡಿ ಮನವಿ ಮಾಡಿದ್ದಾರೆ. ಈ ಹಿಂದೆ ಪ್ರವಾಹ ಬಂದಾಗ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರು ಕೇಂದ್ರ ಸರ್ಕಾರದ ಅನುದಾನಕ್ಕೆ ಕಾಯದೇ ಮನೆ ನಿರ್ಮಾಣಕ್ಕೆ ₹5 ಲಕ್ಷ ಬಿಡುಗಡೆ ಮಾಡಿದ್ದರು. ಹೆಲಿಕಾಫ್ಟರ್ನಲ್ಲಿ ಬರ ವೀಕ್ಷಣೆ, ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತು ಅಧಿಕಾರಿಗಳೊಂದಿಗೆ ಚರ್ಚೆ ಮಾಡಿರುವುದನ್ನು ನೋಡಿದರೆ ಇವರ ಕಾಳಜಿ ಗೊತ್ತಾಗುತ್ತದೆ. ಕೇಂದ್ರ ಸರ್ಕಾರ ತನ್ನ ಕಾರ್ಯ ಮಾಡುತ್ತದೆ. ರಾಜ್ಯ ಸರ್ಕಾರ ಏನು ಮಾಡಿದೆ ಎಂಬುದನ್ನು ತಿಳಿಸಬೇಕು ಎಂದು ಒತ್ತಾಯಿಸಿದರು.
ರಾಹುಲ್ ಗಾಂಧಿ ಹತಾಶರಾದಂತೆ ಕಾಣುತ್ತಿದೆ. ಎಸ್ಐಆರ್ ಮುಂದಿಟ್ಟು ದೇಶದಲ್ಲಿ ಅರಾಜಕತೆ ಸೃಷ್ಟಿ ಮಾಡುವ ಯತ್ನ ಮಾಡುತ್ತಿದ್ದಾರೆ. ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಿರುವುದನ್ನು ಅವರಿಗೆ ಸಹಿಸಲು ಆಗುತ್ತಿಲ್ಲ. ಸಂವಿಧಾನಿಕ ಸಂಸ್ಥೆಗಳ ಹೆಸರಿನಲ್ಲಿ ಮೋದಿ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ರಾಜ್ಯದಲ್ಲಿ ಮುಖ್ಯಮಂತ್ರಿ ನೋಡಿದರೆ ಅಯ್ಯೋ ಪಾಪ ಎನಿಸುತ್ತದೆ. ಸಮಸ್ಯೆಗಳನ್ನು ಪರಿಹರಿಸಲು ಆಗುತ್ತಿಲ್ಲ. ಭೀಕರ ಬರಗಾಲದಲ್ಲಿ ಸರ್ಕಾರ ಇದೆ ಎಂದು ರೈತರಿಗೆ ಅನಿಸುತ್ತಿಲ್ಲ. ಇಲ್ಲಿಯವರೆಗೂ ಪರಿಹಾರ ನೀಡಿಲ್ಲ. ಅವರಿಗೆ ರಿಯಲ್ ಎಸ್ಟೇಟ್ ಬಗ್ಗೆ ಇರುವ ಆಸಕ್ತಿ ಜನರ ಬಗ್ಗೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಪ್ರತಿ ಹೆಕ್ಟೇರ್ಗೆ ₹50 ಸಾವಿರ ಪರಿಹಾರ ನೀಡಬೇಕು. ₹5 ಲಕ್ಷದ ವರೆಗಿನ ರೈತರ ಸಾಲ ಮನ್ನಾ ಮಾಡಬೇಕು. ನಾಲ್ಕೈದು ತಿಂಗಳ ಮಟ್ಟಿಗಾದರೂ ರೈತರಿಗೆ ನೀಡುವ ಪ್ರೋತ್ಸಾಹ ಧನವನ್ನು ₹5 ಹೆಚ್ಚಳ ಮಾಡಬೇಕು. ಉತ್ತರ ಕರ್ನಾಟಕದ ಜನರು ಗುಳೆ ಹೋಗುತ್ತಿದ್ದಾರೆ. ಅದನ್ನು ತಡೆಯಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
08-10-26 08:44 pm
HK News Staffer
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am