Rahul Gandhi, Siddaramaiah: ಸ್ಟಿಂಗ್ ಆಪರೇಶನ್ ; ನ.2ರಂದು ದೆಹಲಿಗೆ ಸಿದ್ದರಾಮಯ್ಯ, ರಾಹುಲ್ ಗಾಂಧಿಗೆ ದೂರು ನೀಡಲು ಸಿದ್ಧತೆ

26-10-26 11:53 am       HK News Staffer   ಕರ್ನಾಟಕ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ವಿರುದ್ಧ ನಡೆದಿದೆಯೆನ್ನಲಾದ ಸ್ಟಿಂಗ್ ಆಪರೇಷನ್ ಕುರಿತು ಚರ್ಚಿಸಲು ನವೆಂಬರ್ 1- 2ರಂದು ದೆಹಲಿಗೆ ತೆರಳಲಿದ್ದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ.‌

ಬೆಂಗಳೂರು, ಅ.26: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ವಿರುದ್ಧ ನಡೆದಿದೆಯೆನ್ನಲಾದ ಸ್ಟಿಂಗ್ ಆಪರೇಷನ್ ಕುರಿತು ಚರ್ಚಿಸಲು ನವೆಂಬರ್ 1- 2ರಂದು ದೆಹಲಿಗೆ ತೆರಳಲಿದ್ದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ.‌

ನವೆಂಬರ್ 1ರಂದು ಎಐಸಿಸಿ ಆಯೋಜಿಸಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆಂದು ತಿಳಿದುಬಂದಿದೆ. ಇದೇ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರ ಭೇಟಿಗೆ ಸಮಯ ಕೋರಿ ಮನವಿ ಮಾಡಿದ್ದು, ನವೆಂಬರ್ 2ರಂದು ಭೇಟಿಯಾಗಲು ರಾಹುಲ್ ಸಮಯ ನೀಡಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಅವರ ವಿರುದ್ಧ ನಡೆದಿದೆಯೆನ್ನಲಾದ ಸ್ಟಿಂಗ್ ಕಾರ್ಯಾಚರಣೆ ಕರ್ನಾಟಕದಲ್ಲಿ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ತಮ್ಮ ವರ್ಚಸ್ಸಿಗೆ ಧಕ್ಕೆ ತರುವ ಹಾಗೂ ನಕಲಿ ವಿಡಿಯೊ ಮೂಲಕ ಬ್ಲ್ಯಾಕ್‌ಮೇಲ್ ಮಾಡುವ ಉದ್ದೇಶದಿಂದ ಈ ಷಡ್ಯಂತ್ರ ರೂಪಿಸಲಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಸಂಬಂಧ ತನಿಖೆ ನಡೆಸುವಂತೆ ಈಗಾಗಲೇ ದೂರು ದಾಖಲಿಸಿದ್ದಾರೆ.

ಇದೇ ವೇಳೆ, ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ವಿಡಿಯೊ ಪ್ರಸಾರ ಹಾಗೂ ಇದರ ಹಿಂದೆ ಕಾರ್ಯ ನಿರ್ವಹಿಸಿರುವುದಾಗಿ ಆರೋಪಿಸಲಾಗಿರುವ ಜಾಲದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.