ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಶಾಕ್ ; ನಂದಿನಿ ಹಾಲಿಗೆ ಲೀಟರಿಗೆ 8 ರೂ. ಹೆಚ್ಚಳ, ನವೆಂಬರ್ 1ರಿಂದಲೇ ಹೊಸ ದರ ಜಾರಿ

29-10-26 08:21 pm       HK News Staffer   ಕರ್ನಾಟಕ

ರಾಜ್ಯ ಸರ್ಕಾರ ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆ ಶಾಕ್ ನೀಡಿದ್ದು, ನಂದಿನ ಹಾಲಿನ ದರ ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಇದರಂತೆ, ನವೆಂಬರ್ 1ರಿಂದಲೇ ಹೊಸ ದರ ಜಾರಿಗೆ ಬರಲಿದೆ.

ಬೆಂಗಳೂರು, ಅ.29: ರಾಜ್ಯ ಸರ್ಕಾರ ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆ ಶಾಕ್ ನೀಡಿದ್ದು, ನಂದಿನ ಹಾಲಿನ ದರ ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಇದರಂತೆ, ನವೆಂಬರ್ 1ರಿಂದಲೇ ಹೊಸ ದರ ಜಾರಿಗೆ ಬರಲಿದೆ. 

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಿಸಲು ನಿರ್ಧರಿಸಲಾಗಿದೆ. ಹೆಚ್ಚಿಗೆ ಮಾಡಲಾಗುವ 8 ರೂಪಾಯಿಯಲ್ಲಿ 7 ರೂಪಾಯಿ ಹಾಲು ಉತ್ಪಾದಕರಿಗೆ ಮತ್ತು 1 ರೂಪಾಯಿ ಕೆಎಂಎಫ್ ಗೆ ನೀಡಲಾಗುವುದು ಮತ್ತು ಪರಿಷ್ಕೃತ ದರ ನವೆಂಬರ್‌ 1 ರಿಂದಲೇ ಜಾರಿಯಾಗಲಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. 

ಸರ್ವಾನುಮತದಿಂದ ಕೈಗೊಂಡ ತೀರ್ಮಾನ ಇದಾಗಿದೆ. ಇನ್ಮುಂದೆ ರೈತರಿಗೆ 35 ರೂ. ಬದಲು 42 ರೂ. ಲೀಟರ್‌ಗೆ ಸಿಗಲಿದೆ. ಇದರ ಜೊತೆಗೆ ಪ್ರೋತ್ಸಾಹ ಧನ 5 ರೂ. ಸಿಗ್ತಿದೆ. ಒಟ್ಟು 47 ರೂ. ಲೀಟರ್ ಹಾಲಿಗೆ ಇನ್ಮುಂದೆ ರೈತರಿಗೆ ಸಿಗಲಿದೆ ಎಂದು ಮಾಹಿತಿ ನೀಡಿದರು. ಕಳೆದ ಸಚಿವ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಒಪ್ಪಿಗೆ ನೀಡಲಾಗಿತ್ತು. ಆದರೆ ವಿಧಾನ ಪರಿಷತ್ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿಗಳ ವಿವೇಚನೆಗೆ ಬಿಡಲಾಗಿತ್ತು. ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯದ ಜನತೆಗೆ ದರ ಏರಿಕೆ ಶಾಕ್ ನೀಡಲಾಗಿದೆ.