ಬ್ರೇಕಿಂಗ್ ನ್ಯೂಸ್
09-11-26 07:45 pm HK News Staffer ಕರ್ನಾಟಕ
ಬೆಂಗಳೂರು, ನ.9: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕಾಣಿಸಿಕೊಂಡಿದ್ದ ಮಕ್ಕಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷೆ ಕೃಪಾ ಆಳ್ವ ಸೋಮವಾರ ಸೈಬರ್ ಕ್ರೈಂ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಕಳೆದ ವಾರವಷ್ಟೇ ಕೃಪಾ ಆಳ್ವಾಗೆ ನ್ಯಾಯಾಲಯವು ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿತ್ತು. ತನಿಖಾಧಿಕಾರಿಗಳು ವಿಚಾರಣೆಗೆ ಕರೆದಾಗ ಬರಬೇಕು. ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಷರತ್ತು ವಿಧಿಸಿ ಜಾಮೀನು ನೀಡಲಾಗಿತ್ತು. ಪ್ರಕರಣ ಸಂಬಂಧಿಸಿದ ವಿಡಿಯೋದಲ್ಲಿ ಕೃಪಾ ಆಳ್ವ ಮತ್ತು ಪವರ್ ಟಿವಿಯ ರಾಕೇಶ್ ಶೆಟ್ಟಿ ಕಾಣಿಸಿಕೊಂಡಿದ್ದರು.
ವಿಚಾರಣೆಗೆ ಹಾಜರಾಗುವಂತೆ ನೀಡಿದ ನೋಟಿಸ್ ಮೇರೆಗೆ ಕೃಪಾ ಆಳ್ವ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸೈಬರ್ ಕ್ರೈಂ ಪೊಲೀಸರ ಮುಂದೆ ಹಾಜರಾಗಿದ್ದರು. ಎರಡೂವರೆ ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದು, ನವೆಂಬರ್ 11ರಂದು ಮತ್ತೆ ವಿಚಾರಣೆಗೆ ಬರುವಂತೆ ಪೊಲೀಸರು ಸೂಚಿಸಿದ್ದಾರೆ. ಇದಕ್ಕೂ ಮುನ್ನ ಕೃಪಾ ಆಳ್ವಾ ಪರ ವಕೀಲೆ ನಿಖಿತಾ ಮಾಧ್ಯಮದವರೊಂದಿಗೆ ಮಾತನಾಡಿ, ಕೃಪಾ ಆಳ್ವಾ ಅವರು ಈಗಾಗಲೇ ಎರಡು ಬಾರಿ ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಮತ್ತೊಮ್ಮೆ ಬರುವುದಕ್ಕೆ ಸೂಚಿಸಿದ್ದರು. ಇದರಂತೆ ಇಂದು ವಿಚಾರಣೆಗೆ ಬಂದಿದ್ದಾರೆ ಎಂದರು.
ವಿದೇಶಕ್ಕೆ ಹೋಗಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ವಕೀಲೆ, ಕೃಪಾ ಆಳ್ವಾ ಅವರು ಮಗಳೊಂದಿಗೆ ವಿದೇಶಕ್ಕೆ ಹೋಗಿದ್ದರು. ಪೂರ್ವ ನಿಯೋಜಿತ ಪ್ರವಾಸವಾಗಿತ್ತು, ಹೊರತು ಬೇರೆ ಉದ್ದೇಶ ಇರಲಿಲ್ಲ ಎಂದು ತಿಳಿಸಿದರು.
09-11-26 07:45 pm
HK News Staffer
ಒಂದು ಕೋಟಿಗೆ 1.30 ಕೋಟಿ ಆಫರ್ ! ಹಣ ದುಪ್ಪಟ್ಟು ಪ್ಲ...
08-11-26 10:24 pm
ತುಂಡು ತುಂಡಾಗಿ ಕತ್ತರಿಸುತ್ತಾರೆಂದು ಹೇಳಿಕೆ ; ಛಲವಾ...
07-11-26 09:34 pm
ವಿಧಾನ ಪರಿಷತ್ ಚುನಾವಣೆ ಸೋಲಿಗೆ ಸ್ಟಿಂಗ್ ಕಾರಣ ; 5...
03-11-26 09:48 pm
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲ...
03-11-26 01:01 pm
09-11-26 04:45 pm
HK News Staffer
ಯುದ್ಧ ನಿಲ್ಲಿಸಿ ಸಂಧಾನಕ್ಕೆ ಬನ್ನಿ.. ಇಲ್ಲದಿದ್ದರೆ...
09-11-26 11:51 am
ಇಸ್ರೇಲ್ ಅಧಿಪತ್ಯ ಪಡೆಯಲು ನೆತನ್ಯಾಹು ಸೋಲು ; ಹೊಸ ಸ...
29-10-26 09:28 pm
ಆಡಳಿತ ಬದಲಾವಣೆ ಉದ್ದೇಶದ ಹಿಂಸಾತ್ಮಕ ಪ್ರತಿಭಟನೆಗಳಲ್...
29-10-26 08:23 pm
'ಮೋದಿ ಅಪ್ಪನೂ ಜೈಲಿಗೆ ಹೋಗಬೇಕಾಗುತ್ತೆ!' ; ವಿವಾದಕ್...
25-10-26 09:40 pm
09-11-26 10:03 pm
HK News Staffer
ಮಂಗಳೂರಿನಲ್ಲಿ ಅಪರೂಪದ ಹಕ್ಕಿ ಪತ್ತೆ: ಕರಾವಳಿಯ ಪಕ್ಷ...
09-11-26 10:02 pm
ಪಾದ್ರಿ ಸಿಪ್ರಿಯನ್ ಪಿಂಟೋ ವಿರುದ್ಧ ಮತ್ತೊಂದು ದೂರು...
09-11-26 06:57 pm
ವಿಗ್ರಹ ಮಾರಾಟ ಆರೋಪದ ಬೆನ್ನಲ್ಲೇ ತಲಕಾವೇರಿಯಲ್ಲಿ ಬಾ...
08-11-26 10:43 pm
ಬ್ರಿಟಿಷ್ ಕಾಲದ ಶತಮಾನ ಪೂರೈಸಿದ ಹಾಸ್ಟೆಲ್ ಕಟ್ಟಡ ನೆ...
08-11-26 10:13 pm
07-11-26 11:07 pm
HK News Desk
15 ದಿನಗಳಲ್ಲಿ ಏಳು ಕೊಲೆ ! ಚಿನ್ನಾಭರಣ ದೋಚಿ ಶವಗಳನ್...
07-11-26 10:39 am
Mangalorr Police, Arrest: ವಾಕಿಂಗ್ ಮಾಡುತ್ತಿದ್ದ...
06-11-26 08:08 pm
Naresh Bhat, Wife Murder: ಪತ್ನಿ ವಿಷ ಕುಡಿದು ಆತ...
06-11-26 05:01 pm
ಬೆಂಗಳೂರಿನಲ್ಲಿ ಭೀಕರ ಹತ್ಯಾಕಾಂಡ ; ಪತ್ನಿ ಮೇಲಿನ ಸಿ...
06-11-26 10:55 am