ಬಿಸ್ಲೆರಿ ನೀರಿನಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ ; ಕಂಪೆನಿ ವಿರುದ್ಧ ಕ್ರಮಕ್ಕೆ ಭಾರತೀಯ ಆಹಾರ ಸುರಕ್ಷತಾ ಪ್ರಾಧಿಕಾರ ಶಿಫಾರಸು

23-11-26 09:23 pm       HK News Staffer   ಕರ್ನಾಟಕ

ಶುದ್ಧ ನೀರು ಎಂದು ಕುಡಿಯುವ ಬಿಸ್ಲರಿಯಲ್ಲಿ ಕ್ಯಾನ್ಸರ್​​ಕಾರಕ ರಾಸಾಯನಿಕ ಪತ್ತೆಯಾಗಿದೆ. ಹೀಗಾಗಿ 'ಬಿಸ್ಲೆರಿ ಇಂಟರ್‌ನ್ಯಾಷನಲ್' ಸಂಸ್ಥೆಯ ಕುಡಿಯುವ ನೀರಿನ ಮಾದರಿಯು ಕುಡಿಯಲು ಅಸುರಕ್ಷಿತ ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಹೇಳಿದ್ದಲ್ಲದೆ, ಕಂಪನಿಯ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದೆ.

ನವದೆಹಲಿ, ನ.23: ಶುದ್ಧ ನೀರು ಎಂದು ಕುಡಿಯುವ ಬಿಸ್ಲರಿಯಲ್ಲಿ ಕ್ಯಾನ್ಸರ್​​ಕಾರಕ ರಾಸಾಯನಿಕ ಪತ್ತೆಯಾಗಿದೆ. ಹೀಗಾಗಿ 'ಬಿಸ್ಲೆರಿ ಇಂಟರ್‌ನ್ಯಾಷನಲ್' ಸಂಸ್ಥೆಯ ಕುಡಿಯುವ ನೀರಿನ ಮಾದರಿಯು ಕುಡಿಯಲು ಅಸುರಕ್ಷಿತ ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಹೇಳಿದ್ದಲ್ಲದೆ, ಕಂಪನಿಯ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದೆ. 

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ (FSS Act, 2006) ಅಡಿಯಲ್ಲಿ, ಅಸುರಕ್ಷಿತ ಕುಡಿಯುವ ನೀರಿನ ಪೂರೈಕೆಗೆ ಸಂಬಂಧಿಸಿದ ಉಲ್ಲಂಘನೆಗಳಿಗಾಗಿ ಕಂಪನಿಯ ವಿರುದ್ಧ ಕ್ರಮಕ್ಕೆ ಮುಂದಾಗಿರುವುದಾಗಿ ಎಫ್‌ಎಸ್‌ಎಸ್‌ಎಐ ಎಕ್ಸ್​​ನಲ್ಲಿ ಪೋಸ್ಟ್‌ ಹಂಚಿಕೊಂಡಿದೆ. 

ಬಿಸ್ಲೆರಿ ಇಂಟರ್‌ನ್ಯಾಶನಲ್ ಗೋವಾ ಘಟಕದಿಂದ 'ಪ್ಯಾಕೇಜ್ಡ್ ಕುಡಿಯುವ ನೀರು ಮಾದರಿಯನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿತ್ತು. 2025ರಲ್ಲಿ ಸಂಗ್ರಹಿಸಿದ ಮಾದರಿಯಲ್ಲಿ ಬ್ರೋಮೇಟ್ ಅಂಶ ಹೆಚ್ಚಿರುವುದು ಪತ್ತೆಯಾಗಿದ್ದರಿಂದ ಕುಡಿಯಲು ಅಸುರಕ್ಷಿತ ಎಂದು ಘೋಷಿಸಲಾಗಿತ್ತು. ಇದನ್ನು ಪ್ರಶ್ನಿಸಿ ಕಂಪನಿಯು ಮೇಲ್ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ, ಹೆಚ್ಚಿನ ಪರೀಕ್ಷೆಗಾಗಿ ಮಾದರಿಯನ್ನು ರೆಫರಲ್ ಆಹಾರ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅಲ್ಲಿನ ಪರೀಕ್ಷೆಯಲ್ಲೂ ನೀರಿನಲ್ಲಿ ಪಾಲಿನ್ಯೂಕ್ಲಿಯರ್ ಆರೊಮ್ಯಾಟಿಕ್ ಹೈಡ್ರೋಕಾರ್ಬನ್‌ಗಳು ಇರುವುದು ಪತ್ತೆಯಾಗಿದ್ದು, ನೀರು ಅಸುರಕ್ಷಿತ ಎಂದು ವರದಿ ನೀಡಿದೆ.

ಅಂತಾರಾಷ್ಟ್ರೀಯ ಕ್ಯಾನ್ಸರ್ ಸಂಶೋಧನಾ ಸಂಸ್ಥೆ (ಐಎಆರ್​ಸಿ) ಮತ್ತು ಯುಎಸ್ ಇಪಿಎ (ಯುಸ್​ ಇಪಿಎ) ಸೇರಿದಂತೆ ಜಾಗತಿಕ ಆರೋಗ್ಯ ಮತ್ತು ಪರಿಸರ ಸಂಸ್ಥೆಗಳು ಬ್ರೋಮೇಟ್ ಹಾಗೂ ಪಿಎಹೆಚ್ (PAHs) ಎರಡನ್ನೂ ಕ್ಯಾನ್ಸರ್ ಕಾರಕ ಅಂಶಗಳೆಂದು ವರ್ಗೀಕರಿಸಿವೆ. ಪ್ರಯೋಗಾಲಯದ ವರದಿಗಳು ಕಾಯ್ದೆಯ ಉಲ್ಲಂಘನೆಯನ್ನು ದೃಢಪಡಿಸಿದ ಹಿನ್ನೆಲೆಯಲ್ಲಿ ಬಿಸ್ಲೆರಿ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ನೀಡಲಾಗಿದೆ ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ. ಬಿಸ್ಲೆರಿ ಮಾತ್ರವಲ್ಲದೆ, ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆಗಾಗಿ ಪ್ರಾಧಿಕಾರವು ಇತರ ಹಲವು ನೀರಿನ ಕಂಪನಿಗಳ ವಿರುದ್ಧವೂ ಕಾನೂನು ಕ್ರಮಕ್ಕೆ ಅನುಮತಿ ನೀಡಿದೆ. ವಸಂತ್ ಮಸಾಲಾ ಪ್ರೈವೇಟ್ ಲಿಮಿಟೆಡ್, ಟಿಟ್-ಬಿಟ್ ಫುಡ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಮಿಮಾಂಸ ಇಂಡಸ್ಟ್ರೀಸ್ ಮತ್ತು ಆಶಾ ಕನ್ಫೆಕ್ಷನರಿ ವಿರುದ್ಧ ಕ್ರಮಕ್ಕೆ ಅನುಮತಿ ನೀಡಲಾಗಿದೆ.