ಬ್ರೇಕಿಂಗ್ ನ್ಯೂಸ್
14-08-20 07:55 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 14: ಶೃಂಗೇರಿಯಲ್ಲಿ ಶಂಕರಾಚಾರ್ಯರಿಗೆ ಅಪಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸ್ ತನಿಖೆಯಲ್ಲಿ ಇದು ಕುಡುಕನೊಬ್ಬನ ಕೃತ್ಯ ಎಂಬುದು ಸಾಬೀತಾಗಿದೆ.
ಶೃಂಗೇರಿಯಲ್ಲಿ ಶಂಕರಾಚಾರ್ಯರ ಪುತ್ಥಳಿ ಮೇಲೆ ಎಸ್ ಡಿ ಪಿ ಐ ಬಾವುಟ ಕಟ್ಟಿ ಅವಮಾನ ಮಾಡಲಾದ ಘಟನೆ ನಿನ್ನೆ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಗುವಿನ ವಾತಾವರಣ ಸೃಷ್ಠಿಯಾಗಿತ್ತು. ಆದರೀಗ ಈ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಪೊಲೀಸರ ಮೇಲೆ ದ್ವೇಷ ಸಾಧಿಸಲು ಕುಡಿದ ಅಮಲಿನಲ್ಲಿ ಕಳ್ಳತನ ಪ್ರಕರಣದ ಆರೋಪಿಯೊಬ್ಬ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮಿಲಿಂದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಿಲಿಂದ್ ಕೃತ್ಯ ಸಿಸಿಟಿವಿ ಯಲ್ಲಿ ದಾಖಲಾಗಿದೆ. ಈ ಮೂಲಕ ಪೊಲೀಸರ ಮೇಲೆ ಸೇಡು ತೀರಿಸಿಕೊಳ್ಳಲು ನಡೆಸಿದ ಮಿಲಿಂದ್ ನ ಕೃತ್ಯ ಬಯಲಾದಂತೆ ಆಗಿದೆ.
ಆಗಸ್ಟ್ 12ರಂದು ಶೃಂಗೇರಿ ಪಟ್ಟಣದ ಭಾರತೀ ಬೀದಿಯಲ್ಲಿರುವ ನಾಗಪ್ಪ ಜ್ಯುವೆಲರಿಗೆ ಲಾಂಗ್ ಹಿಡಿದು ನುಗ್ಗಿದಂತ ಆರೋಪಿಯೊಬ್ಬ ಚಿನ್ನಾಭರಣ ದೋಚಿದ್ದನು. ಈ ಪ್ರಕರಣ ಸಂಬಂಧ ಪೊಲೀಸರು ಅನುಮಾನದ ಮೂಲಕ ಮಿಲಿಂದ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಬಿಟ್ಟು ಕಳುಹಿಸಿದ್ದರು.
ಪೊಲೀಸರು ತನ್ನನ್ನು ಕರೆದು ವಿಚಾರಣೆ ನಡೆಸಿದ್ದರಿಂದ ಕೋಪಗೊಂಡಿದ್ದ ಮಿಲಿಂದ್ ಪೊಲೀಸರ ವಿರುದ್ಧ ಸೇಡು ತೀರಿಸಿಕೊಳ್ಳಲು ಕೋಮು ದ್ವೇಷ ಹರಡಲು ಈ ಕೃತ್ಯ ಎಸಗಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm