ಬ್ರೇಕಿಂಗ್ ನ್ಯೂಸ್
15-08-20 11:53 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 15: ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ಮಾಡಿದ ಸಿಎಂ ಯಡಿಯೂರಪ್ಪ, ಕೊರೋನಾದಿಂದ ಮೃತಪಟ್ಟ ವಾರಿಯರ್ಸ್ಗಳಿಗೆ 30 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾದ ವಿವಿಧ ಕ್ಷೇತ್ರಗಳಿಗೆ 3,187 ಕೋಟಿ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಕೊರೋನಾ ನಿಯಂತ್ರಣಕ್ಕೆ ಶ್ರಮಿಸಿದ ಎಲ್ಲರನ್ನೂ ನಾನು ಸ್ಮರಿಸುತ್ತೇನೆ ಎಂದಿದ್ದಾರೆ. ಕರ್ನಾಟಕದಲ್ಲಿ ಕೊರೊನಾ ಮಧ್ಯೆ ಎಸ್ಎಸ್ಎಲ್ಸಿ ಯಶಸ್ವಿಯಾಗಿ ನಡೆಸಲಾಗಿದೆ. ನಮ್ಮ ಮಾದರಿಯನ್ನ ಕೇಂದ್ರ ಹಾಗೂ ಅನೇಕ ರಾಜ್ಯಗಳು ಅನುಸರಿಸಿವೆ. ಸಿಇಟಿ ಪರೀಕ್ಷೆಯಲ್ಲಿ ಕೊರೊನಾ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶ ಕೊಡಲಾಗಿದೆ. ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣ ನೀಡಲು ಅಗತ್ಯ ಕ್ರಮವಹಿಸಿದೆ. ಜೊತೆಗೆ ವಿದ್ಯಾಗಮ ವಿಶೇಷ ಕಾರ್ಯಕ್ರಮ ಜಾರಿ ಮಾಡಿದೆ ಎಂದರು.
ಎಲ್ಲಾ ಜಿಲ್ಲೆಯಲ್ಲಿ ಕೇರ್ ಸೆಂಟರ್ ಸ್ಥಾಪನೆ, ಫೀವರ್ ಕ್ಲೀನಿಕ್ ಸ್ಥಾಪನೆ ಮಾಡಲಾಗಿದೆ. ಕ್ವಾರಂಟೇನ್ ವ್ಯವಸ್ಥೆ ಮಾಡಿದ್ದೇವೆ. ಆಯುಷ್ಮಾನ್ ಭಾರತ್ ಅಡಿ 1.31 ಕೋಟಿ ಜನರಿಗೆ ಕಾರ್ಡ್ ವಿತರಿಸಲಾಗಿದೆ. 1,694 ಕೋಟಿ ವೆಚ್ಚದಲ್ಲಿ 8.5 ಲಕ್ಷ ಫಲಾನುಭವಿಗಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.
ಕೊರೊನಾ ಹಿನ್ನೆಲೆಯಲ್ಲಿ ಕಾರ್ಮಿಕರು, ಕ್ಷೌರಿಕ, ಆಟೋ ಚಾಲಕರು ಸೇರಿದಂತೆ ದುರ್ಬಲ ವರ್ಗದವರಿಗೆ 3,187 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕೊರೊನಾ ವಾರಿಯರ್ಸ್ ಮತ್ತು ಸರ್ಕಾರೇತರ ಸಂಸ್ಥೆಗಳು, ಉದ್ಯಮಿಗಳನ್ನ ಸಿಎಂ ನೆನಪಿಸಿಕೊಂಡರು.
ಕಿಸಾನ್ ಸಮ್ಮಾನ್ ಯೋಜನೆಗೆ 6 ಸಾವಿರದ ಜೊತೆ ರಾಜ್ಯ ಸರ್ಕಾರ 4 ಸರ್ಕಾರ ನೀಡುತ್ತಿದೆ. ಮೊದಲ ಕಂತು 2 ಸಾವಿರ ಈಗಾಗಲೇ ಬಿಡುಗಡೆ ಮಾಡಿದೆ. 50 ಲಕ್ಷ ರೈತರಿಗೆ ಹಣ ತಲುಪಿದೆ. ಇನ್ನೂ 10 ಲಕ್ಷ ರೈತರಿಗೆ 6,500 ಕೋಟಿ ಬೆಳೆ ಸಾಲ ನೀಡಲಾಗಿದೆ. 2020-21 ನೇ ಸಾಲಿಗೆ 14.50 ಸಾವಿರ ಕೋಟಿ ಬೆಳೆ ಸಾಲ ನೀಡುವ ಗುರಿ ಸರ್ಕಾರ ಹೊಂದಿದೆ. ಹೆಸರುಕಾಳು, ತೊಗರಿ, ಶೆಂಗಾ, ಕಡಲೇಕಾಳು, ಕೊಬ್ಬರಿಗೆ ಸೇರಿದಂತೆ ಹಲವು ಬೆಳೆಗೆ 3,175 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಸಿಎಂ ಯಡಿಯೂರಪ್ಪ ಕೊರೊನಾದಿಂದ ಗುಣಮುಖರಾದ ಬಳಿಕ ಮೊದಲ ಕಾರ್ಯಕ್ರಮ ಇದಾಗಿದ್ದು, ಸಿಎಂಗಾಗಿ ವಿಶೇಷವಾಗಿ ವೇದಿಕೆ ಸಿದ್ಧತೆ ಮಾಡಲಾಗಿತ್ತು. ವೇದಿಕೆಗೆ ಸೋಂಕು ತಡೆ ಪರದೆ(ಫೇಸ್ ಶೀಲ್ಡ್ ಪರದೆ) ಅಳವಡಿಕೆ ಮಾಡಲಾಗಿತ್ತು. ಸಿಎಂ ಆಗಮನದಿಂದ ಧ್ವಜಾರೋಹಣ ಮಾಡೋವರೆಗೂ ಪರದೆ ಅಳವಡಿಕೆ ಮಾಡಲಾಗಿತ್ತು. ಅಲ್ಲದೇ ವೇದಿಕೆ ಮೇಲೆ ಮೂವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಜೊತೆಗೆ ಪ್ರತ್ಯೇಕ ಆಸನ ವ್ಯವಸ್ಥೆ ಹಾಗೂ ಪ್ರತಿ ಆಸನಕ್ಕೆ ಫೇಸ್ಶೀಲ್ಡ್ ಪರದೆಯನ್ನು ಅಳವಡಿಕೆ ಮಾಡಲಾಗಿತ್ತು.
ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣ ಮಾಡಲಾಗುತ್ತದೆ ಎಂದು ಸಿಎಂ ಘೋಷಣೆ ಮಾಡಿದರು.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm