ಬ್ರೇಕಿಂಗ್ ನ್ಯೂಸ್
17-02-21 12:53 pm Mangaluru Correspondent ಕರ್ನಾಟಕ
ಬೆಂಗಳೂರು, ಫೆ.17: ರಾಜ್ಯದಲ್ಲಿ ಮಂಗಳೂರು, ದಾವಣಗೆರೆ, ಬೆಂಗಳೂರು ಮತ್ತು ತುಮಕೂರಿನಲ್ಲಿ ಹತ್ತಕ್ಕೂ ಹೆಚ್ಚು ಮೆಡಿಕಲ್ ಕಾಲೇಜು ಮಾಲೀಕರನ್ನು ಗುರಿಯಾಗಿರಿಸಿ ಐಟಿ ಮತ್ತು ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಏಕಕಾಲದಲ್ಲಿ ಗೋವಾ, ಬೆಳಗಾವಿ, ಬೆಂಗಳೂರಿನ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು , ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ತುಮಕೂರಿನಲ್ಲಿ ಬಿಜಿಎಸ್ ಶಿಕ್ಷಣ ಸಂಸ್ಥೆಗಳಿಗೂ ಅಧಿಕಾರಿಗಳು ಶಾಕ್ ನೀಡಿದ್ದಾರೆ. ದಾವಣಗೆರೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪರಿಗೆ ಸೇರಿದ ಜೆಜೆಎಂ ಮತ್ತು ಎಸ್ ಎಸ್ ಕಾಲೇಜಿಗೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಪ್ರತಿಷ್ಠಿತ ಎಜೆ ಶೆಟ್ಟಿ ಮೆಡಿಕಲ್ ಕಾಲೇಜು, ಯೇನಪೋಯ ಮೆಡಿಕಲ್ ಕಾಲೇಜು, ಕಣಚೂರು ಮೆಡಿಕಲ್ ಕಾಲೇಜು, ಶ್ರೀನಿವಾಸ ಮೆಡಿಕಲ್ ಕಾಲೇಜು ಮುಖ್ಯಸ್ಥರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.




ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಸಪ್ತಗಿರಿ ಕಾಲೇಜಿನ ಮುಖ್ಯಸ್ಥ ದಯಾನಂದ ಮನೆ ಮತ್ತು ಕಚೇರಿಗೂ ದಾಳಿ ನಡೆಸಲಾಗಿದೆ. ಆಕಾಶ್ ಆಸ್ಪತ್ರೆ ಮತ್ತು ಅದರ ಮಾಲೀಕರ ಮನೆಗೂ ದಾಳಿ ನಡೆದಿದೆ. ತುಮಕೂರಿನ ಶಿರಾ ಗೇಟ್ ನಲ್ಲಿರುವ ಶ್ರೀದೇವಿ ಮೆಡಿಕಲ್ ಕಾಲೇಜಿಗೂ ದಾಳಿ ನಡೆದಿದೆ. ಬಿಜೆಪಿ ನಾಯಕ ಹುಲಿನಾಯ್ಕರ್ ಅವರಿಗೆ ಸೇರಿದ ಕಾಲೇಜು ಇದಾಗಿದ್ದು, ಗೋವಾ ಮತ್ತು ಬೆಳಗಾವಿ ಮೂಲದ ಐಟಿ ಮತ್ತು ಇಡಿ ಅಧಿಕಾರಿಗಳು ದಾಳಿ ನೇತೃತ್ವ ವಹಿಸಿದ್ದಾರೆ.
ಮೆಡಿಕಲ್ ಕಾಲೇಜುಗಳ ಮೂಲಕ ಐಟಿ ತೆರಿಗೆ ವಂಚನೆ, ದಾಖಲೆಗಳಲ್ಲಿ ಅಪರಾತಪರಾ ಮಾಡಿ ಸರಕಾರಕ್ಕೆ ಕೋಟ್ಯಂತರ ರೂಪಾಯಿ ವಂಚನೆ ಎಸಗಿದ ಆರೋಪದಲ್ಲಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.
Income Tax department raids several Medical colleges and their owner's residence and properties in Bangalore, Tumkur, Davanagere and Mangalore in Karnataka.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm