ಬ್ರೇಕಿಂಗ್ ನ್ಯೂಸ್
17-08-20 06:33 pm Headline Karnataka News Network ಕರ್ನಾಟಕ
ಧಾರವಾಡ, ಆಗಸ್ಟ್ 17: ಕರೊನಾ ಹಾವಳಿ ಕ್ಷಣಕ್ಷಣಕ್ಕೂ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಿದರೆ ಪರಿಸ್ಥಿತಿ ಮಿತಿಮೀರಬಹುದು ಎನ್ನುವ ಕಾರಣಕ್ಕೆ ರಾಜ್ಯ ಸರ್ಕಾರ ಸಾರ್ವಜನಿಕ ಗಣೇಶೋತ್ಸವ ಆಚರಣೆಯನ್ನು ನಿಷೇಧಿಸಿದೆ.
ಇದಕ್ಕೆ ಕಿಡಿಕಾರಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಸರ್ಕಾರಕ್ಕೆ 24 ಗಂಟೆಗಳ ಗಡುವು ನೀಡಿದ್ದು, ಸಾರ್ವಜನಿಕ ಉತ್ಸವಕ್ಕೆ ಅವಕಾಶ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಧಾರವಾಡದಲ್ಲಿ ಪ್ರತಿಭಟನೆ ನಡೆಸಿರುವ ಅವರು, ‘ಮುಂಬೈನಲ್ಲಿ ಕೂಡ ಕರೊನಾ ಹಾವಳಿ ಹೆಚ್ಚಾಗಿದೆ. ಆದರೆ ಅಲ್ಲಿ ಕೂಡ ಕೆಲವೊಂದು ಷರತ್ತುಗಳನ್ನು ವಿಧಿಸಿ, ಸಾರ್ವಜನಿಕ ಉತ್ಸವಕ್ಕೆ ಅನುಮತಿ ನೀಡಲಾಗಿದೆ. ಮಹಾರಾಷ್ಟ್ರ ಸರ್ಕಾರ ಗಣೇಶ ಹಬ್ಬ ಆಚರಣೆಗೆ ಜೂನ್ನಲ್ಲೆ ಅನುಮತಿ ಕೊಟ್ಟಿದೆ. ಕರ್ನಾಟಕದಲ್ಲಿ ಏಕೆ ಕೊಟ್ಟಿಲ್ಲಿ ಎಂದು ಪ್ರಶ್ನಿಸಿದ್ದಾರೆ.
ಬಾರ್ಗಳಿಗೆ ಕರ್ನಾಟಕದಲ್ಲಿ ಅನುಮತಿ ನೀಡಲಾಗಿದೆ. ಜನರು ಕುಡಿದು ಸತ್ತರೂ ಅಡ್ಡಿಲ್ಲ, ರಾಜ್ಯದ ಬೊಕ್ಕಸಕ್ಕೆ ಹಣ ಆಗಬೇಕೆಂದರೆ ಬಾರ್ಗಳು ತೆರೆಯಬೇಕು ಎಂದು ಅದನ್ನು ತೆರೆಯಲು ಅನುಮತಿ ನೀಡಲಾಗಿದೆ. ಬಾರ್ಗಳಿಗೆ ನೀಡಿರುವ ಅನುಮತಿಯನ್ನು ಗಣೇಶನಿಗೆ ಏಕೆ ಕೊಡುತ್ತಿಲ್ಲ ಎಂದು ಕಿಡಿ ಕಾರಿದರು.
ನಾನು ಜೈಲಿಗೆ ಹೋಗಲು ಸಿದ್ದ, ಗಣಪತಿ ಸಮೇತ ನಮ್ಮನ್ನು ಜೈಲಿಗೆ ಹಾಕಲಿ, ನಾವು ಮತ ಹಾಕಿ ರಾಜ್ಯದಲ್ಲಿ ಸರ್ಕಾರ ತಂದಿದ್ದೇವೆ. ಗಣಪತಿ ಕೂಡಿಸಲು ಅನುಮತಿ ಕೊಡಲಿಲ್ಲ ಎಂದರೆ ಏನರ್ಥ ಎಂದು ಹೇಳಿರುವ ಅವರು, 24 ಗಂಟೆ ಒಳಗೆ ಅನುಮತಿ ನೀಡಲೇಬೇಕು ಎಂದು ಮುತಾಲಿಕ್ ತಿಳಿಸಿದ್ದಾರೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm