ಬ್ರೇಕಿಂಗ್ ನ್ಯೂಸ್
26-02-21 10:13 pm Bangalore correspondent ಕರ್ನಾಟಕ
ಬೆಂಗಳೂರು, ಫೆ 26: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಹನುಮಂತನಗರ ಪೊಲೀಸರ ವಶದಲ್ಲಿದ್ದ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ. 13.28 ಲಕ್ಷ ವಂಚಿಸಿದ್ದ ಸಿದ್ದಲಿಂಗಸ್ವಾಮಿ(60) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ಆತ್ಮಹತ್ಯೆಗೆ ಕಾರಣವೇನು ?
ಅಂದ ಹಾಗೆ, ಮೂಲತಃ ಮಂಡ್ಯ ಮೂಲದವನಾದ ಸಿದ್ದಲಿಂಗಸ್ವಾಮಿ ತಾನು BDA ನೌಕರನೆಂದು ಪರಿಚಯಿಸಿಕೊಂಡು ವಂಚನೆ ನಡೆಸುತ್ತಿದ್ದ. ಜನರಿಗೆ ವಿಶ್ವೇಶ್ವರಯ್ಯ ಲೇಔಟ್ನಲ್ಲಿ ಸೈಟ್ ಕೊಡಿಸುವುದಾಗಿ ನಂಬಿಸುತ್ತಿದ್ದ. BDA ಸೈಟ್ ಮರುಹಂಚಿಕೆ ಮಾಡಿಸಿಕೊಡುವುದಾಗಿ ಹೇಳಿದ್ದ ಸಿದ್ದಲಿಂಗಸ್ವಾಮಿ ನಕಲಿ ದಾಖಲಾತಿಗಳನ್ನು ಸೃಷ್ಟಿ ಮಾಡಿ 13.28 ಲಕ್ಷ ಪಡೆದಿದ್ದ. ಈ ಕೃತ್ಯಕ್ಕೆ, ಆತ BDAನ ನಕಲಿ ಸೀಲ್, ಲೆಟರ್ ಹೆಡ್ ಬಳಸಿ ವಂಚನೆ ಮಾಡಿದ್ದ.
ಇನ್ನು, ಈತನ ವಂಚನೆ ಬಯಲಾಗುತ್ತಿದ್ದಂತೆ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಕಳೆದ ವರ್ಷ ಡಿಸೆಂಬರ್ನಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ನಾಗರಾಜ್ ಎಂಬುವವರ ದೂರಿನ ಮೇರೆಗೆ FIR ದಾಖಲಾಗಿತ್ತು. ಹೀಗಾಗಿ, ಆರೋಪಿಯನ್ನ ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದ ಪೊಲೀಸರು ಸಿದ್ದಲಿಂಗಸ್ವಾಮಿಯನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ, ಆರೋಪಿ ಸಿದ್ದಲಿಂಗಸ್ವಾಮಿ ವಿದ್ಯಾರಣ್ಯಪುರದಲ್ಲಿರುವ ತನ್ನ ಮನೆಯಲ್ಲಿ ಕೆಲ ವಸ್ತು ಇಟ್ಟಿದ್ದಾಗಿ ಹೇಳಿದ್ದ. ಹಾಗಾಗಿ, ವಿದ್ಯಾರಣ್ಯಪುರದ ನಿವಾಸಕ್ಕೆ ಸ್ಥಳ ಮಹಜರಿಗೆ ಪೊಲೀಸರು ಕರೆ ತಂದಿದ್ದರು.
ತನ್ನ ಪತ್ನಿ ಮತ್ತು ಮಗಳ ಜೊತೆ ವಿದ್ಯಾರಣ್ಯಪುರದ ಅಪಾರ್ಟ್ಮೆಂಟ್ ಒಂದರಲ್ಲಿ ಬಾಡಿಗೆಗೆ ಫ್ಲ್ಯಾಟ್ ಪಡೆದಿದ್ದ ಸಿದ್ದಲಿಂಗಸ್ವಾಮಿ ಪೊಲೀಸರನ್ನು ಅಲ್ಲಿಗೆ ಕರೆತಂದಿದ್ದನು. ಈ ವೇಳೆ, ಮನೆಯ ಕಿಚನ್ ಮೂಲಕ ತೆರಳಿ ಕಟ್ಟಡದಿಂದ ಕೆಳಗೆ ಹಾರಿದ್ದ. ಘಟನೆಯಲ್ಲಿ ತೀವ್ರ ರಕ್ತಸ್ರಾವ ಅನುಭವಿಸಿದ ಆರೋಪಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಿದ್ದಲಿಂಗಸ್ವಾಮಿ ಕೊನೆಯುಸಿರೆಳೆದಿದ್ದಾನೆ.
ಆರೋಪಿಯನ್ನು ಪೊಲೀಸರು ಫೆ.24ರಂದು ಬಂಧಿಸಿ ಕೋರ್ಟ್ ಮೂಲಕ ಕಸ್ಟಡಿಗೆ ಪಡೆದಿದ್ರು. ಹೆಚ್ಚಿನ ವಿಚಾರಣೆಗೆ ಹನುಮಂತನಗರ ಪೊಲೀಸರು ವಶಕ್ಕೆ ಪಡೆದಿದ್ದರು.
Accused who was in Police Custody committed suicide by jumping from building in Bangalore. He was brought by the cops for Spot Mahazar.
21-03-25 10:41 pm
HK News Desk
Sameer MD Video Delete Sowjanya, YouTube: ಸೌಜ...
21-03-25 10:35 pm
DK Shivakumar, BJP Muniratna, Honeytrap Case:...
21-03-25 09:21 pm
Karnataka Bandh News Live: ಕರ್ನಾಟಕ ಬಂದ್ ಕರೆ...
21-03-25 08:06 pm
18 BJP MLAs suspended, assembly: ಸ್ಪೀಕರ್ ಪೀಠಕ...
21-03-25 05:46 pm
21-03-25 04:46 pm
HK News Desk
Rana Daggubati, Vijay Deverakonda, Prakash Ra...
20-03-25 10:40 pm
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
21-03-25 12:44 pm
Bangalore Correspondent
Mangalore, Bangalore Airport Drugs; ಮಂಗಳೂರು ಪ...
20-03-25 05:29 pm
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm