ಬ್ರೇಕಿಂಗ್ ನ್ಯೂಸ್
03-03-21 12:41 pm Headline Karnataka News Network ಕರ್ನಾಟಕ
ಬೆಂಗಳೂರು, ಫೆ. 03: ಮಾನ-ಮರ್ಯಾದೆ ಇದ್ದರೆ ತಕ್ಷಣ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆಯನ್ನು ಪಡೆದುಕೊಳ್ಳಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಕೆಪಿಸಿಸಿ ಆಯೋಜಿರುವ ಜನ-ಧ್ವನಿ ಜಾಥಾ ಕಾರ್ಯಕ್ರಮದ ಉದ್ಘಾಟನೆಗೆ ಮೊದಲು ಸಿದ್ದರಾಮಯ್ಯ ಅವರು ಮಾತನಾಡಿ ರಾಜೀನಾಮೆಗೆ ಆಗ್ರಹಿಸಿದರು.
ತಕ್ಷಣ ರಾಜೀನಾಮೆ ಪಡೆಯುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಗ್ರಹಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಮಾನ-ಮರ್ಯಾದೆ ಇದ್ದರೆ ತಕ್ಷಣ ರಾಜೀನಾಮೆ ಕೊಡಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಆಗ್ರಹಿಸಿದ್ದಾರೆ. ಇಡೀ ದೇಶಕ್ಕೆ ರಮೇಶ್ ರಾಸಲೀಲೆ ಗೊತ್ತಾಗಿದೆ. ಹೀಗಾಗಿ ತಕ್ಷಣ ಪ್ರಕರಣದ ಕುರಿತು ಎಫ್ಐಆರ್ ದಾಖಲಾಗಬೇಕು. ಸೂಕ್ತ ತನಿಖೆ ನಡೆಯಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯೊಬ್ಬಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆಂದು ನಿನ್ನೆ (ಮಾರ್ಚ್ 02) ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆಯಾಗಿದೆ. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬುವರು ದೂರು ಸಲ್ಲಿಸಿದ್ದಾರೆ. ದೂರಿಗೆ ಸಂಬಂಧಿಸಿದಂತೆ ಇನ್ನೂ ಎಫ್ಐಆರ್ ಆಗಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರತಿಕ್ರಿಯೆ ಕೊಟ್ಟಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು, ದಿನೇಶ್ ಕಲ್ಲಹಳ್ಳಿ ಯಾರು ಅಂತಾ ನನಗೇ ಗೊತ್ತಿಲ್ಲ. ಜೊತೆಗೆ ಅದು ನಕಲಿ ವಿಡಿಯೋ. ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಸಿಡಿಯಲ್ಲಿ ಸಿಕ್ಕಿಬಿದ್ದ ಬೆಳಗಾವಿ ಸಾಹುಕಾರ್ !! ಬಿಜೆಪಿ ಪಾಲಿಗೆ ಜಾರಕಿಹೊಳಿ ಬಿಸಿತುಪ್ಪ !!
ರಮೇಶ್ ಜಾರಕಿಹೊಳಿ ರಾಸಲೀಲೆ ಔಟ್ ; ಸಂತ್ರಸ್ತೆಯ ಹೇಳಿಕೆಯ ನಂತ್ರವಷ್ಟೇ ಎಫ್ಐಆರ್
Karnataka's Leader of the Opposition Siddaramaiah on Wednesday asked the BJP to get scandal-hit Water Resources Minister Ramesh Jarkiholi to resign immediately “if the party has any shame and respect”
18-03-25 02:30 pm
Bangalore Correspondent
Tumkur Wedding News, Water: ನೀರಿನ ವಿಚಾರದಲ್ಲಿ...
18-03-25 01:08 pm
ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಸದ್ಯದಲ್ಲೇ...
17-03-25 11:54 am
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
18-03-25 08:53 pm
Mangalore Correspondent
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am