ಬ್ರೇಕಿಂಗ್ ನ್ಯೂಸ್
08-03-21 05:12 pm Headline Karnataka News Network ಕರ್ನಾಟಕ
ಉಡುಪಿ, ಮಾ.8: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪೋಕ್ಸೋ ಪ್ರಕರಣ ಒಂದರಲ್ಲಿ ಆರೋಪಿ, ಪತ್ರಕರ್ತನ ಸೋಗಿನಲ್ಲಿದ್ದ ಚಂದ್ರ ಕೆ. ಹೆಮ್ಮಾಡಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ವ್ಯಾಪ್ತಿಯ ಪೋಕ್ಸೋ ವಿಶೇಷ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಚಂದ್ರ ಕೆ.ಹೆಮ್ಮಾಡಿ ತಾನು ವರದಿಗಾರನೆಂದು ಹೇಳಿಕೊಂಡು ಬೈಂದೂರು ಭಾಗದ ಗ್ರಾಮೀಣ ಪ್ರದೇಶಕ್ಕೆ ತೆರಳಿ, ಅಲ್ಲಿನ ಬಾಲಕನೊಬ್ಬನಿಗೆ ಪ್ರಾಣಿ, ಪಕ್ಷಿ, ಶಾಲಾ ಕಟ್ಟಡದ ಛಾಯಾಚಿತ್ರ ತೆಗೆಯಲು ತನ್ನ ಜೊತೆ ಬರುವಂತೆ ಪುಸಲಾಯಿಸಿ ಕಾಡಿಗೆ ಕರೆದೊಯ್ದು ಆತನ ಮೇಲೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ಬಗ್ಗೆ ಬೈಂದೂರು ಠಾಣೆಗೆ ನೀಡಿದ ದೂರಿನಂತೆ 2018 ನವೆಂಬರ್ ತಿಂಗಳಿನಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಆಬಳಿಕ ಆರೋಪಿ ವಿರುದ್ಧ ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿದ್ದು ಬಾಲಕರ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಿ ವಿರುದ್ಧ ಸರದಿಯಂತೆ ಪೋಕ್ಸೋ ಕಾಯ್ದೆಯಡಿ ಬೈಂದೂರು, ಕೊಲ್ಲೂರು ಸಹಿತ ವಿವಿಧ ಠಾಣೆಗಳಲ್ಲಿ 21 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.
ಮೊದಲ ಪ್ರಕರಣದಲ್ಲಿ ಅಂದಿನ ಬೈಂದೂರು ಸಿಪಿಐ ಪರಮೇಶ್ವರ್ ಆರ್. ಗುನಗಾ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದು 36 ಸಾಕ್ಷಿಗಳಲ್ಲಿ ಸಂತ್ರಸ್ತ ಬಾಲಕನ ಸಹಿತ 15 ಮಂದಿ ಸಾಕ್ಷಿ ನುಡಿದಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶೆ ಯಾದವ್ ವನಮಾಲಾ ಆನಂದರಾವ್, ಆರೋಪಿಗೆ ಮೊದಲ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಿದೆ. ದಂಡದಲ್ಲಿ 5 ಸಾವಿರ ಸರಕಾರಕ್ಕೆ, 5 ಸಾವಿರ ನೊಂದ ಬಾಲಕನಿಗೆ ನೀಡಲು ಆದೇಶ ನೀಡಲಾಗಿದೆ.
ಉಡುಪಿಯ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಅವರು ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು.
A Man who was reportedly calling himself an Journalsit in Udupi has been ordered bh the court for 10 years imprisonment for sexually harrsing boys by taking him to an isolated area.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm