ಬ್ರೇಕಿಂಗ್ ನ್ಯೂಸ್
21-08-20 12:12 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 21: ನಂಜನಗೂಡಿನ ವೈದ್ಯಾಧಿಕಾರಿ ಡಾ. ಎಸ್ ಆರ್ ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣದ ತನಿಖೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶಿಸಿದ್ದಾರೆ. ಕರ್ನಾಟಕ ನೌಕರರ ಸಂಘದ ಮನವಿ ಮೇರೆಗೆ ಸಿಎಂ ಈ ಕ್ರಮ ತೆಗೆದುಕೊಂಡಿದ್ದಾರೆ. ಪ್ರಕರಣದ ತನಿಖೆ ನಡೆಸಿ ಏಳು ದಿನದೊಳಗೆ ವರದಿ ನೀಡುವಂತೆ ಮೈಸೂರಿನ ಪ್ರಾದೇಶಿಕ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ಇದರ ಜೊತೆಗೆ, ಮೃತ ವೈದ್ಯಾಧಿಕಾರಿಯ ಕುಟುಂಬಕ್ಕೆ ಕೂಡಲೇ 50 ಲಕ್ಷ ರೂ ಪರಿಹಾರವನ್ನೂ ಸಿಎಂ ಘೋಷಿಸಿದ್ಧಾರೆ. ಅವರ ಕುಟುಂಬದ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸ ನೀಡಬೇಕು. ಸರ್ಕಾರದ ಇತರ ಸೌಲಭ್ಯವನ್ನು ಶೀಘ್ರದಲ್ಲೇ ಒದಗಿಸಬೇಕು ಎಂದೂ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ವೈದ್ಯಾಧಿಕಾರಿ ನಾಗೇಂದ್ರ ನಿನ್ನೆ ಗುರುವಾರ ಆತ್ಮಹತ್ಯೆಗೆ ಶರಣಾಗಿದ್ದರು. ಇವರ ಸಾವು ಇದೀಗ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ. ಈ ಕುರಿತು ನಿನ್ನೆ ಸಂಜೆ ಬೆಂಗಳೂರಿನಲ್ಲಿ ಮಾತನಾಡಿದ್ದ ಸಚಿವ ಡಾ| ಕೆ. ಸುಧಾಕರ್, "ವೈದ್ಯಾಧಿಕಾರಿಯ ಸಾವನ್ನು ಅನ್ಯ ಕಾರಣಗಳಿಗೆ ದುರ್ಬಳಕೆ ಮಾಡಬಾರದು. ನಾಗೇಂದ್ರ ಅವರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗವನ್ನು ಕೂಡ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ. ಮೃತರ ಕುಟುಂಬದೊಂದಿಗೆ ಸರ್ಕಾರ ಸದಾ ಬೆಂಬಲವಾಗಿ ನಿಲ್ಲಲಿದೆ. ವೈದ್ಯಾಧಿಕಾರಿಗಳ ಸಂಘದೊಂದಿಗೆ ಈಗಾಗಲೇ ಮಾತುಕತೆ ನಡೆಸಿದ್ದು, ಇನ್ನು ಮುಂದೆ ಇಂತಹ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು. ನಾಗೇಂದ್ರ ಅವರ ಸಾವಿನಲ್ಲಿ ಗೊಂದಲ ಸೃಷ್ಟಿ ಮಾಡುವುದು ಅಮಾನವೀಯ. ಘಟನೆ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನ್ಯಾಯ ದೊರಕಿಸಿಕೊಡಲಾಗುವುದು" ಎಂದು ಭರವಸೆ ನೀಡಿದ್ದರು.
ಹಾಗೆಯೇ, ನಾಗೇಂದ್ರ ಅವರ ಕುಟುಂಬಕ್ಕೆ 30 ಲಕ್ಷ ರೂ ಪರಿಹಾರ ನೀಡುವುದಾಗಿ ಡಾ. ಸುಧಾಕರ್ ತಿಳಿಸಿದ್ದರು. ಆದರೆ, ವಿಶೇಷ ಸಂದರ್ಭವೆಂದು ಪರಿಗಣಿಸಿ ಪರಿಹಾರ ಹಣವನ್ನು 50 ಲಕ್ಷ ರೂಗೆ ಏರಿಸಲಾಗಿದೆ.
ಡಾ. ಎಸ್.ಆರ್. ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸರ್ಕಾರಿ ಆಸ್ಪತ್ರೆ ವೈದ್ಯರು ಇಂದು ಬೆಳಗ್ಗೆ ಪ್ರತಿಭಟನೆ ಮುಂದುವರಿಸಿದರು. ಜಿಲ್ಲಾ ಪಂಚಾಯತಿ ಸಿಇಓ ಪ್ರಶಾಂತ್ ಕುಮಾರ್ ಮಿಶ್ರಾ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ಯಾರೊಬ್ಬರೂ ಕೆಲಸ ಮಾಡುವುದಿಲ್ಲ. ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ ಜಿಲ್ಲೆಯಲ್ಲಿ ತುರ್ತು ಪರಿಸ್ಥಿತಿ ಹೊರತುಪಡಿಸಿ ಉಳಿದ ಯಾವುದೇ ಚಿಕಿತ್ಸೆ ನೀಡುವುದಿಲ್ಲ ಎಂದು ಆರೋಗ್ಯ ಸಿಬ್ಬಂದಿ ಎಚ್ಚರಿಕೆ ನೀಡಿದ್ದಾರೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm