ಬ್ರೇಕಿಂಗ್ ನ್ಯೂಸ್
21-08-20 03:00 pm Headline Karnataka News Network ಕರ್ನಾಟಕ
ಕೊಪ್ಪಳ, ಆಗಸ್ಟ್ 21: ಕೊರೊನಾ ನಿರ್ಬಂಧದ ನಡುವೆಯೂ ಇಲ್ಲಿನ ಕುಷ್ಟಗಿ ತಾಲೂಕಿನಲ್ಲಿ ಅವಧೂತ ಶುಕಮುನಿ ದೇವರ ಆರಾಧನೆಯ ಹೆಸರಲ್ಲಿ ಭಕ್ತರು ಬಲವಂತವಾಗಿ ಅಡ್ಡಪಲ್ಲಕ್ಕಿ ಉತ್ಸವ ಆಚರಿಸಿದ ಘಟನೆ ನಡೆದಿದ್ದು ಪೊಲೀಸರು 50ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಶ್ರೀ ಅವಧೂತ ಶುಕಮುನಿ ದೇವರ ಆರಾಧನೆ ಮಹೋತ್ಸವ ನಿಮಿತ್ತ ಪ್ರತಿ ವರ್ಷ ಅಡ್ಡಪಲ್ಲಕ್ಕಿ ಉತ್ಸವ ಅದ್ಧೂರಿಯಾಗಿ ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ಕೊರೊನಾ ಭೀತಿಯಿಂದ ತಲತಲಾಂತರದಿಂದ ಆಚರಿಸಿಕೊಂಡು ಬಂದಿದ್ದ ಅಡ್ಡಪಲ್ಲಕ್ಕಿ ಉತ್ಸವವನ್ನು ಸರಳವಾಗಿ ಆಚರಿಸಲು ದೇವಸ್ಥಾನದ ಆಡಳಿತ ನಿರ್ಧರಿಸಿತ್ತು.

ಇದರಂತೆ, ನಿನ್ನೆ ರಾತ್ರಿ ಅಡ್ಡಪಲ್ಲಕ್ಕಿ ಉತ್ಸವ ಮೆರವಣಿಗೆ ಆರಂಭವಾಗುತ್ತಿದಂತೆ ಏಕಾಏಕಿ ಕೆಲವು ಭಕ್ತರು ಸೇರಿ, ದೇವಸ್ಥಾನದ ಮುಖ್ಯದ್ವಾರದ ಬಾಗಿಲು ಒಡೆಯಲು ಆರಂಭಿಸಿದ್ದಾರೆ. ಕೊನೆಗೆ ದೇವಸ್ಥಾನದ ಬಾಗಿಲು ಮುರಿದು ಪಲ್ಲಕ್ಕಿಯನ್ನು ಹೊರ ತಂದಿದ್ದು ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ. ಈ ಮಧ್ಯೆ ಪಲ್ಲಕ್ಕಿ ಹೊರಬರುತ್ತಿದಂತೆ ಅಲ್ಲಿಯೇ ನಿಲ್ಲಿಸಿದ್ದ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಪೊಲೀಸ್ ವಾಹನದ ಗಾಜು ಪುಡಿಯಾಗಿದೆ.
ಅಡ್ಡಪಲ್ಲಕ್ಕಿ ಉತ್ಸವದ ಮೆರವಣಿಗೆ ನಡೆಸಲು ತಹಶೀಲ್ದಾರರು ನಿರ್ಬಂಧ ಹೇರಿದ್ದರೂ ಸಾವಿರಾರು ಮಂದಿ ಜನಜಂಗುಳಿ ಮಧ್ಯೆ ಪಲ್ಲಕ್ಕಿ ಉತ್ಸವ ಆಚರಣೆ ಮಾಡಿದ್ದಾರೆ. ಸ್ಥಳದಲ್ಲಿ ಬೀಡು ಬಿಟ್ಟಿದ್ದ ಕುಷ್ಟಗಿ ತಹಶೀಲ್ದಾರ್ ಎಂ.ಸಿದ್ದೇಶ ಸೇರಿದಂತೆ ಪೊಲೀಸ್ ಅಧಿಕಾರಿಗಳ ಮಾತಿಗೆ ಒಪ್ಪದೆ ಜನರು ಮೆರವಣಿಗೆ ನಡೆಸಿದ್ದಾರೆ. ಕೊನೆಗೆ ಪೊಲೀಸರು ಮತ್ತು ಜನರ ನಡುವೆ ಮಾತಿನ ಚಕಮಕಿ ನಡೆದು, ಪೊಲೀಸರು ಲಾಠಿ ಬೀಸಿದ ಚದುರಿಸುವ ಪ್ರಯತ್ನವನ್ನೂ ಮಾಡಿದರು. ಒಂದು ಗಂಟೆ ಕಾಲದ ಪ್ರಹಸನದ ಬಳಿಕ ಗ್ರಾಮದ ಮಧ್ಯೆ ಜನರು ಪಲ್ಲಕ್ಕಿಯನ್ನು ಬಿಟ್ಟು ಓಡಿದ್ದಾರೆ. ಬಳಿಕ ಪೊಲೀಸರೇ ಪಲ್ಲಕ್ಕಿಯನ್ನು ಹೊತ್ತು ದೇವಸ್ಥಾನಕ್ಕೆ ತಂದಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ರಾತ್ರಿ ಸ್ಥಳಕ್ಕೆ ಎಸ್ಪಿ ಜಿ.ಸಂಗೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಂದಾಯ ನೀರಿಕ್ಷಕ ಮತ್ತು ಪೊಲೀಸ್ ಠಾಣೆ ಸಿಬ್ಬಂದಿಯ ಪ್ರತ್ಯೇಕ ದೂರಿನಂತೆ ಪೊಲೀಸರು 50ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm