ಬ್ರೇಕಿಂಗ್ ನ್ಯೂಸ್
29-03-21 11:01 am Headline Karnataka News Network ಕರ್ನಾಟಕ
ಬಾಗಲಕೋಟೆ,ಮಾ.29: ಗೆಳೆಯರ ಹುಟ್ಟುಹಬ್ಬ ಆಚರಿಸಿ ವಾಪಸ್ ಬರುವಾಗ ಕಾರಿಗೆ ಹಿಂಬದಿಯಿಂದ ಲಾರಿ ಬಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ನಡೆದಿದೆ. ಬೇವಿನಮಟ್ಟಿ ಬಳಿ ದುರ್ಘಟನೆ ನಡೆದಿದ್ದು, ಕಾರಿನ ಚಾಲಕನಿಗೆ ಗಂಭೀರ ಗಾಯವಾಗಿದೆ. ಹತ್ತಿರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಐವರು ಕಾರಿನಲ್ಲಿ ಸ್ನೇಹಿತನ ಹುಟ್ಟುಹಬ್ಬ ಆಚರಿಸಲು ತೆರಳಿದ್ದರು. ಹಿಂಬರುವಾಗ ಬಾಗಲಕೋಟೆಯಿಂದ ಹುನಗುಂದ ಮಾರ್ಗವಾಗಿ ಹೊರಟಿದ್ದರು. ಹುನಗುಂದ ತಾಲ್ಲೂಕಿನ ಬೇವಿನಮಟ್ಟಿ ಕ್ರಾಸ್ ಬಳಿ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ.
ಈ ಪರಿಣಾಮವಾಗಿ ಕಾರಿನಲ್ಲಿದ್ದ ಚಂದ್ರಶೇಖರ್(30), ಬಸವರಾಜ(32), ನವೀನ ಸಾಕಾ(40) ಹಾಗೂ ಚೆನ್ನಬಸವ ಅಂಜಿ(22) ಮರಣ ಹೊಂದಿದ್ದಾರೆ. ಕಾರಿನ ಚಾಲಕ ವಿಜಯ ಬಂಡಿಗೆ ಗಂಭೀರ ಗಾಯವಾಗಿದೆ. ಡಿಕ್ಕಿ ಹೊಡೆದ ಲಾರಿ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ.
ಗಾಯಾಳು ವಿಜಯ ಬಂಡಿ ಹಾಗೂ ಮರಣ ಹೊಂದಿದ ನಾಲ್ವರು ಇಳಿಕಲ್ ನಗರದವರು ಎಂಬುದು ತಿಳಿದು ಬಂದಿದೆ. ಗಾಯಾಳುವನ್ನು ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹುನಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಲಾರಿ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
Four dead in a tragic road accident in Bagalkot while they were returning back from friends birthday party.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm