ಬ್ರೇಕಿಂಗ್ ನ್ಯೂಸ್
02-04-21 04:59 pm Headline Karnataka News Network ಕರ್ನಾಟಕ
ಬೆಂಗಳೂರು,ಎ.2: ರಾಜ್ಯದಲ್ಲಿ ಯಾವುದೇ ಲಾಕ್ ಡೌನ್ ಅಥವಾ ಕರ್ಫ್ಯೂ ಇಲ್ಲ. ಆದರೆ, ಕೊರೊನಾ ಸೋಂಕು ತಡೆಗೆ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ.
ಕ್ಯಾಬಿನೆಟ್ ಕಾರ್ಯದರ್ಶಿಗಳ ಸಭೆ ಬಳಿಕ ವಿಕಾಸಸೌಧದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕೊರೊನಾ ಸೋಂಕು ಹೆಚ್ಚಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರ, ಪಂಜಾಬ್ನಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಸೋಂಕು ತಡೆಗೆ ನಿಗಾವಹಿಸಬೇಕೆಂದು ಸಲಹೆ ನೀಡುವುದರ ಜೊತೆಗೆ ಕೋವಿಡ್ ನಿಯಮಗಳ ಬಿಗಿ ಪಾಲನೆಗೆ ಕೇಂದ್ರದ ಕ್ಯಾಬಿನೆಟ್ ಕಾರ್ಯದರ್ಶಿ ಸೂಚಿಸಿದ್ದಾರೆ ಎಂದರು.
ಕೇಂದ್ರದ ಕ್ಯಾಬಿನೆಟ್ ಕಾರ್ಯದರ್ಶಿ ಅವರು ಕೆಲವು ಸಲಹೆ ಕೊಟ್ಡಿದಾರೆ. ಮಾಸ್ಕ್, ಸಾಮಾಜಿಕ ಅಂತರ, ನಿಯಮಗಳ ಬಿಗಿ ಪಾಲನೆಗೆ ಸೂಚಿಸಿದ್ದಾರೆ. ಲಸಿಕೆ ಹೆಚ್ಚಿಸಲು ಸೂಚಿಸಲಾಗಿದ್ದು, ಲಸಿಕೆ ಹಾಕಿಸಿಕೊಳ್ಳಲು ಆಸಕ್ತಿ ತೋರದ ಕಾರಣ ನಾವೇ ಮನೆ ಬಾಗಿಲಿಗೆ ಹೋಗಿ ಲಸಿಕೆ ಹಾಕುವ ಸ್ಥಿತಿ ಇದೆ. ಹೀಗಾಗಿ ಜನ ಹೆಚ್ಚು ಇರುವ ಕಡೆ ಲಸಿಕೆ ಹಾಕಿಸಲು ಕ್ರಮ ತೆಗೆದುಕೊಳ್ಳುತ್ತೇವೆ. ಸದ್ಯ ಲಸಿಕೆಯನ್ನು ಹೆಚ್ಚಿಗೆ ಮಾಡುತ್ತೇವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್ ತುಂಬಿರುವ ಕಾರಣ ಖಾಸಗಿ ಆಸ್ಪತ್ರೆಗಳಲ್ಲಿ ಶೇ. 20 ರಷ್ಟು ಬೆಡ್ ಮೀಸಲಿಡಲು ಸೂಚಿಸಿದ್ದೇವೆ ಎಂದು ಹೇಳಿದರು.
ಕೊರೊನಾ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮಗಳ ಪಾಲನೆಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಕಡ್ಡಾಯ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತಿ ಮುಖ್ಯವಾಗಿದೆ ಎಂದು ಹೇಳಿದರು. ಬೆಂಗಳೂರು, ಮೈಸೂರು, ಕಲಬುರ್ಗಿ, ಬೀದರ್ ಸೇರಿ ಹಲವು ಕಡೆ ಸೋಂಕು ಹೆಚ್ಚಳವಾಗುತ್ತಿದೆ. ಈಗಾಗಲೇ ಜಾತ್ರೆ, ಧಾರ್ಮಿಕ ಉತ್ಸವಗಳನ್ನು ನಿಯಂತ್ರಿಸಿದ್ದೇವೆ ಎಂದು ತಿಳಿಸಿದರು.
ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ 6 ನೇ ತರಗತಿಯಿಂದ 9 ನೇ ತರಗತಿವರೆಗೆ ಶಾಲೆಗಳನ್ನು ಭೌತಿಕವಾಗಿ ನಡೆಸದಿರಲು ನಿರ್ಧರಿಸಲಾಗಿದೆ. ಜನ ಹೆಚ್ಚು ಇರುವ ಕಡೆ ಲಸಿಕೆ ಹಾಕುವುದು. ಕೈಗಾರಿಕೆ, ಐಟಿ ಸಂಸ್ಥೆಗಳಿಗೆ ಹೋಗಿ ಲಸಿಕೆ ಹಾಕಿಸಲು ಜಾಗೃತಿ ಮೂಡಿಸಲು ಕ್ರಮ ವಹಿಸಲಾಗುತ್ತದೆ ಎಂದರು.
No lockdown night curfew in karnataka states govt Chief secretary ravi Kumar to media persons here in Bangalore.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm