ಬ್ರೇಕಿಂಗ್ ನ್ಯೂಸ್
16-04-21 03:59 pm Bangalore Correspondent ಕರ್ನಾಟಕ
ಬೆಂಗಳೂರು, ಎ.17: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತೆ ಕೊರೊನಾ ವೈರಸ್ ಸೋಂಕು ತಗುಲಿದೆ. ಶುಕ್ರವಾರ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಯಡಿಯೂರಪ್ಪ ಶುಕ್ರವಾರ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಂಡಿದ್ದು ಪಾಸಿಟಿವ್ ಬಂದ ಕಾರಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಹಿಂದೆ ಲಾಕ್ಡೌನ್ ಸಂದರ್ಭದಲ್ಲೂ ಕೋವಿಡ್ ಸೋಂಕಿಗೆ ಒಳಗಾಗಿ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಇದೀಗ ಎರಡನೇ ಬಾರಿಗೆ ಅವರು ಸೋಂಕಿಗೆ ಒಳಗಾಗಿದ್ದಾರೆ.
ಈ ಬಗ್ಗೆ ಯಡಿಯೂರಪ್ಪ ಅವರ ಟ್ವಿಟರ್ ಖಾತೆಯಲ್ಲಿ ತಿಳಿಸಲಾಗಿದ್ದು, 'ಜ್ವರದ ಹಿನ್ನೆಲೆಯಲ್ಲಿ ತಪಾಸಣೆಗೆ ಒಳಪಟ್ಟಿದ್ದು ಕೋವಿಡ್ ಪಾಸಿಟಿವ್ ಬಂದಿರುತ್ತದೆ. ಅಲ್ಪ ಪ್ರಮಾಣದಲ್ಲಿ ರೋಗ ಲಕ್ಷಣಗಳಿರುವುದರಿಂದ ವೈದ್ಯರ ಸಲಹೆಯಂತೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ಸಂಪರ್ಕಕ್ಕೆ ಬಂದಿದ್ದವರು ಕ್ವಾರಂಟೈನ್ನಲ್ಲಿದ್ದು, ಒಮ್ಮೆ ಪರೀಕ್ಷಿಸಿಕೊಳ್ಳಿ ಎಂದಿದ್ದಾರೆ.
ಜ್ವರದ ಹಿನ್ನಲೆಯಲ್ಲಿ ಇಂದು ತಪಾಸಣೆಗೆ ಒಳಪಟ್ಟಾಗ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿರುತ್ತದೆ. ಅಲ್ಪ ಪ್ರಮಾಣದಲ್ಲಿ ರೋಗ ಲಕ್ಷಣಗಳಿರುವುದರಿಂದ ವೈದ್ಯರ ಸಲಹೆಯಂತೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ಸಂಪರ್ಕಕ್ಕೆ ಬಂದಿದ್ದವರು ಕ್ವಾರಂಟೈನ್ ನಲ್ಲಿದ್ದು, ಒಮ್ಮೆ ಪರೀಕ್ಷಿಸಿಕೊಳ್ಳಿ ಎಂದು ಕೋರುತ್ತೇನೆ
— B.S. Yediyurappa (@BSYBJP) April 16, 2021
ಬೆಳಗಾವಿ ಲೋಕಸಭೆ ಉಪ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಅವರು ತೀವ್ರ ಜ್ವರದಿಂದ ಬಳಲಿದ್ದರು. ಅಲ್ಲಿ ಪ್ರಚಾರ ಮೊಟಕುಗೊಳಿಸಿ ಗುರುವಾರವೇ ಬೆಂಗಳೂರಿಗೆ ಹಿಂತಿರುಗುತ್ತಿದ್ದರು. ಶುಕ್ರವಾರ ಬೆಳಗ್ಗೆ 9.30ಕ್ಕೆ ಕೋವಿಡ್ ಸಂಬಂಧ ತುರ್ತು ಸಭೆಯನ್ನು ನಡೆಸಿ ಕೆಲವು ನಿರ್ದೇಶನಗಳನ್ನು ನೀಡಿದ್ದಾರೆ.
ಕೋವಿಡ್ ಪಾಸಿಟಿವ್ ಆಗಿರುವ ಕಾರಣ ಎ.18ರಂದು ಕರೆದಿದ್ದ ಸರ್ವಪಕ್ಷಗಳ ಸಭೆಯನ್ನು ರದ್ದುಪಡಿಸಲಾಗಿದೆ.
ಮುಖ್ಯಮಂತ್ರಿಯವರ ಸಂಪರ್ಕದಲ್ಲಿದ್ದ ಮುಖ್ಯಮಂತ್ರಿ ಕಚೇರಿ ಮತ್ತು ನಿವಾಸದ 61 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿ, ಕ್ವಾರಂಟೈನ್ ಮಾಡಲು ಸೂಚಿಸಲಾಗಿದೆ.
Karnataka Chief Minister BS Yediyurappa on Friday tested positive for Covid-19 after he was admitted to Ramaiah Memorial Hospital in Bengaluru. This is the second time that the chief minister contracted the infection. In August 2020, he was infected for the first time, along with several of his family members.
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm