ಬ್ರೇಕಿಂಗ್ ನ್ಯೂಸ್
18-04-21 11:55 am Headline Karnataka News Network ಕರ್ನಾಟಕ
ಬೆಂಗಳೂರು, ಎ 18: ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ, ಪ್ರಸಂಗಕರ್ತೃ, ವಾಗ್ಮಿ ಪ್ರೊ. ಎಂ.ಎ.ಹೆಗಡೆ (73) ಅವರು ಭಾನುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾದರು.
ಎಂ.ಎ.ಹೆಗಡೆ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಏಪ್ರಿಲ್ 13ರಂದು ದೃಢಪಟ್ಟಿತ್ತು. ಶನಿವಾರ ಮುಂಜಾನೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.
ಯಕ್ಷಗಾನದ ಅರ್ಥಧಾರಿ ಹಾಗೂ ಪ್ರಸಂಗಕರ್ತರಾಗಿದ್ದ ಅವರು ಎರಡನೇ ಅವಧಿಗೆ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿದ್ದರು. ಕೋವಿಡ್–19 ಲಾಕ್ಡೌನ್ ಅವಧಿಯಲ್ಲಿ ಹಿರಿಯ ಹಾಗೂ ಪ್ರಸಿದ್ಧ ಯಕ್ಷಗಾನ ಹಿರಿಯ ಕಲಾವಿದರ ಜೊತೆ ವರ್ಚುವಲ್ ರೂಪದಲ್ಲಿ ‘ಮಾತಿನ ಮಂಟಪ’ ಮಾತುಕತೆ ಕಾರ್ಯಕ್ರಮ ಆಯೋಜಿಸಿದ್ದರು. ಈ ಕಾರ್ಯಕ್ರಮದಡಿ 100ಕ್ಕೂ ಅಧಿಕ ಕಲಾವಿದರ ಬದುಕಿನ ಚಿತ್ರಣವನ್ನು ಕಟ್ಟಿಕೊಟ್ಟಿದ್ದರು. ‘ಮಾತಿನ ಮಂಟಪ’ ಕಾರ್ಯಕ್ರಮದ ಮೂಲಕ 70 ವರ್ಷ ಮೀರಿದ ಕಲಾವಿದ ಸಂದರ್ಶನವನ್ನು ವರ್ಚುವಲ್ ರೂಪದಲ್ಲಿ ಕಟ್ಟಿಕೊಟ್ಟಿದ್ದರು. ಈ ಸರಣಿಯಲ್ಲಿ 50ಕ್ಕೂ ಅಧಿಕ ಕಾರ್ಯಕ್ರಮಗಳನ್ನು ಅಕಾಡೆಮಿಯು ರೂಪಿಸಿತ್ತು. ಕಲಾವಿದರ ಸಾಧನೆ, ಚಿಂತನೆ ಹಾಗೂ ಅವರ ಕಲಾ ಬದುಕನ್ನು ಯಕ್ಷಗಾನದ ಅಭಿಮಾನಿಗಳಿಗೆ ತಿಳಿಸುವ ಈ ಕಾರ್ಯಕ್ರಮ ಸರಣಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
ಅಕಾಡೆಮಿ ಅಧ್ಯಕ್ಷರಾಗಿ ಕಲೆ, ಕಲಾವಿದರ ಉನ್ನತಿಗಾಗಿ ಎಂ.ಎ.ಹೆಗಡೆ ಅವರು ಸಾಕಷ್ಟು ಶ್ರಮಿಸಿದ್ದರು. ಕಲಾವಿದರ ವಲಯದಲ್ಲಿಯೂ ಹೆಗಡೆ ಅವರ ಬಗ್ಗೆ ಅಪಾರ ಗೌರವವಿತ್ತು.
President of Karnataka Yakshagana Bayalata Academy, well-known author of Yakshagana Prasangas and gifted orator Prof M A Hegde (73) passed away in the city on Sunday April 18 morning on account of breathing difficulties.
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm