ಬ್ರೇಕಿಂಗ್ ನ್ಯೂಸ್
26-04-21 04:16 pm Headline Karnataka News Network ಕರ್ನಾಟಕ
Photo credits : WION
ಬೆಂಗಳೂರು,ಏ.26: ಕೊರೊನಾ ಮೊದಲನೆ ಅಲೆ ಕಾಣಿಸಿಕೊಂಡಾಗ ಏಕಾಏಕಿ ಲಾಕ್ಡೌನ್ ಘೋಷಣೆ ಮಾಡಲಾಗಿತ್ತು. ಇದರಿಂದ ಜನಸಾಮಾನ್ಯರು ಕಂಗಾಲಾಗಿದ್ದರು. ಅಲ್ಲದೆ, ಮದ್ಯಪ್ರಿಯರು ಆಲ್ಕೋಹಾಲ್ಗಾಗಿ ತುಂಬಾನೇ ತೊಂದರೆ ಅನುಭವಿಸಿದ್ದರು. ಸ್ಯಾನಿಟೈಸರ್ನಲ್ಲಿ ಆಲ್ಕೋಹಾಲ್ ಅಂಶ ಇರುತ್ತದೆ ಎಂದು ಅನೇಕರು ಅದನ್ನೇ ಕುಡಿಯೋಕೆ ಹೋಗಿದ್ದರು. ಆದರೆ, ಈ ಬಾರಿ ಹೀಗೆ ಆಗದಂತೆ ನೋಡಿಕೊಳ್ಳಲು ಸರ್ಕಾರ ಮುಂದಾಗಿದೆ. ಹೀಗಾಗಿ 15 ದಿನಗಳ ಕೊವಿಡ್ ಕರ್ಫ್ಯೂನಲ್ಲಿ ಬಾರ್ನಲ್ಲಿ ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶ ನೀಡಿದೆ.
ಕರ್ನಾಟಕದಲ್ಲಿ ಕೊರೊನಾ ಸೊಂಕಿನ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲೇಬೇಕಾದ ಅನಿವಾರ್ಯತೆಗೆ ಸಿಲುಕಿದೆ. ಹೀಗಾಗಿ 14 ದಿನಗಳ ಕಾಲ ಕರ್ನಾಟಕವನ್ನು ಲಾಕ್ಡೌನ್ ಮಾಡಲು ನಿರ್ಧರಿಸಿದ್ದು, ನಾಳೆ ಸಂಜೆಯಿಂದ ಕೊರೊನಾ ಕರ್ಫ್ಯೂ ಜಾರಿಯಾಗಲಿದೆ. 15 ದಿನಗಳ ಕಾಲ ಈ ಕಠಿಣ ನಿಯಮ ಮುಂದುವರೆಯಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಬೆಳಗ್ಗೆ 6-10 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಉತ್ಪಾದನಾ ವಲಯ ಎಂದಿನಂತೆ ಮುಂದುವರಿಯುತ್ತದೆ. ಕೃಷಿ ಚಟುವಟಿಕೆಗಳಿಗೂ ಯಾವುದೇ ತೊಂದರೆ ಇಲ್ಲ. ಇದರ ಜತೆಗೆ ಮದ್ಯಪ್ರಿಯರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಬಾರ್ನಲ್ಲಿ ಮದ್ಯ ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶ ಇದೆ.
ಇನ್ನು, ಸರ್ಕಾರದ ಬೊಕ್ಕಸ ತುಂಬಲು ಆಲ್ಕೋಹಾಲ್ ಪಾತ್ರ ತುಂಬಾ ದೊಡ್ಡದಿದೆ. ಒಂದೊಮ್ಮೆ ಮದ್ಯ ಮಾರಾಟ ನಿಲ್ಲಿಸಿ ಬಿಟ್ಟರೆ ಸರ್ಕಾರಕ್ಕೆ ನಷ್ಟ ಉಂಟಾಗಲಿದೆ. ಕಳೆದ ಬಾರಿ ಹೀಗೆಯೇ ಮಾಡಿದ್ದರಿಂದ ದೊಡ್ಡ ನಷ್ಟ ಅನುಭವಿಸಿತ್ತು. ಈಗ ಹೀಗಾಗದಂತೆ ನೋಡಿಕೊಳ್ಳಲು ಸರ್ಕಾರದ ಈ ಕ್ರಮ ಬಹಳ ಮಹತ್ವ ಪಡೆದುಕೊಂಡಿದೆ.
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ
14-day lockdown in Karnataka govt to allow home delivery of alcohol by parcel. Karnataka government on Monday announced that the entire state including Bengaluru will go for a two weeks complete lockdown starting from April 27 night in a bid to break the chain of COVID-19 transmission in the state.
27-03-25 06:41 pm
HK News Desk
Nandini Milk Rate: ಬೆಲೆ ಏರಿಕೆ ಬಿಸಿಯಿಂದ ತತ್ತರಿ...
27-03-25 04:49 pm
Yatnal, BJP, Karnataka Congress Twitter: ಈಗ '...
27-03-25 02:03 pm
BJP MLA Yatnal, Tweet: 'ಸತ್ಯವಂತರಿಗಿದು ಕಾಲವಲ್ಲ...
27-03-25 01:00 pm
BJP Yatnal Out, Vijayapura, BY Vijayendra: ಬಿ...
26-03-25 09:42 pm
27-03-25 04:07 pm
HK News Desk
ರಾಹುಲ್ ಗಾಂಧಿ ಭಾರತೀಯ ಪೌರತ್ವ ಹೊಂದಿದ್ದಾರೋ, ಇಲ್ಲ...
25-03-25 04:06 pm
Justice Yashwant Varma: ಭಾರೀ ಪ್ರಮಾಣದ ನೋಟು ಸುಟ...
24-03-25 03:54 pm
Delhi High Court judge Varma: ಹೈಕೋರ್ಟ್ ಜಡ್ಜ್...
23-03-25 02:40 pm
15 ವರ್ಷದ ಹುಡುಗನಿಂದ ಗರ್ಭವತಿ ; ಹರೆಯದಲ್ಲಿ ಮಾಡಿದ...
22-03-25 09:50 pm
27-03-25 08:45 pm
Mangalore Correspondent
Mangalore Kukke Subrahmanya Temple: ರಾಜ್ಯದ ಶ್...
27-03-25 07:53 pm
Bedra Bus Saudi, Mangalore, Moodbidri: ಸೌದಿಯಲ...
27-03-25 04:39 pm
U T Khader, Ullal, Cashew: ದೇಶದಲ್ಲಿ 90 ಶೇ. ಗೇ...
27-03-25 01:42 pm
Mangalore Anirvedha Organization: ಅನಿರ್ವೇದ ಸಂ...
26-03-25 10:02 pm
27-03-25 01:37 pm
HK News Desk
Bangalore Fake Marksheet, Arrest: ನಕಲಿ ಅಂಕಪಟ್...
26-03-25 11:19 pm
ಮನೆ ಮಾಲೀಕನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ ; ಯೋ...
26-03-25 11:08 pm
Mangalore Dharmasthala PSI P Kishor, Wife Att...
26-03-25 08:38 pm
ಸೈಬರ್ ಕೇಸಿನಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲು ಲಂಚ...
26-03-25 08:00 pm