ಬ್ರೇಕಿಂಗ್ ನ್ಯೂಸ್
13-05-21 02:57 pm Headline Karnataka News Network ಕರ್ನಾಟಕ
ಚಾಮರಾಜನಗರ, ಮೇ 13 : ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮೇ 2 ರ ಮಧ್ಯರಾತ್ರಿ ಸಂಭವಿಸಿದ 24 ಜನರ ಸಾವಿಗೆ ಆಮ್ಲಜನಕದ ಕೊರತೆಯೇ ಕಾರಣ ಎಂದು ಹೈಕೋರ್ಟ್ ನೇಮಿಸಿದ್ದ ಮೂವರು ಸದಸ್ಯರ ಸಮಿತಿ ವರದಿ ಸಲ್ಲಿಸಿದೆ. ಆಸ್ಪತ್ರೆಯಲ್ಲಿ ದಾಖಲಾಗಿದ್ದ 24 ಮಂದಿ ಕೋವಿಡ್ ಸೋಂಕಿತರ ಸಾವಿಗೆ ಆಕ್ಸಿಜನ್ ಕೊರತೆ ಕಾರಣವಾಗಿತ್ತು. ಆದರೆ, ಆರೋಗ್ಯ ಸಚಿವ ಸುಧಾಕರ್ ವಾಸ್ತವ ಸ್ಥಿತಿಯನ್ನು ತಿರುಚಿ, ಸುಳ್ಳು ಹೇಳಿಕೆ ನೀಡಿ ಸಾರ್ವಜನಿಕರನ್ನು ದಾರಿ ತಪ್ಪಿಸಿದ್ದಾರೆ. ಆಕ್ಸಿಜನ್ ಕೊರತೆಯಿಂದ ಮೂವರಷ್ಟೇ ಸಾವನ್ನಪ್ಪಿದ್ದರು ಎಂದು ಸುಳ್ಳು ಹೇಳಿಕೆ ನೀಡಿ ಜನರ ಜೀವದ ಜೊತೆ ಚೆಲ್ಲಾಟ ನಡೆಸಿದ್ದಾರೆ. ಇಂಥ ವ್ಯಕ್ತಿ ಆರೋಗ್ಯ ಸಚಿವನಾಗಿ ಇರಬಾರದು. ಕೂಡಲೇ ತನ್ನ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಮಾಜಿ ಸಂಸದ ಆರ್. ಧೃವನಾರಾಯಣ್ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ ಮೇ 2ರಂದು ರಾತ್ರಿ 10.30 ರಿಂದ ಮೇ 3 ರ ಮುಂಜಾನೆ 2.20ರ ತನಕ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಮ್ಲಜನಕವೇ ಲಭ್ಯವಿರಲಿಲ್ಲ ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎನ್.ವೇಣುಗೋಪಾಲ ಗೌಡ ನೇತೃತ್ವದ ಕಾನೂನು ಸೇವೆಗಳ ಪ್ರಾಧಿಕಾರದ ಸಮಿತಿ ಅಭಿಪ್ರಾಯಪಟ್ಟಿದ್ದು, ಮೃತಪಟ್ಟವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಅಲ್ಲದೆ, ವಸ್ತುಸ್ಥಿತಿ ನಿಭಾಯಿಸುವಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ವಿಫಲವಾಗಿದ್ದಾರೆ ಎಂದು ವರದಿಯಲ್ಲಿ ಸ್ಪಷ್ಟಪಡಿಸಲಾಗಿದೆ. ದುರಂತಕ್ಕೆ ಕಾರಣವಾದ ಜಿಲ್ಲಾಧಿಕಾರಿ ಮತ್ತು ಇತರ ಸಿಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ ಮಾಡಿದ್ದಾರೆ.
24 ವ್ಯಕ್ತಿಗಳ ಸಾವಿಗೆ ಸಂಬಂಧಿಸಿ ಜಿಲ್ಲಾ ಶಸ್ತ್ರಚಿಕಿತ್ಸಕ ಮತ್ತು ಇತರ ನಾಲ್ವರನ್ನು ಒಳಗೊಂಡ ಸಮಿತಿ ನೀಡಿರುವ ವರದಿಯನ್ನೂ ಸಮಿತಿ ವಿಶ್ಲೇಷಿಸಿದೆ. ಆಮ್ಲಜನಕದ ಕೊರತೆಯಿಂದ ಮೂವರು, ಮೆದುಳಿಗೆ ಆದ ಗಾಯದಿಂದ 7 ಮಂದಿ ಮತ್ತು ಕೋವಿಡ್ ಕಾರಣದಿಂದ 14 ಮಂದಿ ಮೃತಪಟ್ಟಿದ್ದಾರೆ ಎಂದು ಸಮಿತಿ ನೀಡಿದ್ದ ವರದಿಯನ್ನು ಹೈಕೋರ್ಟ್ ನ್ಯಾಯಾಧೀಶರು ಅಲ್ಲಗಳೆದಿದ್ದಾರೆ.
ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರಿಗೆ ಆಮ್ಲಜನಕದ ಅಗತ್ಯವಿತ್ತು. ಆದರೆ, ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯೇ ಇರಲಿಲ್ಲ. ಮೃತಪಟ್ಟವರ ಕೇಸ್ ಶೀಟ್ಗಳನ್ನು ಗಮನಿಸಿದರೆ ಅವರಿಗೆ ಆಮ್ಲಜನಕದ ಅಭಾವ ಇತ್ತು ಎಂಬುದನ್ನು ಸೂಚಿಸುತ್ತದೆ. ಆಮ್ಲಜನಕ ಕೊರತೆಯಿಂದ ಕಾರಣಕ್ಕೆ ಮೆದುಳಿನ ಕೋಶಗಳಿಗೆ ಹಾನಿಯಾಗಿದ್ದರಿಂದ ಸಾವು ಸಂಭವಿಸಿದೆ ಎಂದು ಹೈಕೋರ್ಟ್ ನೇಮಿಸಿದ್ದ ಸಮಿತಿ ಅಭಿಪ್ರಾಯಪಟ್ಟಿದೆ. ಈ ವರದಿ ಆಧರಿಸಿ ಆರೋಗ್ಯ ಸಚಿವ ಸೇರಿದಂತೆ ಅಧಿಕಾರಿಗಳ ವಿರುದ್ಧ ಸೆಕ್ಷನ್ 304 ಪ್ರಕಾರ ಪ್ರಕರಣ ದಾಖಲಿಸಬೇಕು. ಆರೋಗ್ಯ ಸಚಿವ ಹುದ್ದೆಯಿಂದ ಸುಧಾಕರನ್ನು ವಜಾಗೊಳಿಸಬೇಕು ಎಂದು ಮಾಜಿ ಸಂಸದ ಆರ್. ದೃವನಾರಾಯಣ್ ಹೇಳಿದರು.
ಮೈಸೂರಿನಲ್ಲಿನ ಆಮ್ಲಜನಕ ಸಿಲಿಂಡರ್ ಮರುಪೂರಣ ಘಟಕದಿಂದ ಆಸ್ಪತ್ರೆಗೆ ಆಮ್ಲಜನಕ ಸರಬರಾಜು ಮಾಡಿಕೊಳ್ಳುವುದು ಜಿಲ್ಲಾಡಳಿತ ಮತ್ತು ಆಸ್ಪತ್ರೆ ಅಧಿಕಾರಿಗಳ ಜವಾಬ್ದಾರಿ. ಆಸ್ಪತ್ರೆಯ ಆಡಳಿತ ಜಾಗರೂಕರಾಗಿರುತ್ತಿದ್ದರೆ, ಪೂರೈಕೆದಾರರು ಸಮಯೋಚಿತವಾಗಿ ಮರುಪೂರಣಗೊಳಿಸಿದ್ದರೆ ಸಾಕಷ್ಟು ಆಮ್ಲಜನಕ ಸಂಗ್ರಹಿಸಬಹುದಿತ್ತು. ಅದನ್ನು ಮಾಡದೆ ಇರುವುದು ಅಮೂಲ್ಯ ಜೀವಗಳ ಹಾನಿಗೆ ಕಾರಣವಾಗಿದೆ ಎಂಬುದಾಗಿ ವರದಿ ಹೇಳಿದೆ. ಈ ವರದಿ ರಾಜ್ಯದ ಆರೋಗ್ಯ ಇಲಾಖೆಯ ವಸ್ತುಸ್ಥಿತಿ ಮತ್ತು ಸಿಬಂದಿಯ ನಿರ್ಲಕ್ಷ್ಯವನ್ನು ಎತ್ತಿ ತೋರಿಸಿದೆ ಎಂದು ಹೇಳಿದರು. ಸುದ್ದಿಗೋಷ್ಟಿಯಲ್ಲಿ ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಹಾಗೂ ಹನೂರು ಶಾಸಕ ಆರ್. ನರೇಂದ್ರ ಹಾಜರಿದ್ದರು.
29-03-25 09:19 pm
HK News Desk
Mysuru three drowned, Lake, Ugadi: ಮೈಸೂರು ; ಹ...
29-03-25 03:13 pm
Naxal Karanataka, Anti Naxal Force: ನಕ್ಸಲ್ ನಿ...
28-03-25 10:47 pm
Minister Rajanna, honeytrap, Son, Murder atte...
28-03-25 12:19 pm
Yatnal expulsion, Ramesh Jarkiholi: ಯತ್ನಾಳ್...
27-03-25 06:41 pm
29-03-25 04:40 pm
HK News Desk
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
Elon Musk, Fraud India: ವಿಶ್ವದ ನಂಬರ್ 1 ಶ್ರೀಮಂ...
28-03-25 01:38 pm
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
30-03-25 11:02 pm
Mangaluru HK Staff
Mangalore, Ullal Netravati Bridge Repair, Tra...
30-03-25 03:07 pm
Kumapla, Mangalore, Crime: ಲಕೋಟೆಯಲ್ಲಿ ಸಂಸ್ಕರಿ...
30-03-25 02:39 pm
Mangalore CM Medal, Anupam Agrawal, Police Ma...
29-03-25 11:04 pm
MLC Ivan D'Souza, Mangalore: 7ನೇ ವೇತನ ಆಯೋಗ ;...
29-03-25 10:07 pm
30-03-25 08:59 am
Mangaluru Correspondent
ಆಂಧ್ರದಲ್ಲಿ ಪ್ಯಾಸ್ಟರ್ ಪ್ರವೀಣ್ ಕುಮಾರ್ ಸಂಶಯಾಸ್ಪದ...
29-03-25 10:33 pm
Bajrang Dal, Arrest, Cow Transport, Mangalore...
29-03-25 04:02 pm
Mangalore Nandigudde Prostitution case: ನಂದಿಗ...
28-03-25 09:25 pm
Ccb Mangalore, Drugs, Charas, Crime: ಸಿಸಿಬಿ ಪ...
28-03-25 08:37 pm