ಬ್ರೇಕಿಂಗ್ ನ್ಯೂಸ್
17-05-21 04:15 pm Bangalore Correspondent ಕರ್ನಾಟಕ
Photo credits : news 18
ಬೆಂಗಳೂರು,ಮೇ 17: ರಾಜ್ಯದ ರಾಜಧಾನಿಯಲ್ಲಿ 52 ಕ್ಕೂ ಹೆಚ್ಚು ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. ಮಿಂಟೋ ಆಸ್ಪತ್ರೆಯಲ್ಲಿ 14 ಜನರಿಗೆ ಬ್ಲ್ಯಾಕ್ ಫಂಗಸ್ ಇರುವುದು ದೃಢವಾಗಿದೆ. ಈ ಪೈಕಿ ಇಬ್ಬರು ಬ್ಲ್ಯಾಕ್ ಫಂಗಸ್ನಿಂದ ಮೃತಪಟ್ಟಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಐವರು ಚಿಕಿತ್ಸೆ ಪಡೆಯುತ್ತಿದ್ದಾರೆ. 7 ಜನರು ಬೇರೆಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ವಾರ ಟ್ರಸ್ಟ್ವೆಲ್ ಆಸ್ಪತ್ರೆಯಲ್ಲಿ 38 ಜನರಿಗೆ ಸೋಂಕು ತಗುಲಿದ್ದು, ದಿನಕ್ಕೊಂದು ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಳುತ್ತಿದೆ.
ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ಗೆ ಒಟ್ಟು 9 ಜನ ಬಲಿಯಾಗಿದ್ದಾರೆ. ಬ್ಲ್ಯಾಕ್ ಫಂಗಸ್ ಬಗ್ಗೆ ಮಾಹಿತಿ ಪಡೆಯಲು ಇಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಮಿತಿ ರಚನೆ ಮಾಡಲಿದ್ದಾರೆ. ಇಂದು ನಡೆಯುವ ಸಭೆಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿನ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗುವ ಸಾಧ್ಯತೆಯಿದೆ.
ಹುಬ್ಬಳ್ಳಿಯಲ್ಲೂ ಬ್ಲ್ಯಾಕ್ ಫಂಗಸ್ನಿಂದ ಜನರು ಬಳಲುತ್ತಿದ್ದಾರೆ. 8 ಜನರಿಗೆ ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಕಿಮ್ಸ್ನ ಇಎನ್ಟಿ ವಿಭಾಗದ ಮುಖ್ಯಸ್ಥ ಡಾ.ರವೀಂದ್ರ ಗದಗ ಮಾಹಿತಿ ನೀಡಿದ್ದಾರೆ. ಅರ್ಧ ತಲೆ ನೋವಿನ ಮೂಲಕ ಕಾಣಿಸಿಕೊಳ್ಳುವ ಈ ರೋಗ ಲಕ್ಷಣ ಹೆಚ್ಚಾಗಿ ಮಧುಮೇಹ ಇರುವ ಜನರಲ್ಲಿ ಕಾಣಿಸಿಕೊಳ್ಳುತ್ತದೆ. ಚಿಕಿತ್ಸೆಯ ಖರ್ಚು ಹೆಚ್ಚಾಗಿರುವ ಹಿನ್ನೆಲೆ ಕಿಮ್ಸ್ ನಿರ್ದೇಶಕರು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತನಾಡಿದ್ದಾರೆ.
ಇದು ಮೊದಲಿನಿಂದಲೂ ಇದ್ದ ರೋಗ. ಇದೀಗ ಧಿಡೀರ್ ಕಾಣಿಸಿಕೊಂಡಿದೆ. ಕಿಮ್ಸ್ನಲ್ಲಿ ಅದಕ್ಕೆ ಸರಿಯಾದ ಚಿಕಿತ್ಸೆ ನೀಡಲಾಗುತ್ತಿದೆ. ತಡ ಮಾಡದೆ ಪರೀಕ್ಷಿಸಿಕೊಳ್ಳುವುದು ಉತ್ತಮ. ತಲೆ ನೋವು ಕಾಣಿಸಿಕೊಂಡರೆ ಅಲಕ್ಷ್ಯ ಬೇಡ. ವಯಸ್ಸಿನ ಮಿತಿ ಇಲ್ಲದೆ ಈ ರೋಗ ಬರುತ್ತಿದೆ. ಹೀಗಾಗಿ ಎಲ್ಲರೂ ಜಾಗೃತರಾಗಿರಬೇಕು. ಈ ರೋಗದಿಂದ ಕಣ್ಣು ಹೋಗಬಹುದು. ಜೀವಕ್ಕೂ ಹಾನಿ ಸಾಧ್ಯತೆ ಇದೆ. ಆದರೆ ಯಾರು ಕೂಡ ಭಯ ಪಡುವುದು ಬೇಡ. ಸರಿಯಾದ ವೇಳೆಯಲ್ಲಿ ಬಂದು ಟೆಸ್ಟ್ ಮಾಡಿಸಿ, ಸರಿಯಾದ ಚಿಕಿತ್ಸೆ ಪಡೆಯುವುದು ಉತ್ತಮ ಎಂದು ಡಾ.ರವೀಂದ್ರ ಗದಗ ತಿಳಿಸಿದರು.
ಬಾಗಲಕೋಟೆ ಜಿಲ್ಲೆಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಮೂವರಿಗೆ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. ಕಾನ್ಸ್ಟೇಬಲ್ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಯಾರಿಗೂ ಗಂಭೀರ ಪರಿಸ್ಥಿತಿಯಿಲ್ಲ. ಬ್ಲ್ಯಾಕ್ ಫಂಗಸ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ಮಾಹಿತಿ ನೀಡಿದ್ದಾರೆ.
The black fungus threat is real. In Bengaluru, doctors are reporting a rise in cases of Mucormycosis and seeing that several patients are getting seriously ill with this disease. Dr. Susheen Dutt (Consultant ENT Specialist, Fortis Hospital, Bannerghatta Road) said, “The situation in Bengaluru is critical, with the number of patients coming in for treatment rising day by day. It will not be an exaggeration to say that about 50 patients affected with the black fungus infection are getting operated upon in the city on a daily basis.”
29-03-25 09:19 pm
HK News Desk
Mysuru three drowned, Lake, Ugadi: ಮೈಸೂರು ; ಹ...
29-03-25 03:13 pm
Naxal Karanataka, Anti Naxal Force: ನಕ್ಸಲ್ ನಿ...
28-03-25 10:47 pm
Minister Rajanna, honeytrap, Son, Murder atte...
28-03-25 12:19 pm
Yatnal expulsion, Ramesh Jarkiholi: ಯತ್ನಾಳ್...
27-03-25 06:41 pm
29-03-25 04:40 pm
HK News Desk
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
Elon Musk, Fraud India: ವಿಶ್ವದ ನಂಬರ್ 1 ಶ್ರೀಮಂ...
28-03-25 01:38 pm
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
30-03-25 11:02 pm
Mangaluru HK Staff
Mangalore, Ullal Netravati Bridge Repair, Tra...
30-03-25 03:07 pm
Kumapla, Mangalore, Crime: ಲಕೋಟೆಯಲ್ಲಿ ಸಂಸ್ಕರಿ...
30-03-25 02:39 pm
Mangalore CM Medal, Anupam Agrawal, Police Ma...
29-03-25 11:04 pm
MLC Ivan D'Souza, Mangalore: 7ನೇ ವೇತನ ಆಯೋಗ ;...
29-03-25 10:07 pm
30-03-25 08:59 am
Mangaluru Correspondent
ಆಂಧ್ರದಲ್ಲಿ ಪ್ಯಾಸ್ಟರ್ ಪ್ರವೀಣ್ ಕುಮಾರ್ ಸಂಶಯಾಸ್ಪದ...
29-03-25 10:33 pm
Bajrang Dal, Arrest, Cow Transport, Mangalore...
29-03-25 04:02 pm
Mangalore Nandigudde Prostitution case: ನಂದಿಗ...
28-03-25 09:25 pm
Ccb Mangalore, Drugs, Charas, Crime: ಸಿಸಿಬಿ ಪ...
28-03-25 08:37 pm