ಬ್ರೇಕಿಂಗ್ ನ್ಯೂಸ್
28-08-20 02:45 pm Dhruthi Anchan - Correspondant ಕರ್ನಾಟಕ
ಬೆಂಗಳೂರು, ಆಗಸ್ಟ್ 28: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಸಿಬಿಐ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿರುದ್ಧದ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಈ ಮೂಲಕ ಮಾಜಿ ಸಚಿವ ಕೆ.ಜೆ. ಜಾರ್ಜ್ಗೆ ಮತ್ತೆ ಸಂಕಷ್ಟ ಎದುರಾಗಿದೆ.
ನ್ಯಾಯಾಧೀಶ ತ್ಯಾಜರಾಜ್ ಎನ್. ಇನವಳ್ಳಿ ಸಿಬಿಐ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ತಿರಸ್ಕರಿಸಿದ್ದಾರೆ. ಈ ಪ್ರಕರಣದ ಆರೋಪಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದ್ದಾರೆ. ಕೆ.ಜೆ.ಜಾರ್ಜ್, ಪ್ರಣಬ್ ಮೊಹಾಂತಿ, ಎ.ಎಂ.ಪ್ರಸಾದ್ ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿದೆ.
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ರಾಜ್ಯದ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದು ನಂತರದಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಸಿಬಿಐ ಈ ಪ್ರಕರಣದ ತನಿಖೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಿತ್ತು. ಇದನ್ನು ಪ್ರಶ್ನಿಸಿ ಗಣಪತಿ ಅವರ ಪುತ್ರ ನೆಹಾಲ್ ಗಣಪತಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ವಾದ- ಪ್ರತಿವಾದ ಆಲಿಸಿದ ನ್ಯಾಯಾಪೀಠ ಸಿಬಿಐ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ತಿರಸ್ಕರಿಸಿದೆ. ಈ ಮೂಲಕ ಮಾಜಿ ಸಚಿವ ಕೆ.ಜೆ.ಚಾರ್ಜ್, ಎ.ಎಂ ಪ್ರಸಾದ್, ಪ್ರಣಬ್ ಮೊಹಾಂತಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ಗಣಪತಿ ಅವರ ಸಾವಿನ ಪ್ರಕರಣದಲ್ಲಿ ಸಿಬಿಐ ಬಿ ರಿಪೋರ್ಟ್ ಸಲ್ಲಿಸಿರುವುದಕ್ಕೆ ವಿಶೇಷ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ಆತ್ಮಹತ್ಯೆ ಪ್ರಚೋದನೆಗೆ ಸಾಕಷ್ಟು ಸಾಕ್ಷಿಗಳಿದ್ದರೂ ಬಿ ರಿಪೋರ್ಟ್ ನೀಡಿರುವುದಕ್ಕೆ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 28ಕ್ಕೆ ಮುಂದೂಡಲಾಗಿದೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm