ಬ್ರೇಕಿಂಗ್ ನ್ಯೂಸ್
29-05-21 05:17 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 29: 'ಸದ್ಯ ಜೂನ್ 7ರವರೆಗೆ ಲಾಕ್ಡೌನ್ ಜಾರಿಯಲ್ಲಿ ಇರಲಿದ್ದು, ಅಲ್ಲಿಯವರೆಗಿನ ಸ್ಥಿತಿಗತಿ ಅವಲೋಕಿಸಿ ಲಾಕ್ಡೌನ್ ವಿಸ್ತರಿಸುವ ಬಗ್ಗೆ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಕೋವಿಡ್ ಪ್ರಕರಣಗಳು ಹೆಚ್ಚಿರುವ ಜಿಲ್ಲೆಗಳಾದ ಮೈಸೂರು, ಹಾಸನ, ಬೆಳಗಾವಿ, ಕಲಬುರ್ಗಿ ಮತ್ತು ವಿಜಯಪುರದ ಸಂಸದರು ಮತ್ತು ಶಾಸಕರ ಜೊತೆ ಶನಿವಾರ ಸುಮಾರು ಎರಡೂವರೆ ಗಂಟೆ ವಿಡಿಯೊ ಸಂವಾದ ನಡೆಸಿದ ಬಳಿಕ ಅವರು ಸುದ್ದಿಗಾರರ ಜೊತೆ ಮಾತನಾಡಿದರು.
ಸಂವಾದದಲ್ಲಿ ಭಾಗವಹಿಸಿದ ಸಂಸದರು, ಶಾಸಕರು ಕೋವಿಡ್ ನಿರ್ವಹಣೆಯ ಜೊತೆಗೆ ತಳಹಂತದ ಹಲವು ಸಮಸ್ಯೆಗಳ ಕುರಿತು ಗಮನ ಸೆಳೆದಿದ್ದಾರೆ. ಅವುಗಳನ್ನು ಶೀಘ್ರವೇ ಬಗೆಹರಿಸಲಾಗುವುದು’ ಎಂದು ಮುಖ್ಯಮಂತ್ರಿ ಹೇಳಿದರು.
ಕೋವಿಡ್ ಪಾಸಿಟಿವಿಟಿ ದರ ಶೇ 10 ಕ್ಕಿಂತ ಕಡಿಮೆ ಮಾಡಲು ಅಗತ್ಯವಾದ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅಲ್ಲದೆ, ಮರಣ ಪ್ರಮಾಣ ರಾಜ್ಯದಲ್ಲಿ ಶೇ 1.7 ರಷ್ಟಿದ್ದು, ಅದನ್ನು ಕಡಿಮೆ ಮಾಡಬೇಕು’ ಎಂದು ಮುಖ್ಯಮಂತ್ರಿ ಸಲಹೆ ನೀಡಿದರು.
ರಾಜ್ಯದಲ್ಲಿ ಒಟ್ಟು ವರದಿಯಾಗುತ್ತಿರುವ ಕೋವಿಡ್ ಪ್ರಕರಣಗಳ ಪೈಕಿ, ಬೆಂಗಳೂರು ನಗರ, ಮೈಸೂರು, ತುಮಕೂರು, ಹಾಸನ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಶೇ 60 ವರದಿಯಾಗುತ್ತಿದೆ. ಇದನ್ನು ಕಡಿಮೆಗೊಳಿಸಬೇಕು. ಸೋಂಕು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದೂ ಸೂಚಿಸಿದರು.
ಕೋವಿಡ್ ಎರಡನೇ ಅಲೆ, ನಿರೀಕ್ಷೆಗೂ ಮೀರಿ ಬಾಧಿಸಿದೆ. ಆದರೆ, ಈಗ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಹಾಗೆಂದು ಕೈಕಟ್ಟಿ ಕುಳಿತುಕೊಳ್ಳುವಂತೆ ಇಲ್ಲ. ಗ್ರಾಮೀಣ ಪ್ರದೇಶದಲ್ಲಿ ಪ್ರಕರಣಗಳ ಪ್ರಮಾಣ ಹೆಚ್ಚಾಗುತ್ತಿದೆ. ಈ ಕುರಿತು ಹೆಚ್ಚಿನ ಗಮನ ಹರಿಸಬೇಕಾಗಿದೆ. ಗ್ರಾಮೀಣ ಭಾಗದಲ್ಲಿ ಸೋಂಕಿತರಿಗೆ ಮನೆಯಲ್ಲೇ ಆರೈಕೆ ನೀಡುವ ಬದಲು ಕೋವಿಡ್ ಆರೈಕೆ ಕೇಂದ್ರಗಳಿಗೆ ದಾಖಲಿಸಲು ಮನವೊಲಿಸಬೇಕು’ ಎಂದು ಮುಖ್ಯಮಂತ್ರಿ ಹೇಳಿದರು.
ಸಂಸದರು ಮತ್ತು ಶಾಸಕರು ಅವರವರ ಕ್ಷೇತ್ರಗಳಲ್ಲಿ ಕೋವಿಡ್ ಪರೀಕ್ಷೆಗಳನ್ನು ನಡೆಸಿ, ಸೋಂಕಿತರನ್ನು ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ದೊರೆಯುವಂತೆ ಮಾಡಬೇಕು. ಇದರಿಂದ ಮರಣ ಪ್ರಮಾಣ ಕಡಿಮೆ ಆಗಲಿದೆ. ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದ ಚಿಕಿತ್ಸಾ ಸೌಲಭ್ಯಗಳು, ಔಷಧ, ಆಮ್ಲಜನಕ, ವಿವಿಧ ಉಪಕರಣಗಳು ಅಗತ್ಯಕ್ಕೆ ಅನುಗುಣವಾಗಿ ಸಮರ್ಪಕವಾಗಿ ಹಂಚಿಕೆಯಾಗಬೇಕು. ಎಲ್ಲಿಯೂ ಸಮಸ್ಯೆ ತಲೆದೋರದಂತೆ ಸಂಪನ್ಮೂಲಗಳ ದಕ್ಷ ಬಳಕೆಯನ್ನು ಖಾತರಿಪಡಿಸಬೇಕು’ ಎಂದೂ ಮುಖ್ಯಮಂತ್ರಿ ಸಲಹೆ ನೀಡಿದರು..
ಆಶಾ ಕಾರ್ಯಕರ್ತೆಯರ ಬಾಕಿ ವೇತನ ಬಿಡುಗಡೆಗೆ ಕ್ರಮ ವಹಿಸಲಾಗಿದೆ. ಎರಡು ಮೂರು ದಿನಗಳಲ್ಲಿಯೇ ವೇತನ ಪಾವತಿ ಆಗಲಿದೆ’ ಎಂದು ಅವರು ತಿಳಿಸಿದರು.
ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ, ಪ್ರತಿ ತಾಲ್ಲೂಕಿಗೆ ತಲಾ ₹25 ಲಕ್ಷ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಅದಕ್ಕೆ ಮುಖ್ಯಮಂತ್ರಿ,‘ಈಗಾಗಲೇ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ₹50 ಲಕ್ಷವನ್ನು ಕೋವಿಡ್ ನಿರ್ವಹಣೆಗೆ ಬಳಕೆ ಮಾಡಲು ಈಗಾಗಲೇ ಅನುಮತಿ ನೀಡಲಾಗಿದೆ. ಅಲ್ಲದೆ ಗ್ರಾಮ ಪಂಚಾಯಿತಿಗಳಿಗೆ ತಲಾ ₹50 ಸಾವಿರ ಬಿಡುಗಡೆ ಮಾಡಲಾಗಿದೆ’ ಎಂದರು.
ವೈದ್ಯರ ಕೊರತೆ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು. ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ, ‘ಈಗಾಗಲೇ 1,200 ವೈದ್ಯರ ನೇಮಕ ಮಾಡಿಕೊಳ್ಳುತ್ತಿದ್ದು, ಶೀಘ್ರವೇ ಸಮಸ್ಯೆ ಬಗೆಹರಿಯಲಿದೆ’ ಎಂದರು.
Indicating that the lockdown to contain Covid in the State may be extended till June 30 as was directed by the Centre, Karnataka Minister Basavaraj Bommai on Saturday said Chief Minister B S Yediyurappa would take a decision after meeting his Ministers. The State is currently under lockdown till June 7.
01-04-25 10:45 pm
HK News Desk
Karnataka diesel price hike: ಹಾಲು, ಟೋಲ್, ಕರೆಂ...
01-04-25 09:35 pm
ರಾಜ್ಯ ಸರ್ಕಾರದಿಂದ ಯುಗಾದಿಗೆ ಬೆಲೆ ಏರಿಕೆ ಕೊಡುಗೆ ;...
01-04-25 03:49 pm
Karnataka toll hike, Milk: ರಾಜ್ಯದ ಜನತೆಗೆ ಎಪ್ರ...
01-04-25 12:26 pm
ಕಳೆದ 11 ವರ್ಷಗಳಿಂದ ನೀವೇ ಅಧಿಕಾರದಲ್ಲಿ ಮೊಳೆ ಹೊಡೆ...
31-03-25 07:41 pm
31-03-25 09:34 pm
HK News Desk
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
01-04-25 09:38 pm
Mangalore Correspondent
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
Belthangady Accident, Mangalore: ಯಕ್ಷಗಾನ ಮುಗಿ...
31-03-25 12:26 pm
CCB Police, CM Medal, Mangalore: ಮಂಗಳೂರು ಪೊಲೀ...
30-03-25 11:02 pm
01-04-25 11:07 pm
Mangalore Correspondent
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm
Mangalore Muda Commissioner, FIR, Noor Zahara...
31-03-25 09:29 pm
Mangalore Derlakatte Robbery attempt; ದೇರಳಕಟ್...
30-03-25 08:59 am