ಬ್ರೇಕಿಂಗ್ ನ್ಯೂಸ್
05-07-21 12:18 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 5: ತುಳು ಭಾಷೆ ಸ್ವಂತ ಲಿಪಿ ಇರುವ ಭಾಷೆ. ಸಮೃದ್ಧ ಸಂಸ್ಕೃತಿಯನ್ನು ಹೊಂದಿರುವ ಭಾಷೆ. ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕೆಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಒತ್ತಾಯಿಸಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, 'ಹದಿನೈದನೆಯ ಶತಮಾನದ ವರೆಗೆ ಸ್ವಂತ ಲಿಪಿಯನ್ನು ಹೊಂದಿದ್ದ ಭಾಷೆ ತುಳು. 19 ಲಕ್ಷಕ್ಕೂ ಅಧಿಕ ಮಂದಿಗೆ ತುಳು ಮಾತೃಭಾಷೆಯಾಗಿದೆ. ಮುಖ್ಯವಾಗಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ ಮತ್ತು ಮಡಿಕೇರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ಕೆಲವು ಭಾಗಗಳಲ್ಲಿ ವ್ಯವಹಾರದ ಭಾಷೆಯಾಗಿ ತುಳು ಬಳಸಲ್ಪಡುತ್ತದೆ' ಎಂದು ತಿಳಿಸಿದ್ದಾರೆ.
ಐತಿಹಾಸಿಕ ಹಾಗೂ ಸಾಂಸ್ಕೃತಿಕ ಅಸ್ಮಿತೆಯ ತುಳು ಭಾಷೆಯನ್ನು ಭಾರತ ಸಂವಿಧಾನದ 8ನೆಯ ಪರಿಚ್ಛೇದಕ್ಕೆ ಸೇರಿಸುವುದು ತುಳು ಭಾಷೆಯ, ಭಾಷಿಕರ ಸಂಸ್ಕೃತಿ ಹಾಗೂ ಸಾಂಸ್ಕೃತಿಕ ಅಸ್ಮಿತೆಯನ್ನು ಬೆಳೆಸುವಲ್ಲಿ ಹಾಗೆಯೇ ಇದು ತುಳು ಲಿಪಿಯ ಪುನರುತ್ಥಾನದಲ್ಲಿಯೂ ಪ್ರಮುಖ ಪಾತ್ರ ವಹಿಸಲಿದೆ. #TuluTo8thSchedule
— C T Ravi 🇮🇳 ಸಿ ಟಿ ರವಿ (@CTRavi_BJP) July 4, 2021
2/2
'ಐತಿಹಾಸಿಕ ಹಾಗೂ ಸಾಂಸ್ಕೃತಿಕ ಅಸ್ಮಿತೆ ಹೊಂದಿರುವ ತುಳು ಭಾಷೆಯನ್ನು ಭಾರತದ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು. ಇದು ತುಳು ಭಾಷಿಕರ ಸಂಸ್ಕೃತಿ ಹಾಗೂ ಸಾಂಸ್ಕೃತಿಕ ಅಸ್ಮಿತೆಯನ್ನು ಬೆಳೆಸುವಲ್ಲಿ ಸಹಕಾರಿಯಾಗಲಿದೆ. ಹಾಗೆಯೇ, ತುಳು ಲಿಪಿಯ ಪುನರುತ್ಥಾನದಲ್ಲಿಯೂ ಪ್ರಮುಖ ಪಾತ್ರ ವಹಿಸಲಿದೆ' ಎಂದು ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ.
ಈ ಮೂಲಕ ತುಳು ಭಾಷಿಗ ಹೊರತಾದ ಆಡಳಿತ ಪಕ್ಷದಲ್ಲಿರುವ ರಾಷ್ಟ್ರ ಮಟ್ಟದ ಮುಖಂಡರೊಬ್ಬರು, ತುಳು ಭಾಷೆ ಸಂವಿಧಾನದಡಿ ಸೇರ್ಪಡೆಯಾಗಬೇಕೆಂಬ ನೆಲೆಯಲ್ಲಿ ತುಳುವರು ನಡೆಸುತ್ತಿರುವ ಹಕ್ಕೊತ್ತಾಯದ ಧ್ವನಿಗೆ ಬೆಂಬಲ ಸಾರಿದ್ದಾರೆ.
Various organizations initiated a Twitter campaign demanding official language status to include Include Tulu in the Eighth Schedule CT Ravi supports initiative on Twitter.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 12:19 pm
HK News Staffer
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm