ಬ್ರೇಕಿಂಗ್ ನ್ಯೂಸ್
14-07-21 05:10 pm Headline Karnataka News Network ಕರ್ನಾಟಕ
ಮೈಸೂರು, ಜುಲೈ 14: ಲಾಕ್ಡೌನ್ ತೆರವಾದ ಬಳಿಕ ರಾಜ್ಯದಲ್ಲಿ ಶೇ 15ರಿಂದ 20ರಷ್ಟು ಅಪರಾಧ ಪ್ರಕರಣಗಳು ಹೆಚ್ಚಾಗಿವೆ. ಇವುಗಳಲ್ಲಿ ಮಾದಕ ವಸ್ತು ಮತ್ತು ಸೈಬರ್ ಅಪರಾಧಗಳೂ ಸೇರಿವೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸಿಂಥೆಟಿಕ್ ಸ್ವರೂಪದ ಮಾದಕ ವಸ್ತು ಸಣ್ಣ ಪೇಪರಿನ ರೂಪದಲ್ಲಿ ಅಂಚೆಯ ಮೂಲಕ ರವಾನೆಯಾಗುತ್ತಿವೆ. ಈ ಕುರಿತ ಮಾಹಿತಿಗಳು ‘ಡಾರ್ಕ್ವೆಬ್’ನಲ್ಲಿ ವಿನಿಮಯವಾಗುತ್ತಿವೆ. ಕರ್ನಾಟಕ ಪೊಲೀಸರು ಡಾರ್ಕ್ವೆಬ್ನ್ನು ನಿಯಮಿತವಾಗಿ ಮೊದಲ ಬಾರಿಗೆ ಬೇಧಿಸಿ ಮಾಹಿತಿ ಪಡೆದು, ದಾಳಿಗಳನ್ನು ನಡೆಸುತ್ತಿದ್ದಾರೆ’ ಎಂದು ಅವರು ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
‘ಮಾದಕ ವಸ್ತು ಪ್ರಕರಣಗಳಿಗೆ ಸಂಬಂಧಿಸಿದಂತೆ ಒಂದು ವರ್ಷದಲ್ಲಿ 15ರಿಂದ 20 ಮಂದಿ ವಿದೇಶಿಯರನ್ನು ಬಂಧಿಸಲಾಗಿದೆ. ‘ಎನ್ಡಿಪಿಎಸ್’ ಕಾನೂನಿನ ನಿಯಮಗಳಿಗೆ ತಿದ್ದುಪಡಿ ತಂದು, ಬಂಧಿತರಿಗೆ ಕನಿಷ್ಠ 1 ವರ್ಷಗಳ ಕಾಲ ಅಥವಾ ತನಿಖೆ ಪೂರ್ಣಗೊಳ್ಳುವವರೆಗೂ ಜಾಮೀನು ಸಿಗದಂತೆ ಮಾಡುವ ಪ್ರಸ್ತಾವ ಇದೆ. ದೇಶದಲ್ಲೇ ಹೆಚ್ಚು ಮಾದಕವಸ್ತುಗಳನ್ನು ಕರ್ನಾಟಕ ಪೊಲೀಸರು ವಶಕ್ಕೆ ಪಡೆದಿದ್ದಾರೆ’ ಎಂದು ತಿಳಿಸಿದರು.
ಸೈಬರ್ ಅಪರಾಧ ಪ್ರಕರಣಗಳನ್ನು ಬೇಧಿಸಲು ಬೆಂಗಳೂರಿನ ಪೊಲೀಸರು ‘ಆ್ಯಪ್’ ರೂಪಿಸಿದ್ದಾರೆ. ‘ಎಫ್ಐಆರ್’ ದಾಖಲಾಗುವುದಕ್ಕೂ ಮುನ್ನವೇ ಹಣ ವರ್ಗಾವಣೆಯಾಗುವ ಬ್ಯಾಂಕ್ ಖಾತೆಯನ್ನು ಮುಟ್ಟುಗೋಲು ಹಾಕಿಕೊಂಡು, ಒಂದು ತಿಂಗಳಿನಲ್ಲಿ ₹40 ಕೋಟಿಯಷ್ಟು ಹಣವು ವಂಚಕರ ಕೈಗೆ ಸಿಗದಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇಂತಹ ವ್ಯವಸ್ಥೆ ಮೈಸೂರಿನಲ್ಲಿಯೂ ರೂಪಿಸಬೇಕು’ ಎಂದರು.
ಸಂಚಾರ ನಿಯಮ ಉಲ್ಲಂಘನೆಯಿಂದ ಸಂಗ್ರಹವಾದ ಹಣವನ್ನು ರಸ್ತೆ ಸುರಕ್ಷತೆಗೆ ಹಾಗೂ ಅಭಿವೃದ್ಧಿಗೆ ಬಳಕೆ ಮಾಡಲು ನೇರವಾಗಿ ಪೊಲೀಸ್ ಇಲಾಖೆಗೆ ನೀಡಬೇಕು’ ಎಂದು ಹಣಕಾಸು ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದರು.
ಕಾಲೇಜುಗಳು ಆರಂಭವಾದ ಬಳಿಕ ವಿದ್ಯಾರ್ಥಿನಿಯರಿಗೆ ಮಾನಸಿಕ, ದೈಹಿಕ ಸದೃಢತೆ ಕಾಪಾಡಿಕೊಳ್ಳಲು ತರಬೇತಿ ನೀಡಲಾಗುವುದು. ಪೊಲೀಸರ ತರಬೇತಿಗಾಗಿ ‘ನ್ಯಾಷನಲ್ ಡಿಫೆನ್ಸ್ ಅಕಾಡೆಮಿ’ ಮಾದರಿಯಲ್ಲಿ ‘ಆಫಿಸರ್ಸ್ ಟ್ರೈನಿಂಗ್ ಅಕಾಡೆಮಿ’ ಸ್ಥಾಪಿಸಲಾಗುವುದು. ಪೊಲೀಸ್ ತರಬೇತಿಯ ಪಠ್ಯಕ್ರಮ ಬದಲಾವಣೆಗೆ ಸಮಿತಿ ರಚಿಸಲಾಗುವುದು’ ಎಂದು ತಿಳಿಸಿದರು.
Crime rates increased by 15 to 20 percent after lockdown opened says Home Minister Basavaraj Bommai during a review meeting held in Mysore.
10-07-25 09:53 pm
Bangalore Correspondent
ED Raid Congress MLA Subba Reddy: ಮಲೇಶ್ಯಾ, ಬ್...
10-07-25 12:45 pm
ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ ; ಅರ್ಧ ನ...
09-07-25 10:45 pm
Chamarajanagar Heart Attack, Student; 'ಹೃದಯ"ಕ...
09-07-25 04:12 pm
ಬೆಂಗಳೂರಿನಲ್ಲಿ ಐದು ಕಡೆ ಎನ್ಐಎ ದಾಳಿ ; ಭಯೋತ್ಪಾದಕ...
09-07-25 01:53 pm
10-07-25 11:07 pm
HK News Desk
Bangle Seller, Changur Baba Arrest, Uttar Pra...
10-07-25 03:24 pm
Amit Shah; ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್...
10-07-25 01:00 pm
ಗೋಮಾಂಸ ತಿನ್ನಿಸಿ ಮತಾಂತರಕ್ಕೆ ಯತ್ನ ; ಫೇಸ್ಬುಕ್ಕಲ್...
07-07-25 08:45 pm
ಅಮೆರಿಕದ ಟೆಕ್ಸಾಸ್ನಲ್ಲಿ ಭೀಕರ ಪ್ರವಾಹ ; 28 ಮಕ್ಕಳ...
07-07-25 04:11 pm
10-07-25 07:23 pm
Mangalore Correspondent
Mangalore, Traffic Constable, Lokayukta, Tasl...
10-07-25 04:01 pm
ಮಂಗಳೂರಿನ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ನವ...
09-07-25 10:25 pm
Mangalore Home Minister Parameshwara, Peace M...
09-07-25 10:17 pm
Peace Meeting, Mangalore, Brijesh Chowta, Ash...
09-07-25 09:01 pm
10-07-25 08:09 pm
HK News Desk
Kerala Couple, Chit Fund Scam; ಚಿಟ್ ಫಂಡ್ ಹೆಸರ...
10-07-25 01:05 pm
Double Murder Hassan, crime: ಆಸ್ತಿ ವಿಚಾರಕ್ಕೆ...
10-07-25 12:04 pm
Drugs News, Mangalore: ಮಂಗಳೂರಿಗೆ ಡ್ರಗ್ಸ್ ಪೂರೈ...
09-07-25 10:56 pm
Kerala Chit Fund, Fraud, Mangalore: 20 ವರ್ಷಗಳ...
08-07-25 10:01 pm