ಬ್ರೇಕಿಂಗ್ ನ್ಯೂಸ್
15-07-21 12:46 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 15: ವಿರೋಧಿ ಗುಂಪಿನ ನಾಯಕತ್ವ ಬದಲಾವಣೆ ಕೂಗಿನ ನಡುವೆಯೇ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತೆ ದೆಹಲಿಗೆ ತೆರಳಲು ರೆಡಿಯಾಗಿದ್ದಾರೆ.
ಹಲವು ಲೆಕ್ಕಾಚಾರಗಳನ್ನು ಇಟ್ಟುಕೊಂಡು ಯಡಿಯೂರಪ್ಪ ಇಂದು ಅಥವಾ ನಾಳೆ ದೆಹಲಿಗೆ ತೆರಳಲು ಅಣಿಯಾಗಿದ್ದಾರೆ. ಆದರೆ, ಸಿಎಂ ದಿಲ್ಲಿ ಪ್ರವಾಸ ಇಡೀ ಬಿಜೆಪಿ ನಾಯಕರ ಕಣ್ಣು ನೆಡುವಂತೆ ಮಾಡಿದ್ದು ಯಡಿಯೂರಪ್ಪ ಅವರು ಯಾವ ಲೆಕ್ಕಾಚಾರ ಇಟ್ಟುಕೊಂಡು ರಾಷ್ಟ್ರ ರಾಜಧಾನಿಗೆ ಹಾರಿದ್ದಾರೆ ಎಂದು ಕುತೂಹಲದಿಂದ ನೋಡುತ್ತಿದ್ದಾರೆ.

ಸಿಎಂ ಕಚೇರಿಯ ಮೂಲಗಳ ಪ್ರಕಾರ, ಮೇಕೆದಾಟು ಯೋಜನೆ, ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳು, ಲಸಿಕೆ ಹೆಚ್ಚುವರಿ, ಬಾಕಿ ಜಿಎಸ್ಟಿ ಅನುದಾನ ಸಂಬಂಧ ಚರ್ಚೆಗೆ ತೆರಳುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಭೇಟಿ ಈ ವಿಚಾರಕ್ಕೆ ಮಾತ್ರ ಸಂಬಂಧಪಟ್ಟಿದ್ದಲ್ಲ ಎಂಬುದು ರಾಜಕೀಯ ಲೆಕ್ಕಾಚಾರ.
ಕಳೆದ ಜನವರಿ 10 ರಂದು ದೆಹಲಿಗೆ ಹೋಗಿದ್ದ ಯಡಿಯೂರಪ್ಪ ಅವರು ಅಲ್ಲಿಂದ ಮರಳಿದಾಗ ಶಾಂಕಿಂಗ್ ನ್ಯೂಸ್ ಹರಿದಾಡಿತ್ತು. ನಾಯಕತ್ವ ಬದಲಾವಣೆಗೆ ಯಡಿಯೂರಪ್ಪ ಅವರು ಒಪ್ಪಿದ್ದಾರೆ ಎನ್ನುವ ಚರ್ಚೆಗೆ ನಾಂದಿ ಹಾಡಿತ್ತು. ಆದರೆ ಆನಂತರ ಆ ರೀತಿಯ ಊಹಾಪೋಹಗಳು ಠುಸ್ ಆಗಿದ್ದವು.
ಇದೀಗ ಮತ್ತೆ ಆರು ತಿಂಗಳ ಬಳಿಕ ದೆಹಲಿ ಭೇಟಿಗೆ ಮುಂದಾಗಿರುವ ಯಡಿಯೂರಪ್ಪ ಅವರು ಯಾವೆಲ್ಲ ವಿಚಾರದಲ್ಲಿ ಚರ್ಚೆ ನಡೆಸಲಿದ್ದಾರೆ ಎಂಬ ಕುತೂಹಲ ಗರಿಗೆದರಿದೆ. ಪ್ರಧಾನಿ ಮೋದಿ ಮತ್ತು ಅಮಿತ್ ಷಾರನ್ನು ಭೇಟಿಯಾಗುವ ನಿಟ್ಟಿನಲ್ಲಿ ಯಡಿಯೂರಪ್ಪ ತೆರಳುತ್ತಿದ್ದಾರೆ ಎನ್ನಲಾಗಿದೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 12:19 pm
HK News Staffer
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm