ಬ್ರೇಕಿಂಗ್ ನ್ಯೂಸ್
19-07-21 08:46 pm Headline Karnataka News Network ಕರ್ನಾಟಕ
ರಾಯಚೂರು, ಜುಲೈ 19: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದೇ ಆದರೆ ಬಿಜೆಪಿ ಬಹುದೊಡ್ಡ ಪರಿಣಾಮ ಎದುರಿಸಲಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಶ್ರೀ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದ್ದಾರೆ.
ರಾಯಚೂರಿನ ಕಿಲ್ಲೆ ಬೃಹನ್ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, ರಾಜಕೀಯ ಕ್ಷೇತ್ರ ಎನ್ನುವುದು ಸಂಘರ್ಷವಿದ್ದಂತೆ. ಅಧಿಕಾರದ ವಿಚಾರಕ್ಕೆ ಅಥವಾ ಬಿ.ಎಸ್.ಯಡಿಯೂರಪ್ಪನವರ ಸಿಎಂ ಸ್ಥಾನಕ್ಕೆ ಹೆಚ್ಚು ಕಡಿಮೆಯಾದ್ರೆ, ಭಾರತೀಯ ಜನತಾ ಪಾರ್ಟಿಗೆ ಬಹುದೊಡ್ಡ ಪರಿಣಾಮ ಬೀರಲಿದೆ. ಬಿ.ಎಸ್.ವೈ ಅವರು ಇಳಿ ವಯಸ್ಸಿನಲ್ಲೂ ಒಳ್ಳೆಯ ಕೆಲಸ ಮಾಡುತ್ತಿದ್ದು, ಎಲ್ಲಾ ಜಾತಿ ಜನಾಂಗದವರನ್ನು ಸಮಾನವಾಗಿ ಬೆಂಬಲಿಸಿ ಆಡಳಿತ ನಡೆಸುತ್ತಿರುವುದನ್ನು ಕಾಣುತ್ತೇವೆ. ಸರ್ಕಾರ ಅಧಿಕಾರಕ್ಕೆ ಬಂದ್ಮೇಲೆ ನೆರೆ ಹಾವಳಿ ಅಪ್ಪಳಿಸಿತ್ತು. ಆದಮೇಲೆ ಕೋವಿಡ್ ಆವರಿಸಿತ್ತು. ಇದು ಎಲ್ಲವನ್ನೂ ತಮ್ಮ ಇಳಿ ವಯಸ್ಸಿನಲ್ಲಿ ಸಮರ್ಥವಾಗಿ ಕೆಲಸ ನಿಭಾಯಿಸಿದ್ದಾರೆ.
ಹೀಗಾಗಿ ಬಿಜೆಪಿಯ ರಾಷ್ಟ್ರೀಯ ನಾಯಕರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಅಧಿಕಾರ ಪೂರ್ತಿಗೊಳಿಸುವ ವರೆಗೆ ಮುಂದುವರೆಸುವ ವಿಶ್ವಾಸವಿದೆ. ಬಿಎಸ್ ವೈ ಅವರಿಗೆ ಸುತ್ತೂರು ಶ್ರೀಗಳು, ಆದಿಚುಂಚನಗಿರಿ ಸೇರಿದಂತೆ ಹಲವು ಮಠಾಧೀಶರು ಬೆಂಬಲಿಸಿದ್ದಾರೆ. ಅವರ ಅವಧಿಯಲ್ಲಿ ಮಠ, ಮಂದಿರ, ಮಸೀದಿಗಳು, ಚರ್ಚುಗಳ ಅಭಿವೃದ್ದಿಗಾಗಿ ಅನುದಾನ ಸಹ ನೀಡುವ ಮೂಲಕ ಜನಪರ ನಾಯಕರಾಗಿದ್ದಾರೆ. ಸದ್ಯ ನಮಗೆ ವಿಶ್ವಾಸವಿದೆ, ಅವರನ್ನು ಬಿಜೆಪಿ ರಾಷ್ಟ್ರೀಯ ನಾಯಕರು ಮುಂದುವರಿಸುತ್ತಾರೆ ಅಂತ. ಆದರೆ ಯಾವುದೇ ರೀತಿ ಅವರನ್ನು ಕೆಳಗಿಳಿಸುವ ಪ್ರಯತ್ನ ಮಾಡಿದರೆ ಅದರಿಂದ ಕೆಟ್ಟ ಪರಿಣಾಮ ಎದುರಿಸಲಿದ್ದಾರೆ ಎಂದು ಹೇಳಿದರು.
If Yediyurappa steps down as Karnataka CM BJP will face massive problem says Rambhapuri Shri.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 12:19 pm
HK News Staffer
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm