ಬ್ರೇಕಿಂಗ್ ನ್ಯೂಸ್
03-09-20 06:07 pm Headline Karnataka News Network ಕರ್ನಾಟಕ
ಚಾಮರಾಜನಗರ, ಸೆಪ್ಟೆಂಬರ್ 3: ಅಕ್ರಮ ಮರಳು ಸಾಗಾಣಿಕೆಗೆ ಸಹಕರಿಸಿ, ಮರಳು ಲಾರಿಯ ಅಪಘಾತ ಪ್ರಕರಣವನ್ನು ತಿರುಚಿ ಕರ್ತವ್ಯಲೋಪ ಎಸಗಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಚಾಮರಾಜನಗರದ ಡಿವೈಎಸ್ಪಿ ಮೋಹನ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಡಿವೈಎಸ್ಪಿ ಜೆ.ಮೋಹನ್ ಅವರನ್ನು ಅಮಾನತುಗೊಳಿಸಲಾಗಿದೆ. ಕೆ.ಎಸ್.ಪಿ(ಡಿಪಿ) ನಿಯಮಗಳ 1965/89ರ ನಿಯಮ 5ರ ಅನ್ವಯ ಶಿಸ್ತು ಕ್ರಮ ಬಾಕಿ ಇರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಸರ್ಕಾರದ ಒಳಾಡಳಿತ ಇಲಾಖೆಯ (ಪೊಲೀಸ್ ಸೇವೆಗಳು) ಅಧೀನ ಕಾರ್ಯದರ್ಶಿ ಬಿ.ಕೆ ಭುವನೇಂದ್ರ ಕುಮಾರ್ ಈ ಆದೇಶ ಹೊರಡಿಸಿದ್ದಾರೆ.

ಮೇ 15 ರಂದು ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಚಾಮರಾಜನಗರ ತಾಲೋಕಿನ ಮಾದಾಪುರದ ಬಳಿ ನಿಂತಿತ್ತು. ವಿಷಯ ಗೊತ್ತಾಗಿ ಚಾಮರಾಜನಗರ ಗ್ರಾಮಾಂತರ ಸರ್ಕಲ್ ಇನ್ಸ್ ಪೆಕ್ಟರ್ ಮಂಜು ತಮ್ಮ ಜೀಪಿನಲ್ಲಿ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಪೊಲೀಸ್ ಜೀಪ್ ನೋಡಿದ ಚಾಲಕ ಟಿಪ್ಪರ್ ಲಾರಿಯಿಂದ ಇಳಿದು ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಎದುರಿನಿಂದ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದ.
ಆದರೆ ಅಕ್ರಮ ಮರಳು ಸಾಗಾಣಿಕೆ ವಿಚಾರ ಮೇಲಾಧಿಕಾರಿಗಳಿಗೆ ತಿಳಿದರೆ ತಮಗೆ ತೊಂದರೆಯಾಗುತ್ತದೆ ಎಂದು ಟಿಪ್ಪರ್ ನಲ್ಲಿದ್ದ ಮರಳನ್ನು ರಸ್ತೆ ಬದಿ ಸುರಿದು ಎಂ ಸ್ಯಾಂಡ್ ಸಾಗಾಣಿಕೆಯಾಗುತ್ತಿತ್ತು ಎಂದು ಬಿಂಬಿಸಲಾಗಿತ್ತು ಎಂಬ ಆರೋಪ ಪೊಲೀಸರ ಮೇಲೆ ಕೇಳಿ ಬಂದಿತ್ತು. ಈ ಆರೋಪದ ಮೇರೆಗೆ ಈಗಾಗಲೇ ಚಾಮರಾಜನಗರ ಗ್ರಾಮಾಂತರ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎಂ ಮಂಜು, ಪೂರ್ವ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಎಸ್.ಪಿ ಸುನೀಲ್ ಹಾಗೂ ಹೆಡ್ ಕಾನ್ಸ್ ಟೇಬಲ್ ನಾಗ ನಾಯಕ ಎಂಬುವರನ್ನು ಅಮಾನತು ಮಾಡಲಾಗಿದೆ.
ಪೊಲೀಸರು ಯಾರಿಗೋ ಸಹಾಯ ಮಾಡಲು ತನಿಖೆಯನ್ನು ಸರಿಯಾಗಿ ಮಾಡದೆ ಕರ್ತವ್ಯ ಲೋಪ ಎಸಗಿದ್ದರು ಎಂಬ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದಿದ್ದವು. ಈ ಹಿನ್ನಲೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿತಾಹದ್ದಣ್ಣನವರ್ ಮೇ 25 ರಂದು ಸಲ್ಲಿಸಿದ್ಡರು. ಡಿವೈಎಸ್ಪಿ ಜೆ.ಮೋಹನ್ ಗ್ರಾಮಾಂತರ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎಂ ಮಂಜು, ಪೂರ್ವ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಎಸ್.ಪಿ ಸುನೀಲ್ ಅಕ್ರಮ ಮರಳು ಸಾಗಾಣಿಕೆದಾರರೊಂದಿಗೆ ಕೈ ಜೋಡಿಸಿದ್ದಾರೆ. ಜೊತೆಗೆ ತಮ್ಮ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆಗೆ ಅನುವು ಮಾಡಿಕೊಟ್ಟು ಮರಳು ಟಿಪ್ಪರ್ ಲಾರಿ ಅಫಘಾತವಾದರೂ ತಮಗೆ ಸಮಸ್ಯೆಯಾಗಲಿದೆ ಎಂದು ಟಿಪ್ಪರ್ ಲಾರಿಯಲ್ಲಿದ್ದ ಮರಳನ್ನು ತೆರವುಗೊಳಿಸಿ, ಆ ಟಿಪ್ಪರ್ ಲಾರಿಗೆ ಎಂ.ಸ್ಯಾಂಡ್ ತುಂಬಿ ಮೂಲಕ ಪ್ರಕರಣ ತಿರುಚಲು ಪ್ರಯತ್ನಿಸಿ ಕರ್ತವ್ಯಲೋಪ ಎಸಗಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿತ್ತು.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm