ಬ್ರೇಕಿಂಗ್ ನ್ಯೂಸ್
27-07-21 04:44 pm Headline Karnataka News Network ಕರ್ನಾಟಕ
ರಾಮನಗರ, ಜುಲೈ 27: ಮುಂದೆ ಜೆಡಿಎಸ್ ಗೆ ಒಳ್ಳೆಯ ಭವಿಷ್ಯ ಇದೆ. ನಾನು ಎರಡು ಬಾರಿಯೂ ಅದೃಷ್ಟದಿಂದಲೇ ಸಿಎಂ ಆಗಿದ್ದೆ. ಜನರ ಆರ್ಶೀವಾದದಿಂದ ನಾನು ಸಿಎಂ ಆಗಲಿಲ್ಲ. ಆದರೆ ಮುಂದೆ ನನಗೆ ವಿಶ್ವಾಸವಿದೆ, ತಾಯಿ ಚಾಮುಂಡೇಶ್ವರಿ ನನಗೆ ಅಧಿಕಾರ ಕೊಡ್ತಾಳೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ರಾಮನಗರದ ಶಕ್ತಿದೇವತೆ ಚಾಮುಂಡೇಶ್ವರಿ ದೇವಿ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರಿಗೆ ಮಾತನಾಡಿದ್ದಾರೆ. ರಾಜ್ಯದ ಜನರ ಪರವಾಗಿ ಜೆಡಿಎಸ್ ಕೆಲಸ ಮಾಡಲಿದೆ. ಜೆಡಿಎಸ್ ಮುಗಿದೇ ಹೋಯ್ತು ಎನ್ನುವವರಿಗೆ ಮುಂದೆ ಉತ್ತರ ಸಿಗಲಿದೆ. ತಾಯಿ ಚಾಮುಂಡೇಶ್ವರಿ ಜೆಡಿಎಸ್ ಗೆ ಅಧಿಕಾರ ಕೊಡ್ತಾಳೆ ಎನ್ನುವ ವಿಶ್ವಾಸ ಇದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿ ಅಚ್ಚರಿ ಮೂಡಿಸಿದ್ದಾರೆ. ಬಿಜೆಪಿಯಲ್ಲಿ ರಾಜಕೀಯ ಬೆಳವಣಿಗೆ ಆಗುತ್ತಿರುವ ಮಧ್ಯೆ ಅಗತ್ಯ ಬಿದ್ದರೆ ಜೆಡಿಎಸ್ ಬೆಂಬಲ ಪಡೆಯಲಿದ್ದಾರೆ ಎಂಬ ಸುದ್ದಿಯ ನಡುವೆ ಈ ರೀತಿ ಹೇಳಿಕೆ ಕೊಟ್ಟಿದ್ದು ಅಚ್ಚರಿಗೆ ಕಾರಣವಾಗಿದೆ.
ಬಿಜೆಪಿಯ ಹೊಸ ಸಿಎಂ ಆಯ್ಕೆ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಅದು ಅವರ ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈಗಾಗಲೇ ಪ್ರಧಾನಿ ಮೋದಿಯವರು ರಾಜ್ಯದ ಬಗ್ಗೆ ಮಾಹಿತಿ ಪಡೆದಿರುತ್ತಾರೆ. ಹಾಗಾಗಿ ಯಾರು ಸಿಎಂ ಆಗಬೇಕೆಂದು ಅವರ ಪಕ್ಷ ನಿರ್ಧಾರ ಮಾಡಲಿದೆ ಎಂದು ಹೇಳಿದರು.
ಯಡಿಯೂರಪ್ಪ ಪರವಾಗಿ ಕಾಂಗ್ರೆಸ್ ನಾಯಕರ ಬ್ಯಾಟಿಂಗ್ ಮಾಡುತ್ತಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಇದು ಒಂದು ಸಮುದಾಯದ ಓಲೈಕೆಗಾಗಿ ಮಾಡ್ತಿರುವ ಪ್ರಯತ್ನ. ಈಗಾಗಲೇ ಮುಂದಿನ ಸಿಎಂ ಗೆ ಟವೆಲ್ ಹಾಕಿರುವವರು ಹೇಳ್ತಾರೆ. ಈಗಿದ್ದ ಸಿಎಂ ಭ್ರಷ್ಟರು, ಮುಂದೆ ಬರುವವರು ಭ್ರಷ್ಟರೇ ಎಂದು ಹೇಳ್ತಾರೆ. ಆದರೆ ಮತ್ತೊಬ್ಬರು ಯಡಿಯೂರಪ್ಪ ಪರವಾಗಿ ಮಾತನಾಡ್ತಾರೆ. ಆದರೆ ಈಗ ಅವರ ಪರವಾಗಿ ಮಾತನಾಡ್ತಿರೋದು ಸಮುದಾಯದ ಓಲೈಕೆಗಾಗಿ ಅಷ್ಟೇ ಎಂದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಹೆಸರೆತ್ತದೆ ಟಾಂಗ್ ನೀಡಿದ್ದಾರೆ.
ಈ ಬೆಳವಣಿಗೆಯನ್ನ ಜೆಡಿಎಸ್ ಲಾಭದ ಬಗ್ಗೆ ಚಿಂತನೆ ಮಾಡಲ್ಲ. ಜನರ ಪರವಾಗಿ ಸರ್ಕಾರ ಚಿಂತಿಸಲಿ ಎಂದು ಹೇಳ್ತೇನೆ. ಈ ರೀತಿಯ ಬೆಳವಣಿಗೆಯಿಂದ ಜನರಿಗೆ ಪೆಟ್ಟಾಗಬಾರದು ಎಂದು ಹೇಳಿದರು.
Chamundi will give me position once again in politics says HDK in Ramnagara.
15-04-25 12:51 pm
HK News Desk
Hubballi encounter, PSI Annapurna: ಹುಬ್ಬಳ್ಳಿ...
14-04-25 09:48 pm
Bangalore Suicide: ಅಪಾರ್ಟ್ಮೆಂಟ್ನ ನಾಲ್ಕನೇ ಮಹ...
14-04-25 07:51 pm
Kannada comedy actor Bank Janardhan, Death: ಕ...
14-04-25 03:09 pm
SIT, Probe, Dysp Kanakalakshmi: ಸಿಐಡಿ ಡಿವೈಎಸ್...
14-04-25 02:06 pm
15-04-25 04:40 pm
HK News Desk
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
Waqf clashes: ವಕ್ಫ್ ವಿರುದ್ಧ ಬೀದಿಗಿಳಿದ ಜನರು ;...
12-04-25 09:01 pm
14-04-25 09:20 pm
Mangalore Correspondent
Drowning Ullal, Mangalore: ಉಳ್ಳಾಲದಲ್ಲಿ ಸಮುದ್ರ...
13-04-25 05:20 pm
ಮಂಗಳೂರಿಗೆ ಮತ್ತೊಂದು ವಂದೇ ಭಾರತ್ ರೈಲು ; ಪ್ರತ್ಯೇಕ...
13-04-25 01:27 pm
Siddaramaiah, caste census, Somanna: ಜಾತಿಗಣತಿ...
12-04-25 10:13 pm
Mangalore Kambala, Dk Shivakumar: ಮುಂದಿನ ವರ್ಷ...
12-04-25 09:43 pm
15-04-25 06:17 pm
HK News Desk
Mangalore Crime, Fire: ಕುಡಿದ ಮತ್ತಿನಲ್ಲಿ ಏಸಿಡ್...
15-04-25 05:13 pm
Mangalore CCB, Drugs, Crime: ಮಂಗಳೂರು ಸಿಸಿಬಿ ಪ...
12-04-25 10:52 pm
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm
Cyber Command Centre, Bangalore: ದೇಶದ ಮೊದಲ ಸೈ...
11-04-25 04:38 pm