ಬ್ರೇಕಿಂಗ್ ನ್ಯೂಸ್
27-07-21 09:10 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 27: ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ ಬಸವರಾಜ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ ನೀಡಿದ್ದು ರೈತ, ಬಡವರು, ಹಿಂದುಳಿದವರು, ದೀನ ದಲಿತರ ರಕ್ಷಣೆಯೇ ನಮ್ಮ ಸರ್ಕಾರದ ಹೊಣೆ. ಕೋವಿಡ್ 19 ಬಗ್ಗೆ ಮೊದಲಿಗೆ ಗಮನ ಹರಿದ ಬೇಕಿದೆ ಎಂದಿದ್ದಾರೆ.
ಸಂಸದೀಯ ಮಂಡಳಿ ಸಭೆಯಲ್ಲಿ ತೀರ್ಮಾನ ಕೈಗೊಂಡಂತೆ ಶಾಸಕಾಂಗ ಸಭೆ ಕರೆದು ಸಿಎಂ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ. ನನ್ನ ಹೆಸರನ್ನು ಸೂಚಿಸುವ ಮೂಲಕ ಯಡಿಯೂರಪ್ಪ ಅವರು ನನಗೆ ಆಶೀರ್ವಾದ ಮಾಡಿದ್ದಾರೆ.
ಕರ್ನಾಟಕ ಸರ್ಕಾರವನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ಹಗಲಿರುಳು ಶ್ರಮಿಸುತ್ತೇನೆ. ನನ್ನನ್ನು ಆಯ್ಕೆ ಮಾಡಿದ ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೆ ನಾನು ಆಭಾರಿಯಾಗಿದ್ದೇನೆ. ಶಾಸಕರು ನನ್ನ ಮೇಲೆ ನಂಬಿಕೆ ಇಟ್ಟು ಆಯ್ಕೆ ಮಾಡಿದ್ದಾರೆ. ನಾನು ನಂಬಿಕೆ ಹುಸಿಗೊಳಿಸಲ್ಲ ಎಂದಿದ್ದಾರೆ.
ಪಕ್ಷದ ನಾಯಕರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ, ನನ್ನನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿರುವುದಕ್ಕೆ ಪಕ್ಷದ ಎಲ್ಲಾ ಶಾಸಕರಿಗೆ ಹೃದಯಪೂರ್ವ ಧನ್ಯವಾದಗಳು. ನನ್ನ ಹೆಸರು ಸೂಚಿಸಿ ಯಡಿಯೂರಪ್ಪ ಅವರು ಆಶೀರ್ವಾದ ಮಾಡಿದ್ದಾರೆ ಎಂದಿರುವ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾಗೆ ಧನ್ಯವಾದ ಸಲ್ಲಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಆರ್.ಬೊಮ್ಮಾಯಿ ಅವರ ಪುತ್ರನಾಗಿರುವ ಅವರು, ಜನತಾದಳದಿಂದ ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದರು. 2008ರಿಂದ ಸತತ ಮೂರು ಬಾರಿ ಶಿಗ್ಗಾಂವ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದು, ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ ಮತ್ತು ಜಗದೀಶ ಶೆಟ್ಟರ್ ಸಿಎಂ ಆಗಿದ್ದ ವೇಳೆ ಐದು ವರ್ಷ ಜಲಸಂಪನ್ಮೂಲ ಖಾತೆ ನಿರ್ವಹಣೆ ಮಾಡಿದ ಅನುಭವ ಹೊಂದಿದ್ದಾರೆ.
ಅಷ್ಟೇ ಅಲ್ಲದೆ ಯಡಿಯೂರಪ್ಪ ಸರಕಾರದಲ್ಲಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರ, ಶಾಸನ ರಚನಾ ಸಚಿವರಾಗಿ ಕೆಲಸ ಮಾಡಿದ್ದಾರೆ. ಹಾವೇರಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಕೆಲಸ ನಿರ್ವಹಿಸಿದ್ದರು. ಅನುಭವ ಮತ್ತು ಲಿಂಗಾಯತ ಕೋಟಾ ಅನುಸಾರ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಪರಿಗಣಿಸಲಾಗಿದೆ. ಅಲ್ಲದೆ, ಬಿಎಸ್ವೈ ಅವರನ್ನು ಪದಚ್ಯುತಿಗೊಳಿಸಿದ ಅಪಕೀರ್ತಿ ತಪ್ಪಿಸಲು ಅವರ ಆಪ್ತನನ್ನೇ ಸಿಎಂ ಮಾಡಲಾಗಿದೆ ಎನ್ನಲಾಗುತ್ತಿದೆ.
The Karnataka BJP legislature party on Tuesday elected Basavaraj Bommai as its new leader and he will succeed outgoing Chief Minister BS Yediyurappa.
15-04-25 12:51 pm
HK News Desk
Hubballi encounter, PSI Annapurna: ಹುಬ್ಬಳ್ಳಿ...
14-04-25 09:48 pm
Bangalore Suicide: ಅಪಾರ್ಟ್ಮೆಂಟ್ನ ನಾಲ್ಕನೇ ಮಹ...
14-04-25 07:51 pm
Kannada comedy actor Bank Janardhan, Death: ಕ...
14-04-25 03:09 pm
SIT, Probe, Dysp Kanakalakshmi: ಸಿಐಡಿ ಡಿವೈಎಸ್...
14-04-25 02:06 pm
15-04-25 04:40 pm
HK News Desk
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
Waqf clashes: ವಕ್ಫ್ ವಿರುದ್ಧ ಬೀದಿಗಿಳಿದ ಜನರು ;...
12-04-25 09:01 pm
14-04-25 09:20 pm
Mangalore Correspondent
Drowning Ullal, Mangalore: ಉಳ್ಳಾಲದಲ್ಲಿ ಸಮುದ್ರ...
13-04-25 05:20 pm
ಮಂಗಳೂರಿಗೆ ಮತ್ತೊಂದು ವಂದೇ ಭಾರತ್ ರೈಲು ; ಪ್ರತ್ಯೇಕ...
13-04-25 01:27 pm
Siddaramaiah, caste census, Somanna: ಜಾತಿಗಣತಿ...
12-04-25 10:13 pm
Mangalore Kambala, Dk Shivakumar: ಮುಂದಿನ ವರ್ಷ...
12-04-25 09:43 pm
15-04-25 06:17 pm
HK News Desk
Mangalore Crime, Fire: ಕುಡಿದ ಮತ್ತಿನಲ್ಲಿ ಏಸಿಡ್...
15-04-25 05:13 pm
Mangalore CCB, Drugs, Crime: ಮಂಗಳೂರು ಸಿಸಿಬಿ ಪ...
12-04-25 10:52 pm
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm
Cyber Command Centre, Bangalore: ದೇಶದ ಮೊದಲ ಸೈ...
11-04-25 04:38 pm