ಬ್ರೇಕಿಂಗ್ ನ್ಯೂಸ್
04-09-20 05:15 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 4: ಮತ್ತೆ ಸಂಪುಟ ವಿಸ್ತರಣೆ ವಿಚಾರ ಮುನ್ನೆಲೆಗೆ ಬಂದಿದೆ. ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿರುವ ಮಂದಿಗೆ ಕೊನೆಗೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಮುಂದಿನ ವಾರದಲ್ಲಿ ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದು ಸಚಿವ ಸಂಪುಟ ವಿಸ್ತರಣೆಗೆ ಅಸ್ತು ಹೇಳಿಸಿಕೊಂಡು ಬರಲಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಮೂಲಗಳ ಪ್ರಕಾರ, ಸಿಎಂ ಯಡಿಯೂರಪ್ಪ ಪಿತೃಪಕ್ಷಕ್ಕಾಗಿ ಕಾಯುತ್ತಿದ್ದಾರೆ ಎನ್ನಲಾಗುತ್ತಿದೆ. ಆನಂತ್ರವೇ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆಯಿದೆ. ಹಾಗೆ ಆದಲ್ಲಿ ಸೆಪ್ಟಂಬರ್ 17 ಕ್ಕೆ ಪಿತೃ ಪಕ್ಷ ಮುಗಿಯುತ್ತದೆ. ಇದಾದ ಬಳಿಕ ಅಂದರೆ ಸೆ.18- 19ರ ವೇಳೆಗೆ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ನಿಚ್ಚಳ ಎನ್ನಲಾಗ್ತಿದೆ. ಅದಕ್ಕೂ ಮುನ್ನ ಸೆ.13 ಅಥವಾ 14 ಕ್ಕೆ ಬಿ.ಎಸ್ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ. ವರಿಷ್ಠರ ಜೊತೆಗೆ ಮಾತುಕತೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಸಂಪುಟಕ್ಕೆ ಸೇರ್ಪಡೆಗೊಳ್ಳಲು ಸಾಕಷ್ಟು ಜನ ಆಕಾಂಕ್ಷಿಗಳಿದ್ದಾರೆ. ವಲಸಿಗರ ಪೈಕಿ ಎಂಟಿಬಿ ನಾಗರಾಜ್, ಆರ್. ಶಂಕರ್ ಹಾಗೂ ಎಚ್. ವಿಶ್ವನಾಥ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಈ ಪೈಕಿ ಎಂಬಿಟಿ ಹಾಗೂ ಆರ್. ಶಂಕರ್ಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಹೆಚ್ಚು. ಅಲ್ಲದೆ, ಮೂಲ ಬಿಜೆಪಿಯಿಂದ ಅರವಿಂದ ಲಿಂಬಾವಳಿ ಹಾಗೂ ಉಮೇಶ್ ಕತ್ತಿಗೆ ಮಂತ್ರಿ ಸ್ಥಾನ ಸಿಗಲಿದೆ ಎನ್ನಲಾಗ್ತಿದೆ.
ಸಂಪುಟ ವಿಸ್ತರಣೆಯ ಮಾತು ಬಂದಾಗ, ಪುನಾರಚನೆ ಆಗಬೇಕು ಎಂಬ ಕೂಗು ಕೇಳಿಬಂದಿತ್ತು. ಈ ವಿಚಾರ ಸಾಕಷ್ಟು ಚರ್ಚೆಗೂ ಕಾರಣವಾಗಿತ್ತು. ಆದರೆ ಸದ್ಯ ವಿಸ್ತರಣೆಯನ್ನು ಮಾಡಿ ಡಿಸೆಂಬರ್ ಕೊನೆಯಲ್ಲಿ ಪುನಾರಚನೆ ಮಾಡುವ ಸಾಧ್ಯತೆ ಇದೆ ಎನ್ನುತ್ತದೆ ಮಾಹಿತಿ. ಈ ನಡುವೆ ಮಂತ್ರಿ ಸ್ಥಾನವನ್ನು ಪಡೆದುಕೊಳ್ಳಲು ಬೇರೆ ಬೇರೆ ಕಡೆಯಿಂದ ಪೈಪೋಟಿಯೂ ಶುರುವಾಗಿದೆ. ಸಚಿವ ಸ್ಥಾನಕ್ಕಾಗಿ ತೆರೆಮರೆಯಲ್ಲಿ ಲಾಬಿ ನಡೆಸುತ್ತಿದ್ದು ಕೊನೆಕ್ಷಣದಲ್ಲಿ ಯಾರಿಗೆ ಸ್ಥಾನ ಸಿಗಬಹುದು ಎಂಬುದನ್ನು ಈಗಲೇ ಹೇಳುವಂತಿಲ್ಲ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm