ಬ್ರೇಕಿಂಗ್ ನ್ಯೂಸ್
09-08-21 05:47 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 9: ಈ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಬಿಡುಗಡೆಯಾಗಿದ್ದು ಶೇ.99.09 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 157 ಮಂದಿ ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.
ಕೊರೊನಾ ಆತಂಕದ ನಡುವೆ ಜುಲೈ 19 ಮತ್ತು 22ರಂದು ಎರಡೇ ದಿನದಲ್ಲಿ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಅಬ್ಜೆಕ್ಟಿವ್ ಆಗಿದ್ದ ಪ್ರಶ್ನೆ ಪತ್ರಿಕೆಯ ಮೂಲಕ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸೀಮಿತವಾಗಿ ಮುಗಿಸಲಾಗಿತ್ತು. ಒಬ್ಬಳು ವಿದ್ಯಾರ್ಥಿನಿ ಬೇರೆಯವರ ಮೂಲಕ ಪರೀಕ್ಷೆ ಬರೆಸಿದ್ದರಿಂದ ಆಕೆಯನ್ನು ಫೈಲ್ ಮಾಡಿದ್ದು ಬಿಟ್ಟರೆ ಉಳಿದೆಲ್ಲರೂ ಪಾಸ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 8,71,443 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಈ ಬಾರಿ ಅಂಕಗಳನ್ನು ಗ್ರೇಡ್ ಆಧಾರದಲ್ಲಿ ನೀಡಲಾಗಿದ್ದು, ಎ, ಎ ಪ್ಲಸ್, ಬಿ, ಸಿ ಹೀಗೆ ಅಂಕಗಳ ಆಧಾರದಲ್ಲಿ ಗ್ರೇಡ್ ಕೊಡಲಾಗಿದೆ. 2,50,317 ಮಂದಿ ಎ ಗ್ರೇಡ್ ನಲ್ಲಿ ಪಾಸ್ ಆಗಿದ್ದರೆ, ಬಿ ಗ್ರೇಡ್ ನಲ್ಲಿ 2,87,694 ಮಂದಿ ತೇರ್ಗಡೆಯಾಗಿದ್ದಾರೆ. ಇತರ ಶೇ. 9 ಮಂದಿ ವಿದ್ಯಾರ್ಥಿಗಳಿಗೆ ಸಿ ಗ್ರೇಡ್ ನೀಡಲಾಗಿದೆ.
265ರಿಂದ 625 ಅಂಕ ಪಡೆದವರಿಗೆ ಎ ಪ್ಲಸ್ ಗ್ರೇಡ್ ನೀಡಲಾಗಿದೆ. 437ರಿಂದ 499 ಅಂಕ ಪಡೆದವರಿಗೆ ಬಿ ಪ್ಲಸ್ ಗ್ರೇಡ್ ನೀಡಲಾಗಿದೆ. ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬಳ್ಳಾರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. ಸೆಪ್ಟಂಬರ್ ಮೂರನೇ ವಾರದಲ್ಲಿ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಸುದ್ದಿಗೋಷ್ಟಿ ನಡೆಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
SSLC Results 2021 Announced on Monday August 9 says new Education Minister BC Nagesh
25-07-25 04:07 pm
Bangalore Correspondent
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
ಕಾಲ್ತುಳಿತ ಪ್ರಕರಣ ; ಆರ್ ಸಿಬಿ, ಡಿಎನ್ಎ, ಕೆಎಸ್ ಸಿ...
24-07-25 08:01 pm
25-07-25 04:40 pm
HK News Desk
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
ಕುಡುಬಿ ಸಮುದಾಯ ಎಸ್ಸಿ ಪಟ್ಟಿಗೆ ಸೇರಿಸಲು ರಾಜ್ಯದಿಂದ...
22-07-25 07:21 pm
25-07-25 08:25 pm
Mangalore Correspondent
DIG Anucheth Mangalore, SIT Dharmasthala: ಎಸ್...
25-07-25 06:05 pm
Udupi: ಸೊಸೈಟಿಗೆ ಅಡಿಟ್ ಮಾಡಿಕೊಡಲು ಲಂಚ ಬೇಡಿಕೆ ;...
25-07-25 02:25 pm
Terrorist Yasin Bhatkal, Mangalore: 2008ರ ಉಳ್...
24-07-25 10:26 pm
Dharmasthala Case, Investigation, Advocate,...
24-07-25 05:27 pm
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am